Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ದಾಖಲೆ ಮಟ್ಟದ ತಾಪಮಾನ: ಹಲವೆಡೆ ಮಳೆ ಮುನ್ಸೂಚನೆ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ತಾಪಮಾದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದೆ. ಹಾಗೆಯೇ ಈ ಭಾಗಗಳಲ್ಲಿ ಮುಂದಿನ 5 ದಿನ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆಯೂ ಹಲವೆಡೆ ಸಾಧಾರಣ ಮಳೆಯಾಗುತ್ತದೆ. ಹಾಗಾದ್ರೆ ಜಿಲ್ಲಾವಾರು ಹವಾಮಾನದ ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್‌ 06) ಬೆಳಗ್ಗೆ ಮೋಡ ಕವಿದ ವಾತಾರಣ ಇದ್ದು, ಬೆಳಗ್ಗೆ 8 ಗಂಟೆ ಮೇಲೆ ರಣಬಿಸಿಲು ಮುಂದುವರೆದಿದೆ. ಹಾಗಾಯೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Highest Temperature in These Districts for Next 5 Days Rainfall Forecast in Many parts

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ಅಲ್ಲಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಳಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲ್ಯಾಣ ಕರ್ನಾಕದ ಕಲಬುರಗಿ, ಕೊಪ್ಪಳ, ರಾಯಚೂರು ಭಾಗದಲ್ಲಿ ಸತತ ಎರಡ್ಮೂರ ವಾರಗಳಿಂದಲೂ ನಿರಂತರವಾಗಿ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಇದೇ ರೀತಿ ಗದಗ ಜಿಲ್ಲೆಯಲ್ಲೂ ರಣಬಿಸಿಲು ಮುಂದುವರೆದಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಕರ್ನಾಟಕದಲ್ಲೂ ತಾಪಮಾನದಲ್ಲಿ ಏರಿಳಿತ ಕಂಡುಬಂದಿದೆ.

ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ರಾಜ್ಯದ ಉತ್ತರ ಒಳನಾಡಿನ ಭಾಗದಲ್ಲಿ ಉಷ್ಣಾಂಶದಲ್ಲಿ ಏರಿಕೆ ಕಂಡುಬಂದಿದೆ. ಈ ಭಾಗದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯ ಮುನ್ಸೂಚನೆ ಇಲ್ಲ. ನಂತರ ಹೆಚ್ಚಳ ಆಗಬಹುದು. ಮುಂದಿನ 5 ದಿನಗಳವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 33.4 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 20.3 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹೀಗೆ ಬಹುತೇಕ ಜಿಲ್ಲೆಗಳಲ್ಲೂ ಇಂದು ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕಳೆದ ಬಾರಿ ರಾಯಚೂರು, ಕಲಬುರಗಿ, ಬಳ್ಳಾರಿ ಭಾಗದಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ಆದರೆ ಈ ಬಾರಿ ಇದು ಉಲ್ಟಾ ಆಗಿದ್ದು, ಕರಾವಳಿ ಕರ್ನಾಟಕ ಭಾಗದಲ್ಲೇ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ಇನ್ನೂ ಈ ಬಾರಿ ಬೇಸಿಗೆಗೂ ಮುನ್ನ ದಾಖಲೆ ಮಟ್ಟದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ.

ಅಲ್ಲದೆ ಕಳೆದ ವರ್ಷ ಅಂದರೆ 2024ರಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ನದಿ, ಕೆರೆ, ಕಟ್ಟೆಗಳು, ಜಲಾಶಯಗಳು ಭರ್ತಿಯಾಗಿದ್ದು ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಹಾಗೆಯೇ ಈ ವರ್ಷ ಅಂದರೆ 2025ರಲ್ಲಿಯೂ ಮುಂಗಾರು ಮಳೆ ಆರ್ಭಟಿಸಲಿದೆ ಎನ್ನುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+