ಹಿಜಾಬ್ ವಿವಾದ: ಮಂಗಳೂರು ವಿವಿ, ಭಂಡಾರ್ಕಾರ್ಸ್ ಕಾಲೇಜು ಪ್ರಾಂಶುಪಾಲರಿಗೆ ನೋಟಿಸ್
ಬೆಂಗಳೂರು, ಫೆಬ್ರವರಿ 09: ಹಿಜಾಬ್ ವಿಚಾರವು ಈಗ ಕರ್ನಾಟಕದಲ್ಲಿ ಭಾರೀ ವಿವಾದವನ್ನು ಸೃಷ್ಟಿ ಮಾಡಿದೆ. ಸದ್ಯ ಈ ವಿಚಾರ ಹೈಕೋರ್ಟ್‌ನಲ್ಲಿ ಇದೆ. ಈ ನಡುವೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಆರೋಪ ಮಾಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಿಗೆ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತುರ್ತು ನೋಟಿಸ್ ಅನ್ನು ನೀಡಿದೆ. ಹಾಗೆಯೇ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದ್ದಾರೆ.

ತೃತೀಯ ಬಿಬಿಎ ವಿದ್ಯಾರ್ಥಿ ಸುಹಾ ಮೌಲಾನಾ ಅವರು ತಮ್ಮ ತಾಯಿ ಬೀಬಿ ಸಾರಾ ಮತ್ತು ಪ್ರಥಮ ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್ ಅವರು ತಮ್ಮ ತಾಯಿ ರಹಮತ್ ಅವರ ಮೂಲಕ ಹೈಕೋರ್ಟ್‌ಗೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಮನವಿ ಸಲ್ಲಿಕೆ ಮಾಡಿದ್ದಾರೆ. ಹಾಗೆಯೇ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಪರವಾಗಿ ಪ್ರಾಂಶುಪಾಲರುಗಳ ವಿರುದ್ಧವೂ ಅರ್ಜಿ ಸಲ್ಲಿಸಲಾಗಿದೆ.
ಅರ್ಜಿಯಲ್ಲಿ ವಿದ್ಯಾರ್ಥಿಗಳು ಹೇಳಿರುವುದು ಏನು?
ತಮಗೆ ಯಾವುದೇ ನಿರ್ಬಂಧ ಹಾಗೂ ಷರತ್ತು ಹೇರದ ಕಾಲೇಜಿಗೆ ಪ್ರವೇಶ ಮಾಡಲು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಆದೇಶ ನೀಡಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ಸೂಚನೆ ನೀಡಲು ವಿದ್ಯಾರ್ಥಿನಿಯರು ಹೈಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಹೇಳಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿನಲ್ಲಿ ತಮ್ಮ ರಾಜಕೀಯ ಅಜೆಂಡಾವನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ. ಹಾಗೆಯೇ ಕಾನೂನಿನ ಯಾವ ನಿಬಂಧನೆಯಡಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿನ ಆಡಳಿತದಲ್ಲಿ ಮಧ್ಯಪ್ರದೇಶ ಮಾಡಿದ್ದಾರೆ ಎಂದು ಪ್ರಶ್ನಿಸಿ ಆದೇಶ ಮಾಡಬೇಕು ಎಂದು ತಿಳಿಸಿದ್ದಾರೆ. ಹಾಗೆಯೇ ಈ ವಿಚಾರದಲ್ಲಿ ನ್ಯಾಯ ದೊರಕಿಸುವಂತೆ ಕೋರಲಾಗಿದೆ.
ಮಧ್ಯಂತರ ಪರಿಹಾರವಾಗಿ, ಅರ್ಜಿದಾರರಿಗೆ ಯಾವುದೇ ಪಕ್ಷಪಾತ, ತಾರತಮ್ಯ ತೋರದೆ ಶಿರವಸ್ತ್ರ ಧರಿಸಿ ತರಗತಿಗಳಿಗೆ ಪ್ರವೇಶಿಸಲು ಭಂಡಾರ್ಕಾರ್ಸ್ ಕಾಲೇಜಿಗೆ ಮಂಗಳೂರು ವಿವಿಯ ರಿಜಿಸ್ಟ್ರಾರ್ ಅವರು ಸೂಚಿಸುವಂತೆ ನ್ಯಾಯಾಲಯವು ನಿರ್ದೇಶನ ನೀಡಬೇಕು. ಹಾಗೆಯೇ ಶೈಕ್ಷಣಿಕ ಸಿಬ್ಬಂದಿಯ ತಾರತಮ್ಯದಿಂದಾಗಿ ಈ ಶೈಕ್ಷಣಿಕ ವರ್ಷದಲ್ಲಿ ತರಗತಿಯಿಂದ ಹೊರಗುಳಿದಿರುವ ದಿನಗಳಿಗೆ ಅಥವಾ ಮನವಿ ಇತ್ಯರ್ಥವಾಗುವವರೆಗೆ ಹಾಜರಾತಿ ನೀಡಬೇಕು ಎಂದು ಕೂಡಾ ಅರ್ಜಿದಾರರು ಮನವಿ ಮಾಡಿದ್ದಾರೆ.
ಕಾಲೇಜು ಆರಂಭ ಮಾಡಿದಾಗಿನಿಂದ ನಮಗೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ ಫೆಬ್ರವರಿ 3ರಂದು ಏಕಾಏಕಿ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರಬಾರದು ಎಂದು ಹೇಳಿದ್ದಾರೆ. ಈಗ ಸರ್ಕಾರದ ಆದೇಶವಿದೆ ಎಂದು ನಿರ್ಬಂಧ ವಿಧಿಸಲಾಗುತ್ತಿದೆ. ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ವಿದ್ಯಾರ್ಥಿಗಳ ಪೋಷಕರು ಭೇಟಿ ಮಾಡಿ ಪ್ರಶ್ನಿಸಿದಾಗ ಶಾಸಕ ಶ್ರೀನಿವಾಸ ಶೆಟ್ಟಿ ನಿರ್ದೇಶನದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ ಎಂದು ಮನವಿಯಲ್ಲಿ ವಿದ್ಯಾರ್ಥಿಗಳು ಉಲ್ಲೇಖ ಮಾಡಿದ್ದಾರೆ. (ಒನ್‌ಇಂಡಿಯಾ ಸುದ್ದಿ)
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications