ಗೋ ಹತ್ಯೆ ನಿಷೇಧ: ಪ್ರಸ್ತಾವಿತ ಕಾಯ್ದೆಯಲ್ಲಿ ಏನೇನಿದೆ?
ಬೆಂಗಳೂರು, ಡಿ. 09: ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ (ಗೋ ಹತ್ಯೆ ನಿಷೇಧ) ಅಧಿನಿಯಮ 2020 ವಿಪಕ್ಷಗಳ ತೀವ್ರ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಗೋ ಹತ್ಯೆ ನಿಷೇಧ ವಿಧೇಯಕವನ್ನು ಪ್ರಸಕ್ತ ಅಧಿವೇಶನದಲ್ಲಿ ಮಂಡಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಏಕಾಏಕಿ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಮಾಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಮುಂದಾದಾಗ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಯಿತು.
ಸಚಿವ ಪ್ರಭು ಚೌಹಾಣ್ ಅವರು ಗೋ ಹತ್ಯೆ ನಿಷೇಧ ವಿಧೇಯಕವನ್ನು ಮಂಡನೆ ಮಾಡುತ್ತಿದ್ದಂತೆಯೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಯಿತು. ಗೋ ಹತ್ಯೆ ನಿಷೇಧಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತೀವ್ರ ವಿರೋಧ ವ್ಯಕ್ತಪಡಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಧರಣಿ ಮಧ್ಯೆಯೇ 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ವಿಧಾನ ಪರಿಷತ್‌ನಲ್ಲಿ ಅಂಗೀಕಾರ ಪಡೆದ ಬಳಿಕ ರಾಜ್ಯಪಾಲರ ಅಂಕಿತದೊಂದಿಗೆ ವಿಧೇಯಕ ಕಾನೂನಾಗಲಿದೆ.
ಗೋ ಹತ್ಯೆ ನಿಷೇಧ ಪ್ರಸ್ತಾವಿತ ಕಾಯ್ದೆಯಲ್ಲಿ ಇರುವ ಪ್ರಮುಖ ಅಂಶಗಳೇನು? ಹಾಗೂ ಗೋ ಹತ್ಯೆ ಕಾಯಿದೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಯಾಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ವಿಧಾನಸಭೆಯಲ್ಲಿ ಅಂಗೀಕಾರ
ಈ ಹಿಂದೆಯೂ ಬಿಜೆಪಿ ಸರ್ಕಾರದ ಆಡಳಿತವಿದ್ದಾಗ ಗೋ ಹತ್ಯೆ ನಿಷೇಧ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. ಆದರೆ ಆಗ ರಾಜ್ಯಪಾಲರಾಗಿದ್ದ ದಿ. ಹಂಸರಾಜ್ ಭಾರದ್ವಾಜ್ ಅವರು ವಿಧೇಯಕಕ್ಕೆ ಅಂಕಿತ ಹಾಕದೇ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ಹೀಗಾಗಿ ವಿಧೇಯಕ ಕಾನೂನು ಆಗಿರಲಿಲ್ಲ. ಇದೀಗ ರಾಜ್ಯ ಬಿಜೆಪಿ ಸರ್ಕಾರ ಅದೇ ವಿಧೇಯಕದಲ್ಲಿನ ಕೆಲ ಅಂಶಗಳಿಗೆ ತಿದ್ದುಪಡಿ ತಂದು ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರ ಪಡೆದುಕೊಂಡಿದೆ.

ಪ್ರಸ್ತಾವಿತ ಕಾಯ್ದೆಯಲ್ಲಿ ಏನೇನಿದೆ?
ದೇಶದಲ್ಲಿ 1964ರಿಂದಲೇ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಹಿಂದೆ 2010ರಲ್ಲಿ ಅಧಿಕಾರದಲ್ಲಿದ್ದ ಆಗಿನ ಬಿಜೆಪಿ ಸರ್ಕಾರ ರಾಜ್ಯಕ್ಕಾಗಿ ಪ್ರತ್ಯೇಕ ಗೋ ಹತ್ಯೆ ನಿಷೇಧ ಕಾನೂನು ತರಲು ಪ್ರಯತ್ನಿಸಿ ವಿಫಲವಾಗಿತ್ತು. ಈಗ ಮತ್ತೊಮ್ಮೆ ಅದೇ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ.
ಪ್ರಸ್ತಾವಿತ ವಿಧೇಯಕದಲ್ಲಿ ಗೋ ಹತ್ಯೆ ಮಾಡಿದರೆ ಈಗಿರುವ 3 ವರ್ಷದ ಜೈಲು ಶಿಕ್ಷೆ ಏಳು ವರ್ಷಕ್ಕೆ ಏರಿಕೆ ಆಗಲಿದೆ. ಮೊದಲ ಬಾರಿ ಅಪರಾಧ ಮಾಡಿದಲ್ಲಿ 50 ಸಾವಿರ ರೂ. ಇದ್ದ ದಂಡ ಇದೀಗ 5 ಲಕ್ಷ ರೂ.ಗಳಿಗೆ ಏರಿಕೆಯಾಗಲಿದೆ. ಇನ್ನು ಅದೇ ಅಪರಾಧವನ್ನು ಮತ್ತೆ ಮಾಡಿದಲ್ಲಿ ಪ್ರತಿ ಹಸುವಿನ ಹತ್ಯೆಗೆ 1 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ದಂಡ ಮತ್ತು ಏಳು ವರ್ಷಗಳ ಕಾಲ ಶಿಕ್ಷೆ ವಿಧಿಸಲು ಹೊಸ ಕಾನೂನಿನಲ್ಲಿ ಅವಕಾಶವಿದೆ.

ಬೇಕಾಬಿಟ್ಟಿ ಹಸು ಸಾಗಣೆ ಮಾಡುವಂತಿಲ್ಲ
ಹೊಸ ಕಾನೂನು ಜಾರಿಯಾದ ಬಳಿಕ ಯಾರೇ ಆಗಲಿ ಬೇಕಾಬಿಟ್ಟಿಯಾಗಿರಾಜ್ಯದ ಒಳಗೆ ಅಥವಾ ಹೊರಗೆ ಜಾನುವಾರುಗಳನ್ನು ಸಾಗಣೆ ಮಾಡುವಂತಿಲ್ಲ. ಆದರೆ ಕೃಷಿ ಉದ್ದೇಶಕ್ಕಾಗಿ ಅನುಮತಿ (ಪರ್ಮಿಟ್) ಪಡೆದು ಸಾಗಣೆ ಮಾಡಲು ಅವಕಾಶವಿದೆ. ಗೋ ಹತ್ಯೆ ಮಾಡುವ ಉದ್ದೇಶದಿಂದ ಸಾಗಣೆ ಮಾಡುವಂತಿಲ್ಲ ಎಂದು ಕಾನೂನಿನಲ್ಲಿದೆ.
ಉಪವಿಧಿ 2 ಮತ್ತು ನಿಯಮ 18ರ ಪ್ರಕಾರ ಗೋ ವಧಾಗಾರಗಳಲ್ಲಿ ವಿಲೇವಾರಿ ಮಾಡಲು ನಿಯಮ ರೂಪಿಸಬೇಕು. ಜೊತೆಗೆ ರಾಜ್ಯ ಸರ್ಕಾರಕ್ಕೆ ಸ್ಥಳೀಯ ಆಡಳಿತಕ್ಕೆ ಗೋ ಶಾಲೆ ನಿರ್ವಹಣೆ ಮಾಡುವ ವಿಧಾನಕ್ಕೆ ಸಂಬಂಧಿಸಿದಂತೆ ನಿಯಮ ರೂಪಿಸುವ ಅಧಿಕಾರ ಸಿಗಲಿದೆ.

