Breaking; ಹಿಜಾಬ್ ವಿವಾದ, ಹೈಸ್ಕೂಲ್, ಕಾಲೇಜುಗಳಿಗೆ 3 ದಿನ ರಜೆ

ಬೆಂಗಳೂರು, ಫೆಬ್ರವರಿ 08; ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಕರ್ನಾಟಕದ ಹೈಸ್ಕೂಲ್ ಮತ್ತು ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮಂಗಳವಾರ ಸಂಜೆ ಈ ಕುರಿತು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. "ಮುಂದಿನ ಮೂರು ದಿನಗಳ ಅವಧಿಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರಿದೆ" ಎಂದು ಹೇಳಿದ್ದಾರೆ.

ಫೆಬ್ರವರಿ 9ರಿಂದ ಮೂರು ದಿನಗಳ ಕಾಲ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಮತ್ತೊಂದು ಕಡೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯೂ ಬುಧವಾರಕ್ಕೆ ಮುಂದೂಡಲಾಗಿದೆ.

Hijab Issue Basavaraj Bommai Announced Holiday For All High Schools And Colleges

ಮುಖ್ಯಮಂತ್ರಿಗಳ ಟ್ವೀಟ್; ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಟ್ವೀಟ್ ಮಾಡಿದ್ದು, "ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರಿದೆ" ಎಂದು ಹೇಳಿದ್ದಾರೆ.

ಅರ್ಜಿ ವಿಚಾರಣೆ ಬುಧವಾರಕ್ಕೆ; ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ವಿಚಾರದಲ್ಲಿಯೇ ದಾಖಲಾಗಿರುವ 3 ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ನಡೆಸಿತು.

ಸುಮಾರು 4 ಗಂಟೆಗಳ ಅರ್ಜಿ ವಿಚಾರಣೆ ನಡೆಸಲಾಯಿತು. ಬಳಿಕ ಅರ್ಜಿಯ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಯಿತು. ಬುಧವಾರವೂ ಸಹ ವಾದ, ಪ್ರತಿವಾದ ಮುಂದುವರೆಯಲಿದೆ.

ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ; ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಪ್ರತಿಭಟನೆ ನಡೆದಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ತೋರಿಸಿ, ಅಶ್ರುವಾಯು ಪ್ರಯೋಗ ಸಹ ಮಾಡಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಬಗ್ಗೆ ನಡೆಯುತ್ತಿರುವ ವಿವಾಧದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ 8-02-2022 ಮತ್ತು 9-02-2022 ರಂದು 2 ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕಲಂ 144 CrPC ರೀತ್ಯಾ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಸಾರ್ವಜನಿಕರ ಗಮನಕ್ಕೆ ತಂದಿರುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ರಜೆ ನೀಡಲು ಆಗ್ರಹಿಸಿದ್ದರು; ಇನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ, "ಹಿಜಾಬ್ - ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್‌ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ" ಎಂದು ಟ್ವೀಟ್ ಮಾಡಿದ್ದರು.

"ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ" ಎಂದು ಹೇಳಿದ್ದರು.

"ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ" ಎಂದು ತಿಳಿಸಿದ್ದರು.

"ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ರಾಜ್ಯ ಸರ್ಕಾರ ಈಗ ಪರಿಸ್ಥಿತಿ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ" ಎಂದು ಸಿದ್ದರಾಮಯ್ಯ ಆರೋಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+