ಕರ್ನಾಟಕದಲ್ಲಿ ದಾಖಲೆ ಮಳೆ: ಉ.ಕದಲ್ಲಿ ಮಳೆಯ ಅಭಾವ

ಬೆಂಗಳೂರು, ಜು.4: ಈ ಸಾಲಿನಲ್ಲಿ ರಾಜ್ಯದಲ್ಲಿ ದಾಖಲೆಯ ಮಳೆಯಾಗಿದೆ, 2007ರಿಂದೀಚೆಗೆ ದಾಖಲಾದ ಅಧಿಕ ಮಳೆ ಇದಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಜೂ.1ರಿಂದ ಜುಲೈ 1ರವರೆಗೆ ರಾಜ್ಯದೆಲ್ಲೆಡೆ ಸರಾಸರಿ 236 ಮಿ.ಮೀ ಮಳೆಯಾಗಿದೆ. ಕರಾವಳಿ , ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಜು.6 ರಿಂದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಮುಂಗಾರು ಕರ್ನಾಟಕಕ್ಕೆ ಪ್ರವೇಶಿಸಿದ ಆರಂಭದಲ್ಲೇ ಕರಾವಳಿ, ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಮುಂಗಾರು ಆರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ ಕೂಡ ಸಾಕಷ್ಟು ಮಳೆಯಾಗಿತ್ತು. ಆದರೆ ಮುಂಗಾರು ಕರ್ನಾಟಕಕ್ಕೆ ಪ್ರವೇಶಿಸುತ್ತಿದ್ದಂತೆ ಮಳೆ ಕಡಿಮೆಯಾಗಿದೆ.

Highest rainfall occured after 2007 in Karnataka

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಬಹುತೇಕ ಪ್ರದೇಶಗಳಲ್ಲಿ 11.5 ಸೆಂ.ಮೀ ನಿಂದ 20.4 ಸೆಂ.ಮೀವರೆಗೆ ಮಳೆಯಾಗಿದೆ ಈ ಭಾಗಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಸರಾಸರಿ ಮಳೆ ಪ್ರಮಾಣ ವಾಡಿಕೆಯಷ್ಟೇ ಇದೆ, ಆದರೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ನಿರೀಕ್ಷಿಸಿದ ಮಳೆಯಾಗುತ್ತಿಲ್ಲ. 1 ತಿಂಗಳ ಅವಧಿಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ 105 ಮಿ.ಮೀ ಮಳೆಯಾಗಬೇಕು ಆದರೆ 97 ಮಿ.ಮೀ ಮಳೆಯಾಗಿದ್ದು, ಶೇ.8ರಷ್ಟು ಮಳೆಯ ಕೊರತೆಯಾಗಿದೆ.

ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಮಳೆಯಾಗಿದೆ. ಇನ್ನು ಜು. 6ರಿಂದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ , ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+