ಗೋ ರಕ್ಷಣೆಗೆ ಲೇವಿ ಸಂಗ್ರಹ
ಗೋ ರಕ್ಷಣೆಗೆ ಸಂಬಂಧಪಟ್ಟಂತೆ ಲೇವಿ ಸಂಗ್ರಹಿಸಲು ಸ್ಥಳೀಯ ಸಂಸ್ಥೆಗಳು ಮತ್ತು ಸರ್ಕಾರಕ್ಕೆ ಅವಕಾಶವಿದೆ. ಗೋವುಗಳನ್ನು ಸಾಗಣೆ ಮಾಡುವಾಗ ರಕ್ಷಣೆ ಮಾಡಲು ಹಾಗೂ ಸಬ್‌ಇನ್ಸ್‌ಪೆಕ್ಟರ್ ಮಟ್ಟದ ಅಧಿಕಾರಿಗಳಿಗೆ ಸಕ್ಷಮ ಪ್ರಾಧಿಕಾರದ ಮೂಲಕ ಅಧಿಕಾರದ ಕೊಡಲಾಗಿದೆ.
ಸಬ್‌ಇನ್ಸ್‌ಪೆಕ್ಟರ್‌ಗಳಿಗೆ ಗೋ ಸಾಗಣೆ ಸಂದರ್ಭದಲ್ಲಿ ಅಥವಾ ಅಕ್ರಮವಾಗಿ ಜಾನುವಾರುಗಳನ್ನು ಕಟ್ಟಿಹಾಕಿದಲ್ಲಿ ದಾಳಿ, ಪರಿಶೀಲನೆ ಮತ್ತು ಜಾನುವಾರುಗಳನ್ನು ವಶಕ್ಕೆ ಪಡೆಯುವ ಅಧಿಕಾರವಿದೆ. ಜಾನುವಾರು ಎಂದರೆ 13 ವರ್ಷಗಳ ಒಳಗಿನ ಆಕಳು, ಆಕಳ ಕರು, ಎತ್ತು, ಗೂಳಿ, ಎಮ್ಮೆ ಅಥವಾ ಕೋಣ ಎಂದು ಹೊಸ ಕಾನೂನಿನಂತೆ ಪರಿಗಣಿಸಲಾಗುತ್ತದೆ.

ತನಿಖಾಧಿಕಾರಿಗೆ ಸಹಕಾರ ಕೊಡಬೇಕು
ಜಾನುವಾರುಗಳನ್ನು ಅನುಮಾನಾಸ್ಪದವಾಗಿ ಕಟ್ಟಿಕೊಂಡಿದ್ದರೆ ಅಥವಾ ಸಾಗಣೆ ಮಾಡುತ್ತಿದ್ದಾಗ ತನಿಖಾಧಿಕಾರಿಗೆ ಸಹಕಾರ ನೀಡಬೇಕು. ವಶಕ್ಕೆ ಪಡೆದ ವಿಚಾರವನ್ನು ತಕ್ಷಣ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್‌ಗಳಿಗೆ ತಿಳಿಸಿ ಅಲ್ಲಿಂದ ಮುಟ್ಟುಗೋಲು ಹಾಕಿಕೊಳ್ಳುವುದು. ಗೋ ಮಾಂಸ ವಶಕ್ಕೆ ಪಡೆದಿದ್ದರೆ ಮನುಷ್ಯನ ಉಪಭೋಗಕ್ಕೆ ಉಪಯೋಗವಲ್ಲ ಎಂದು ಪರಿಗಣಿಸಿ ಅದನ್ನು ನಾಶಪಡಿಸಬೇಕು.

ಜಾನುವಾರುಗಳ ಹರಾಜು
ವಿಧೇಯಕದಲ್ಲಿ ಸೆಕ್ಷನ್ 19ರ ಪ್ರಕಾರ ಯಾವುದೇ ಸಂದರ್ಭದಲ್ಲಿ ವಶಕ್ಕೆ ಪಡೆದ ಜಾನುವಾರುಗಳನ್ನು ಆರೋಪಿತರಿಗೆ ಮತ್ತೆ ಹಿಂದಿರುಗಿಸುವಂತಿಲ್ಲ. ಆದರೆ ಅವುಗಳನ್ನು ಸಾರ್ವಜನಿಕವಾಗಿ ಹರಾಜು ಮಾಡಲು ಕಾನೂನಿನಲ್ಲಿ ಅವಕಾಶವಿದೆ.
ಗೋ ಹತ್ಯೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ. ಆರೋಪಿತರನ್ನು ವಶಕ್ಕೆ ಪಡೆಯುವುದು, ಪ್ರಕರಣ ವಿಲೇವಾರಿ ಸೆಷನ್ ಕೊರ್ಟ್ ಹಂತದಲ್ಲೇ ನಡೆಯಬೇಕು ಎಂದು ನಿಯಮ ರೂಪಿಸಲಾಗಿದೆ.
Recommended Video

ಗೋ ರಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ
ಪ್ರಕರಣ ಮುಗಿದ ಬಳಿಕ ಆರೋಪ ಸಾಬೀತಾದಲ್ಲಿ ಹಸು, ಸಾಗಣೆ ವಾಹನ ಅಥವಾ ಜಾನುವಾರುಗಳನ್ನು ಕಟ್ಟಿದ್ದ ಸ್ಥಳವನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ. ಜೊತೆಗೆ ಪ್ರಮುಖವಾಗಿ ಗೋ ರಕ್ಷಣೆಗೆ ಶ್ರಮಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ. ಯಾವುದೇ ಲಸಿಕೆ, ಪ್ರಯೋಗಕ್ಕಾಗಿ ಸರ್ಕಾರ ಸ್ಥಾಪನೆ ಮಾಡಿರುವ ಪ್ರಯೋಗಾಲಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ. ಸಾರ್ವಜನಿಕ ಹಿತಕ್ಕಾಗಿ ಪ್ರಾಣಿಯನ್ನು ಕೊಲ್ಲಲೇಬೇಕೆಂದು ಸರ್ಕಾರದಿಂದ ಪ್ರಮಾಣಿತವಾಗಿದ್ದರೆ ಅದಕ್ಕೆ ಈ ಕಾನೂನು ಅನ್ವಯವಾಗುವುದಿಲ್ಲ.
ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಬಂದಿದ್ದರೆ ಅಂಥವನ್ನು ಕೊಲ್ಲುವುದಕ್ಕೆ ತೊಂದರೆ ಇಲ್ಲ. ಅದಕ್ಕೆ ಪಶುವೈದ್ಯಾಧಿಕಾರಿ ಪ್ರಮಾಣಪತ್ರ ಅಗತ್ಯ. ಗುಣವಾಗದ ಕಾಯಿಲೆ ಹೊಂದಿದ ಜಾನುವಾರು ಕೊಲ್ಲಲು ಅವಕಾಶವಿದೆ. ಆದರೆ ಅದಕ್ಕೆ ಪ್ರಮಾಣ ಪತ್ರ ಅಗತ್ಯ.
13 ವರ್ಷ ಮೇಲ್ಪಟ್ಟ ಎಮ್ಮೆ ಮತ್ತು ಕೋಣ ಸೂಕ್ತ ಪ್ರಾಧಿಕಾರದ ಪರವಾನಗಿಯೊಂದಿಗೆ ವಧಿಸಬಹುದು. ವಧೆಗೆ ಪಶು ವೈದ್ಯಾಧಿಕಾರಿಯಿಂದ ಪ್ರಮಾಣ ಪತ್ರ ಕಡ್ಡಾಯ. ಕರ್ನಾಟಕ ಸೊಸೈಟಿ ಆಕ್ಟ್ ಪ್ರಕಾರ ನೊಂದಾಯಿತ ಸಂಸ್ಥೆಗಳಿಗೆ ಮಾತ್ರ ಗೋ ಶಾಲೆ ನಡೆಸಲು ಅಧಿಕಾರ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications