ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ
ಬೆಂಗಳೂರು, ಫೆಬ್ರವರಿ 11: ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 10ರಂದು ಕರ್ನಾಟಕದ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಪರ ಅರ್ಜಿದಾರರು ಶುಕ್ರವಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಹಿಜಾಬ್ ಪರ ಅರ್ಜಿದಾರರು ತುರ್ತು ವಿಚಾರಣೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಫಾ ಸೇರಿದಂತೆ ಇತರೆ ಸಂಘಟನೆಗಳಿಂದ ಶುಕ್ರವಾರವೇ ತುರ್ತು ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿದೆ.
ಈ ಮೊದಲು ಹಿರಿಯ ವಕೀಲ ಕಪಿಲ್ ಸಿಬಲ್ ಹಿಜಾಬ್ ಕುರಿತು ಮಧ್ಯಪ್ರವೇಶ ಮಾಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಆದೇಶ ಹೊರ ಬರುವವರೆಗೂ ಕಾಯೋಣ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹೈಕೋರ್ಟ್ ವಿಚಾರಣೆ ವೇಳೆ ಮಧ್ಯ ಪ್ರವೇಶ ಮಾಡಲ್ಲ ಎಂದಿದ್ದರು. ಈ ನಡುವೆ ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವಾಗಲೇ ಅರ್ಜಿದಾರರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಗುರುವಾರ ಮಧ್ಯಂತರ ಆದೇಶ ಹೊರಡಿಸಿದ್ದ ಹೈಕೋರ್ಟ್:
ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಅವರಿದ್ದ ತ್ರಿಸದಸ್ಯ ಪೀಠವು ಗುರುವಾರ ಸುಮಾರು ಎರಡು ಗಂಟೆಗಳ ಕಾಲ ವಾದ-ಪ್ರತಿವಾದವನ್ನು ಆಲಿಸಿತು. ಹೈಕೋರ್ಟ್‌ನಲ್ಲಿ ವಿಚಾರಣೆ ಇತ್ಯರ್ಥವಾಗುವವರೆಗೂ ವಿದ್ಯಾರ್ಥಿಗಳು ಹಿಜಾಬ್ ಅಥವಾ ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಉಡುಪುಗಳನ್ನು ಧರಿಸುವಂತಿಲ್ಲ ಎಂದು ಗುರುವಾರವಷ್ಟೇ ಕೋರ್ಟ್ ನಿರ್ಬಂಧಿಸಿತ್ತು.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ವಿಚಾರಣೆಯನ್ನು ಆರಂಭಿಸಿರುವ ವಿಸ್ತೃತ ನ್ಯಾಯಪೀಠ, ಹಿಜಾಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧರ್ಮವನ್ನು ಸೂಚಿಸುವ ವಸ್ತ್ರವನ್ನು ಧರಿಸಲು ಯಾವ ವಿದ್ಯಾರ್ಥಿ ಮೇಲೂ ಒತ್ತಡ ಹೇರಬಾರದು ಎಂದು ಮೌಖಿಕವಾಗಿ ಹೇಳಿದೆ. ಆ ಕುರಿತು ಆದೇಶ ನೀಡುವುದಾಗಿ ಹೇಳಿರುವ ನ್ಯಾಯಪೀಠ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ಮೌಖಿಕ ಆದೇಶದಲ್ಲಿ ಏನಿದೆ?:
ರಾಜ್ಯದಲ್ಲಿ ಸದ್ಯಕ್ಕೆ 'ಶಾಲಾ-ಕಾಲೇಜುಗಳು ಆರಂಭವಾಗಲಿ, ವಿಷಯ ನ್ಯಾಯಾಲಯದ ಮುಂದಿದೆ. ಕೋರ್ಟ್ ಆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಅಲ್ಲಿಯವರೆರೆಗೆ ಹಿಜಾಬ್ ಆಗಲಿ ಅಥವಾ ಕೇಸರಿ ಶಾಲು ಆಗಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಧರಿಸುವಂತಿಲ್ಲ ಮತ್ತು ಆ ಕುರಿತು ಯಾರೂ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಮರಳಬೇಕು ಎಂಬುದು ಕೋರ್ಟ್ ಆಶಯವಾಗಿದೆ,'' ಎಂದು ಮೌಖಿಕವಾಗಿ ಆದೇಶಿಸಿತು.
