Get Updates
Get notified of breaking news, exclusive insights, and must-see stories!

ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ಪ್ರವೇಶವಿಲ್ಲ; ಸಚಿವ ಬಿ.ಸಿ. ನಾಗೇಶ್

ಬೆಂಗಳೂರು, ಏಪ್ರಿಲ್ 7: ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಿ.ಸಿ. ನಾಗೇಶ್, ಶಿಕ್ಷಣ ಇಲಾಖೆ ಹೊರಡಿಸುವ ಆದೇಶಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸುತ್ತದೆ ಎಂದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆಯೂ ಹಿಜಾಬ್ ಧರಿಸಿ ಬರುವುದನ್ನು ನಿಷೇಧಿಸಲಾಗಿತ್ತು.

ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಆಯಾ ಕಾಲೇಜುಗಳ ಎಸ್​ಡಿಎಂ​ಸಿ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

Hijab Is Not Allowed in Karnataka 2nd PUC Exams says Education Minister BC Nagesh

ಹೈಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಪಿಯುಸಿ ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರುಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ. SSLC ಬೆನ್ನಲ್ಲೇ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Hijab Is Not Allowed in Karnataka 2nd PUC Exams says Education Minister BC Nagesh

ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 22, 2022: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23, 2022: ಗಣಿತ, ಶಿಕ್ಷಣ
ಏಪ್ರಿಲ್ 25, 2022: ಅರ್ಥಶಾಸ್ತ್ರ
ಏಪ್ರಿಲ್ 26, 2022: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ರಸಾಯನಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27, 2022: ತಮಿಳು, ಮರಾಠಿ, ತೆಲಗು, ಮಲಯಾಳಮ್ ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28, 2022: ಕನ್ನಡ, ಅರೇಬಿಕ್
ಮೇ 02, 2022: ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 04, 2022: ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್
ಮೇ 05, 2022: ಇಂಗ್ಲಿಷ್
ಮೇ 10, 2022: ಇತಿಹಾಸ, ಭೌತಶಾಸ್ತ್ರ
ಮೇ 12, 2022: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14, 2022: ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಕಂಪ್ಯೂಟರ್
ಮೇ 17, 2022: ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18, 2022: ಹಿಂದಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+