ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ, ಗೃಹ ಸಚಿವ ಜ್ಞಾನೇಂದ್ರ ನಿರಂತರ ಸಭೆ ಯಾಕೆ?

|
Google Oneindia Kannada News

ಬೆಂಗಳೂರು, ಆ. 10: ಕಳೆದೆರಡು ದಿನಗಳಿಂದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಹಾಗೂ ಗೃಹ ಸಚಿವರು ನಿರಂತರ ಸಭೆಗಳನ್ನು ಮಾಡುತ್ತಿದ್ದಾರೆ. ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಗೃಹ ಇಲಾಖೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ತೆಗೆದು ಕೊಂಡಿದ್ದರು. ಮಂಗಳವಾರ ಹಿಂದಿನ ಗೃಹ ಸಚಿವ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಹಲವು ಖಡಕ್ ಸೂಚನೆಗಳನ್ನು ಪೊಲೀಸ್ ಇಲಾಖೆಗೆ ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ ಎಂಬ ಮಾಹಿತಿಯಿದೆ. ಅಷ್ಟಕ್ಕೂ ಗೃಹ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರ ನಿರಂತರ ಸಭೆ ಮಾಡುತ್ತಿರುವುದರ ಹಿಂದೆ ಮಹತ್ವದ ಕಾರಣವಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಮಿತಿ ಮೀರುತ್ತಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಹಿಂದೆ ವಿಧಾನ ಮಂಡಲ ಅಧಿವೇಶನದಲ್ಲೂ ಚರ್ಚೆ ಆಗಿತ್ತು. ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ, ಬಳಿಕ ಮೈತ್ರಿ ಸರ್ಕಾರ ಹಾಗೂ ಈಗಿನ ಬಿಜೆಪಿ ಸರ್ಕಾರದ ಆಡಳಿತ ಸಂದರ್ಭದಲ್ಲಿ ಈ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದೆ. ಆಫ್ರಿಕಾದ ದೇಶಗಳಿಂದ ಶಿಕ್ಷಣ ಹಾಗೂ ಉದ್ಯೋಗಕ್ಕೆಂದು ಬಂದವರು ಇಲ್ಲಿಯೆ ಉಳಿಯುತ್ತಿದ್ದಾರೆ. ಅವರು ಡ್ರಗ್ಸ್‌ ದಂಧೆಯಲ್ಲಿ ಪಾಲುದಾರರಾಗುತ್ತಿದ್ದಾರೆ. ಈ ಹಿಂದೆ ಉತ್ತರ ಕರ್ನಾಟಕದ ಧಾರವಾಡದಲ್ಲಿ ಶಿಕ್ಷಣಕ್ಕಾಗಿ ದಕ್ಷಿಣ ಆಫ್ರಿಕಾ, ಕೇನ್ಯಾ ಸೇರಿದಂತೆ ಆಫ್ರಿಕಾ ಖಂಡದಿಂದ ವಿದ್ಯಾರ್ಥಿಗಳು ಬರುತ್ತಿದ್ದರು. ಈಗ ಅವರಲ್ಲಿ ಬೆಂಗಳೂರಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಶಿಕ್ಷಣ ಮುಗಿದ ಬಳಿಕವೂ ಹಲವರು ಇಲ್ಲಿಯೇ ಉಳಿಯುತ್ತಿದ್ದಾರೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕೆ ಸಿಕ್ಕಿದೆ.

ಇತ್ತೀಚಿಗಷ್ಟೆ ಪೊಲೀಸರ ವಶದಲ್ಲಿದ್ದ ಕಾಂಗೋ ದೇಶದ ಪ್ರಜೆಯೊಬ್ಬ ಮೃತಪಟ್ಟಿದ್ದ. ಆತನು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆಂದು ಆತನ ಸ್ನೇಹಿತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಡಗ್ಸ್‌ ಪ್ರಕರಣಗಳಲ್ಲಿ ವಿದೇಶಿ ಪ್ರಜೆಗಳ ಪ್ರಮಾಣ ಕಳೆದ ಎರಡೂವರೆ ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಗೃಹ ಇಲಾಖೆ ವರದಿ ಹೇಳುತ್ತಿದೆ. ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕದಿದ್ದರೆ ಅಂತಾರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಬ್ರಾಂಡ್ ಹೆಸರು ಹಾಳಾಗುವುದು ಖಚಿತ. ಹಾಗಾಗದಂತೆ ತಡೆಯಲು ರಾಜ್ಯ ಸರ್ಕಾರ ಖಡಕ್ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಅದಕ್ಕಾಗಿಯೇ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಸಿಎಂ ಹಾಗೂ ಗೃಹ ಸಚಿವರು ಮಾಡುತ್ತಿದ್ದಾರೆ ಎಂಬ ಮಾಹಿತಿಯಿದೆ. ಅಷ್ಟಕ್ಕೂ ಈ ಆಫ್ರಿಕನ್ ಪ್ರಜೆಗಳೂ ಸೇರಿದಂತೆ ವಿದೇಶಿಗರು ಡ್ರಗ್ಸ್‌ ದಂಧೆಯ ಕುರಿತು ಸರ್ಕಾರ ಕೊಟ್ಟಿರುವ ಸೂಚನೆ ಏನು? ಮುಂದಿದೆ.

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆಯಾ ಡ್ರಗ್ ಮಾಫಿಯಾ?

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆಯಾ ಡ್ರಗ್ ಮಾಫಿಯಾ?

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಿತಿ ಮೀರುತ್ತಿದೆ. ಇದೇ ವಿಚಾರ ಹಿಂದೆ ವಿಧಾನ ಮಂಡಲ ಅಧಿವೇಶನದಲ್ಲೂ ಚರ್ಚೆ ಆಗಿತ್ತು. ಇದೇ ಹಿನ್ನೆಲೆಯಲ್ಲಿ ಸತತ ಎರಡು ದಿನಗಳಿಂದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ಸಿಎಂ ಹಾಗೂ ಗೃಹ ಸಚಿವರು ನಡಸುತ್ತಿದ್ದಾರೆ.

ಒಂದು ಮೂಲದ ಪ್ರಕಾರ ಬೆಂಗಳೂರಿನಲ್ಲಿ ಹಾಗೂ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಹಾವಳಿ ತೀರಾ ಹೆಚ್ಚಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿದು ಬಂದಿದೆ. ಜೊತೆಗೆ ವಿದೇಶಿ ವಲಸಿಗರ ಸಮಸ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಎಂಬ ಮಾಹಿತಿಯಿದೆ. ಗುಪ್ತಚರ ಇಲಾಖೆಯ ಮಾಹಿತಿನ ಆಧರಿಸಿ ಸಿಎಂ ಹಾಗೂ ಗೃಹ ಸಚಿವರು ಸಭೆ ಮಾಡಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಬ್ರಾಂಡ್ ಬೆಂಗಳೂರು ಹೆಸರು ಹಾಳಾಗಬಹುದು. ಅದಾಗುವ ಮೊದಲು ಇಡೀ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ತೀರ್ಮಾನ ಮಾಡಿದೆ. ಅದಕ್ಕಾಗಿ ಮುಂದಿನ ಕ್ರಮಗಳನ್ನು ಕೈಗೊಂಡಿದೆ.

ಡ್ರಗ್ಸ್‌:ದೇಶಿಗರೊಂದಿಗೆ ಸ್ಥಳೀಯರು ಶಾಮೀಲು?

ಡ್ರಗ್ಸ್‌:ದೇಶಿಗರೊಂದಿಗೆ ಸ್ಥಳೀಯರು ಶಾಮೀಲು?

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರುಗಳೊಂದಿಗಿನ ಸಭೆಯಲ್ಲಿ ಪ್ರಮುಖವಾಗಿ ಅಕ್ರಮ ವಲಸಿಗರ ಬಗ್ಗೆ ಹೆಚ್ಚಿನ ಚರ್ಚೆಯಾಗಿದೆ ಎಂಬ ಮಾಹಿತಿಯಿದೆ. ಈ ಬಗ್ಗೆ ಅಧಿಕಾರಿಗಳಿಂದ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳು ಎಷ್ಟಿದ್ದಾರೆ? ಅವರೆಲ್ಲರ ಗುರತು ಪತ್ತೆ ಲಭ್ಯವಿದೆಯೇ? ಹೊರಗಿನಿಂದ ಬಂದವರ ಮೇಲೆ ಕಣ್ಣಿಟ್ಟಿದ್ದೀರಾ? ಅವರು ಎಲ್ಲಿ ಹೋಗುತ್ತಾರೆ? ಏನು ಮಾಡುತ್ತಾರೆ ಎಂಬುದನ್ನು ಗಮನಿಸುತ್ತಿದ್ದೀರಾ? ಎಂಬ ಮಾಹಿತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಂದ ಕೇಳಿದ್ದಾರೆ ಎಂಬ ಮಾಹಿತಿ ಬಂದಿದೆ.

ದಕ್ಷಿಣ ಆಫ್ರಿಕಾ ಮೂಲದವರ ಸಮಸ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಬಗ್ಗೆಯೂ ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರುಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ. "ಆಫ್ರಿಕಾದ ಅದರಲ್ಲಿಯೂ ಆಫ್ರಿಕಾದ ದಕ್ಷಿಣ ಭಾಗದವರ ಉಪಟಳ ಬೆಂಗಳೂರಿನಲ್ಲಿ ಹೆಚ್ಚಾಗಿದೆ ಎಂದು ಮಾಧ್ಯಮಗಳಲ್ಲಿ ನಿರಂತರವಾಗಿ ಸುದ್ದಿಯಾಗುತ್ತಿದೆ. ಅವರ ಪುಂಡಾಟಿಕೆ, ಡ್ರಗ್ಸ್ ದಂಧೆ ಬಗ್ಗೆ ಚರ್ಚೆಯಾಗುತ್ತಿದೆ. ಇದಕ್ಕೆಲ್ಲ ಅಂಕುಶ ಹಾಕುವ ಕೆಲಸ ಮಾಡಿ. ಸ್ಥಳೀಯರು ಅವರೊಂದಿಗೆ ಶಾಮೀಲಾಗಿದ್ದಾರಾ? ಹಾಗೇನಾದರೂ ಇದ್ದರೆ ನೋಡಿಕೊಂಡು ಸುಮ್ಮನಿರಬೇಡಿ. ನಾನು ಎಲ್ಲರಂತಲ್ಲ, ನನಗೆ ಉತ್ತಮ ವಾತಾವರಣ ಬೇಕಷ್ಟೇ!. ಇದರ ಬಗ್ಗೆ ಹೆಚ್ಚಿನ ಗಮನಹರಿಸಿ. ಬೀಟ್ ಪೊಲೀಸರನ್ನು ಹೆಚ್ಚಳ ಮಾಡಿ. ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳೋಣ. ನಾಗರಿಕರಿಗೆ ಭಯಮುಕ್ತ ವಾತಾವರಣ ನಿರ್ಮಿಸಿ ಕೊಡಿ" ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ. ಜೊತೆಗೆ ಇನ್ನು ಕೆಲವು ಸೂಚನೆಗಳನ್ನು ಪೊಲೀಸರಿಗೆ ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ.

ಜನರು ಶಾಂತಿಯಿಂದ ಜೀವನ ಮಾಡುವಂತಾಗಬೇಕು!

ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು" ಎಂದು ಹೇಳಿದ್ದಾರೆ. ಜೊತೆಗೆ ಹಲವು ಸೂಚನೆಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊಟ್ಟಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಲವು ಸುಧಾರಣೆಗಳು, ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಮುಂದಿನ ದಿನಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಬೇಕು" ಎಂದು ಸಿಎಂ ಬಸವರಾಜ ಬೊಮ್ಮಯಿ ಹೇಳಿದ್ದಾರೆ.

ಜೂಜು, ಡಾರ್ಕ್‌ ವೆಬ್ ಹತೋಟಿಗೆ ಮಾಡಿ!

ಜೂಜು, ಡಾರ್ಕ್‌ ವೆಬ್ ಹತೋಟಿಗೆ ಮಾಡಿ!

"ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು. ಆಗ ಹತೋಟಿಯಲ್ಲಿರುತ್ತದೆ. ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ" ಎಂದು ಕಟ್ಟುನಿಟ್ಟಿನ ಸೂಚನೆಯನ್ನು ಸಿಎಂ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ ಸಿಎಂ ಬೊಮ್ಮಾಯಿ ಅವರು, ಕಾನೂನು, ಸುವ್ಯವಸ್ಥೆ ಕಾಪಾಸುವುದು ಸರ್ಕಾರದ ಪ್ರಥಮ ಆದ್ಯತೆ ಕೊಡಬೇಕು ಎಂದು ಸೂಚಿಸಿದರು. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಕೈದಿಗಳ ಆದಾಯ ಹೆಚ್ಚಳ ಮಾಡಿ

ಕೈದಿಗಳ ಆದಾಯ ಹೆಚ್ಚಳ ಮಾಡಿ

ಮತ್ತೊಂದು ಮಹತ್ವದ ಸೂಚನೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೊಟ್ಟಿದ್ದಾರೆ. ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು ಎಂದು ಸೂಚಿಸಿರುವ ಅವರು, ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಆ ಮೂಲಕ ಕೈದಿಗಳು ಬಿಡುಗಡೆ ನಂತರ ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಸೂಚಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದ್ದಾರೆ. ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ಅಧಿಕಾರಿಗಳಿಗೆ ಆರಗ ಜ್ಞಾನೇಂದ್ರ ಅವರು ಸೂಚನೆಯನ್ನು ಕೊಟ್ಟಿದ್ದಾರೆ.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Recommended Video

BJPಯಲ್ಲಿ ಖಾತೆಗಾಗಿ ಶುರುವಾಯ್ತು ಮಂತ್ರಿಗಳ ರಾಜೀನಾಮೆಯ ಬ್ಲಾಕ್ ಮೇಲ್ | oneindia kannada

English summary
Highlights of the Meeting held with Senior Police Officers under the chairmanship of Chief Minister Basavaraj Bommai. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X