ಹೈಕೋರ್ಟ್ ಆದೇಶ ತೃಪ್ತಿ ತಂದಿಲ್ಲ ಎಂದ ಸಿಎಫ್ಐ:
ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರದಿಂದ ಫ್ರೌಢ ಶಾಲೆಗಳು ಕಾರ್ಯಾರಂಭ ಮಾಡಲು ಸೂಚನೆ ನೀಡಿದೆ. ಹಂತ ಹಂತವಾಗಿ ಕಾಲೇಜುಗಳನ್ನು ತೆರೆಯಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶಕ್ಕೆ ಸರ್ವರೂ ಸಮ್ಮತಿ ಸೂಚಿಸಿದರೆ ಸಿಎಫ್ಐ ಮಾತ್ರ ಹೈಕೋರ್ಟ್ ಆದೇಶ ನಮಗೆ ತೃಪ್ತಿ ತಂದಿಲ್ಲ ಎಂದು ಹೇಳಿದೆ.
ಹಿಂದೂ ಜಾಗರಣ ವೇದಿಕೆ ಪ್ರತಿಕ್ರಿಯೆ:
ಹಿಂದೂ ಜಾಗರಣ ವೇದಿಕೆ ಕೂಡಾ ಹೈಕೋರ್ಟ್ ಆದೇಶಕ್ಕೆ ಪ್ರತಿಕ್ರಿಯೆ ನೀಡಿದೆ. ಈ ಬಗ್ಗೆ ಮಾತನಾಡಿದ ಉಡುಪಿ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಪ್ರಕಾಶ್ ಕುಕ್ಕೆಹಳ್ಳಿ, "ನ್ಯಾಯಾಲಯದ ಮಧ್ಯಂತರ ಆದೇಶ ಸ್ವಾಗತಿಸುತ್ತೇನೆ. ಕೇಸರಿ ಸಮವಸ್ತ್ರದ ಭಾಗ ಅಲ್ಲ. ಪ್ರತಿಭಟನೆ ರೂಪದಲ್ಲಿ ಕೇಸರಿ ಶಾಲು ಹಾಕಲಾಗಿತ್ತು. ರಾಜ್ಯದ ಕಾಲೇಜುಗಳಲ್ಲಿ ಸಮಾನ ವಸ್ತ್ರಸಂಹಿತೆ ಬರಬೇಕು. ಕೇಸರಿ ಹಾಗೂ ಹಿಜಾಬ್‌ಗೆ ಅವಕಾಶ ನೀಡಬಾರದು. ಹೈಕೋರ್ಟ್ ಏನೇ ಆದೇಶ ನೀಡಿದರೂ ಸ್ವಾಗತಿಸುತ್ತೇವೆ" ಎಂದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
CBSE 10 Results 2025: ಸಿಬಿಎಸ್ಇ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಟಾಪರ್ಸ್ ಪಟ್ಟಿ ಇಲ್ಲಿದೆ -
CBSE 10ನೇ ತರಗತಿ ಫಲಿತಾಂಶ 2026: ನಾಳೆ ಪ್ರಕಟಗೊಳ್ಳಲಿದೆಯೇ ರಿಸಲ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ -
ನಿಮ್ಮ ಮನೆಯ ಸಮೀಪ ಸರ್ಕಾರಿ ಪಿಯು ಕಾಲೇಜು ಎಲ್ಲಿದೆ ಗೊತ್ತೇ? ಅವರಿವರನ್ನು ಕೇಳಿ ದಿಕ್ಕುತಪ್ಪಬೇಡಿ, ಇಲ್ಲಿದೆ ಮಾಹಿತಿ -
ರಾಜ್ಯದಲ್ಲಿ ಮೇ 29ರಿಂದಲೇ 2026-27ನೇ ಹೊಸ ಶೈಕ್ಷಣಿಕ ವರ್ಷ ಆರಂಭ, ಈ ಬಾರಿ ದಸರಾಗೆ ಬರೋಬ್ಬರಿ 19 ದಿನ ರಜೆ -
CBSE ಫಲಿತಾಂಶಕ್ಕಾಗಿ ಕಾಯಬೇಡಿ: ಈಗಲೇ ನಿಮ್ಮ ಡಿಜಿಲಾಕರ್ ಖಾತೆ ತೆರೆಯಿರಿ, ಕ್ಷಣಾರ್ಧದಲ್ಲಿ ರಿಸಲ್ಟ್ ಪಡೆಯಿರಿ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ದ್ವಿತೀಯ PUC ಪರೀಕ್ಷೆ-2: ನೋಂದಣಿ ಆರಂಭ, ಯಾರಿಗೆ ಶುಲ್ಕ ವಿನಾಯಿತಿ? ಇಲ್ಲಿದೆ ಮಾಹಿತಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications