ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ದಾಖಲೆ ಮಳೆ: ಉ.ಕದಲ್ಲಿ ಮಳೆಯ ಅಭಾವ

By Nayana
|
Google Oneindia Kannada News

ಬೆಂಗಳೂರು, ಜು.4: ಈ ಸಾಲಿನಲ್ಲಿ ರಾಜ್ಯದಲ್ಲಿ ದಾಖಲೆಯ ಮಳೆಯಾಗಿದೆ, 2007ರಿಂದೀಚೆಗೆ ದಾಖಲಾದ ಅಧಿಕ ಮಳೆ ಇದಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಜೂ.1ರಿಂದ ಜುಲೈ 1ರವರೆಗೆ ರಾಜ್ಯದೆಲ್ಲೆಡೆ ಸರಾಸರಿ 236 ಮಿ.ಮೀ ಮಳೆಯಾಗಿದೆ. ಕರಾವಳಿ , ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಜು.6 ರಿಂದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಜುಲೈ 6ರಿಂದ 8ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ ಸಂಭವ ಜುಲೈ 6ರಿಂದ 8ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ ಸಂಭವ

ಮುಂಗಾರು ಕರ್ನಾಟಕಕ್ಕೆ ಪ್ರವೇಶಿಸಿದ ಆರಂಭದಲ್ಲೇ ಕರಾವಳಿ, ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆ ಆರಂಭವಾಗಿದೆ. ಮುಂಗಾರು ಆರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ ಕೂಡ ಸಾಕಷ್ಟು ಮಳೆಯಾಗಿತ್ತು. ಆದರೆ ಮುಂಗಾರು ಕರ್ನಾಟಕಕ್ಕೆ ಪ್ರವೇಶಿಸುತ್ತಿದ್ದಂತೆ ಮಳೆ ಕಡಿಮೆಯಾಗಿದೆ.

Highest rainfall occured after 2007 in Karnataka

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಬಹುತೇಕ ಪ್ರದೇಶಗಳಲ್ಲಿ 11.5 ಸೆಂ.ಮೀ ನಿಂದ 20.4 ಸೆಂ.ಮೀವರೆಗೆ ಮಳೆಯಾಗಿದೆ ಈ ಭಾಗಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ಕರಾವಳಿಯಲ್ಲಿ ಮಳೆ, ಬೆಂಗಳೂರಿನಲ್ಲಿ ಈಗಲೇ ಸೆಕೆ! ಕರ್ನಾಟಕ ಕರಾವಳಿಯಲ್ಲಿ ಮಳೆ, ಬೆಂಗಳೂರಿನಲ್ಲಿ ಈಗಲೇ ಸೆಕೆ!

ರಾಜ್ಯದ ಸರಾಸರಿ ಮಳೆ ಪ್ರಮಾಣ ವಾಡಿಕೆಯಷ್ಟೇ ಇದೆ, ಆದರೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ನಿರೀಕ್ಷಿಸಿದ ಮಳೆಯಾಗುತ್ತಿಲ್ಲ. 1 ತಿಂಗಳ ಅವಧಿಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ 105 ಮಿ.ಮೀ ಮಳೆಯಾಗಬೇಕು ಆದರೆ 97 ಮಿ.ಮೀ ಮಳೆಯಾಗಿದ್ದು, ಶೇ.8ರಷ್ಟು ಮಳೆಯ ಕೊರತೆಯಾಗಿದೆ.

ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಮಳೆಯಾಗಿದೆ. ಇನ್ನು ಜು. 6ರಿಂದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ , ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

English summary
Karnataka is witnessing highest rainfall after 2007. This is year we had 236 mm average rainfall during June month said Karnataka state Natural Disaster Monitoring Centre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X