ಕರ್ನಾಟಕ ಬಿಜೆಪಿ ವಿಶೇಷ ಸಭೆಯಲ್ಲಿ ನಡೆದ ಚರ್ಚೆಗಳೇನು?

Recommended Video

      ಬಿ ಎಸ ವೈ ನೇತೃತ್ವದಲ್ಲಿ ಸೆಪ್ಟೆಂಬರ್ 19ರಂದು ಕರ್ನಾಟಕ ಬಿಜೆಪಿ ವಿಶೇಷ ಸಭೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 19 : ಕರ್ನಾಟಕ ಕಾಂಗ್ರೆಸ್‌ನಲ್ಲಿನ ಬೆಳವಣಿಗೆಗಳ ನಡುವೆಯೇ ಬೆಂಗಳೂರಿನಲ್ಲಿ ಬಿಜೆಪಿಯ ವಿಶೇಷ ಸಭೆ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ನಾಯಕರು ಪಾಲ್ಗೊಂಡಿದ್ದರು.

      ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಬಿಜೆಪಿಯ ರಾಜ್ಯ ಮಟ್ಟದ ವಿಶೇಷ ಸಭೆ ನಡೆಯಿತು. ಪಕ್ಷದ ಶಾಸಕರು, ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

      'ಬಿಜೆಪಿಯ ಹತ್ತು ಶಾಸಕರು ನಮ್ಮ ಜೊತೆ ಇದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಾರೆ. ಅಧಿಕಾರವನ್ನು ಉಳಿಸಿಕೊಳ್ಳಲು ಅವರು ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ' ಎಂದು ಯಡಿಯೂರಪ್ಪ ದೂರಿದರು.

      ರಾಜ್ಯ ಮಟ್ಟದ ಈ ಸಭೆಗೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ್ ಹೆಗಡೆ ಗೈರು ಹಾಜರಾಗಿದ್ದರು. ಸಭೆಯಲ್ಲಿ ಪಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆದಿದೆ.

      ಜನರ ಕೆಲಸ ಆಗುತ್ತಿಲ್ಲ

      ಜನರ ಕೆಲಸ ಆಗುತ್ತಿಲ್ಲ

      ವಿಶೇಷ ಸಭೆ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಉಂಟಾಗಿದೆ. ಜನಹಿತ ಕಾರ್ಯಗಳು ನಡೆಯುತ್ತಿಲ್ಲ. ಶಾಸಕರ ಕ್ಷೇತ್ರಗಳಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ' ಎಂದು ಆರೋಪಿಸಿದರು.

      ವೇದಿಕೆಯ ಮೇಲೆ ಯಡಿಯೂರಪ್ಪ ಅವರು ಶೂ ಕಳಚಿಟ್ಟು ಬರಿಗಾಲಿನಲ್ಲಿ ಓಡಾಡುತ್ತಿದ್ದರು. ಭಾಷಣ ಮಾಡುವಾಗಲೂ ಅವರು ಬರಿಗಾಲಿನಲ್ಲಿ ಇದ್ದಿದ್ದು, ಕುತೂಹಲಕ್ಕೆ ಕಾರಣವಾಯಿತು.

      ಅಪ್ಪ-ಮಕ್ಕಳಿಂದ ವರ್ಗಾವಣೆ ದಂಧೆ

      ಅಪ್ಪ-ಮಕ್ಕಳಿಂದ ವರ್ಗಾವಣೆ ದಂಧೆ

      'ಮಾಜಿ ಸಚಿವ ಎ.ಮಂಜು ಅವರು ದೇವೇಗೌಡರ ಕುಟುಂಬದ ಭೂ ಹಗರಣವನ್ನು ಬಹಿರಂಗ ಮಾಡಿದ್ದಾರೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ನಾವು ಹೋರಾಟ ನಡೆಸುತ್ತೇವೆ' ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

      'ಅಪ್ಪ-ಮಕ್ಕಳು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಅನೇಕ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆದ್ದರಿಂದ, ಗೃಹ ಸಚಿವ ಪರಮೇಶ್ವರ ಅವರು ಬೇಸರಿಂದ ಮಾತನಾಡುತ್ತಿಲ್ಲ, ಮೌನ ವಹಿಸಿದ್ದಾರೆ' ಎಂದು ಯಡಿಯೂರಪ್ಪ ಆರೋಪ ಮಾಡಿದರು.

      ಕಮೀಷನ್ ಏಜೆಂಟ್‌ ಆಗಿದ್ದಾರೆ

      ಕಮೀಷನ್ ಏಜೆಂಟ್‌ ಆಗಿದ್ದಾರೆ

      'ನೀರಾವರಿ ಮತ್ತು ಲೋಕೋಪಯೋಗಿ ಸಚಿವರು ಕಮೀಷನ್ ಏಜೆಂಟ್‌ ಆಗಿದ್ದಾರೆ. 8 ರಿಂದ 10 ಪರ್ಸೆಂಟ್ ಕಮೀಷನ್ ಇಲ್ಲದೇ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಕಮೀಷನ್ ಏಜೆಂಟರಂತೆ ಸರ್ಕಾರ ಕಾರ್ಯ ನಿರ್ವಹಣೆ ಮಾಡುತ್ತಿದೆ' ಎಂದು ಯಡಿಯೂರಪ್ಪ ಆರೋಪಿಸಿದರು.

      ಚೆಸ್ ಹೇಗೆ ಆಡಬೇಕು ಗೊತ್ತಿದೆ

      ಚೆಸ್ ಹೇಗೆ ಆಡಬೇಕು ಗೊತ್ತಿದೆ

      ಬಿ.ಎಸ್.ಯಡಿಯೂರಪ್ಪ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ದ ವಾಗ್ದಾಳಿಯನ್ನು ನಡೆಸಿದರು. 'ಡಿ.ಕೆ.ಶಿವಕುಮಾರ್ ತಾವು ಹೇಗೆ ಪಾನ್ ಮೂವ್ ಮಾಡಬೇಕು ಎಂದು ಗೊತ್ತಿದೆ ಎಂದು ಹೇಳಿದ್ದಾರೆ. ಎದುರಾಳಿಯೇ ಇಲ್ಲದೇ ಯಾರ ಜೊತೆ ಚೆಸ್ ಆಡುತ್ತಾರೆ?. ಮೊದಲು ಜವಾಬ್ದಾರಿಯಿಂದ ಮಾತನಾಡುವುದನ್ನು ಅವರು ಕಲಿಯಲಿ' ಎಂದು ಸಲಹೆ ನೀಡಿದರು.

      ಅಧಿಕಾರ ಉಳಿಸಿಕೊಳ್ಳಲು ಹೋರಾಟ

      ಅಧಿಕಾರ ಉಳಿಸಿಕೊಳ್ಳಲು ಹೋರಾಟ

      'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರವನ್ನು ಉಳಿಸಿಕೊಳ್ಳಲು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ. ಮೊನ್ನೆ ಕಲಬುರಗಿಗೆ ಹೋದಾಗ ನಮ್ಮ ಶಾಸಕ ಸುಭಾಷ್ ಗುತ್ತೇದಾರ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಅದಕ್ಕೆ ನಮ್ಮ ಜೊತೆ ಬಿಜೆಪಿಯ 10 ಶಾಸಕರು ಇದ್ದಾರೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ' ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+