• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಸಿಎಂ ಸಭೆಯಲ್ಲಾದ ಚರ್ಚೆಯ ಮುಖ್ಯಾಂಶಗಳು

|
Google Oneindia Kannada News

ಬೆಂಗಳೂರು, ಜನವರಿ 21: ಕರ್ನಾಟಕದಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕಂದಾಯ ಸಚಿವ ಆರ್.ಅಶೋಕ್ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ತಾಂತ್ರಿಕ ಸಲಹಾ ಸಮಿತಿ ಹಲವು ಸಲಹೆಗಳನ್ನು ಸರ್ಕಾರದ ಮುಂದೆ ಇರಿಸಿತ್ತು. ಅದರಂತೆ ಸಭೆಯಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ.

ಕೋವಿಡ್ ಪರಿಶೀಲನಾ ಸಭೆಯ ಮುಖ್ಯಾಂಶಗಳು:
1. ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ.

2. ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯುನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್‌ನಲ್ಲಿ ಇದ್ದಾರೆ.

3. ಬೆಂಗಳೂರನ್ನು ಹೊರತುಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ.

4. ಪಾಸಿಟಿವಿ ದರ ಶೇ. 19.94 ರಷ್ಟಿದೆ.

5. ಮಕ್ಕಳ ಪಾಸಿಟಿವಿಟಿ ದರ ಶೇ.8 ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ.16.57 ರಷ್ಟಿದೆ.

6. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ.

7. ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್‌ಗಳ ಪೈಕಿ 225 ಕಾರ್ಯಾರಂಭ ಮಾಡಿವೆ.

8. ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್‌ಎ ಪ್ಲಾಂಟ್‌ಗಳು ಕಾರ್ಯಾರಂಭ ಮಾಡಿವೆ.

9. ಸರಾಸರಿ ಮೂರು ದಿನಕ್ಕೆ ಪ್ರಕರಣಗಳು ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ.

10. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ.

11. ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.

highlights of the debate at the karnatakas covid-19 status review meeting

12. ವಾರಾಂತ್ಯ ಕರ್ಫ್ಯೂ ವಿಧಿಸಿದರೂ ಕೂಡ ದೊಡ್ಡ ಪರಿಣಾಮ ಉಂಟಾಗಿಲ್ಲ. ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ.5ರಿಂದ 6ರ ಮಧ್ಯದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ.

13. ಆದರೆ ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

14. ಜೊತೆಗೆ ಕೋವಿಡ್-19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಗಮನಿಸಲಾಗಿದೆ.

15. ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

16. ಈ ಎಲ್ಲ ಅಂಶಗಳನ್ನು ಪರಿಶೀಲಿಸಿ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು

17. ರಾತ್ರಿ ಕರ್ಫ್ಯೂ ಅವಧಿ ವಾರದ ಏಳೂ ದಿನಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಜಾರಿಯಲ್ಲಿರಲಿದೆ.

18. ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು.

19. ಸಾರ್ವಜನಿಕಕರು ಜವಾಬ್ದಾರಿಯುತವಾಗಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಅತಿ ಅಗತ್ಯವಾಗಿದೆ.

20. ಮಾಲ್, ಹೋಟೆಲ್, ಬಾರ್, ಕ್ಲಬ್, ಪಬ್‌ಗಳು ಶೇ.50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎರಡೂ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.

English summary
Karnataka government has decided to Withdraw the weekend curfew at a technical advisory council meeting on Friday, chaired by CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X