ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

|
Google Oneindia Kannada News

ಬೆಂಗಳೂರು, ಫೆಬ್ರವರಿ 15: ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.

Breaking: ಹಿಜಾಬ್ ಕುರಿತ ವಿಚಾರಣೆಯನ್ನು ಫೆ.15ಕ್ಕೆ ಮುಂದೂಡಿದ ಹೈಕೋರ್ಟ್Breaking: ಹಿಜಾಬ್ ಕುರಿತ ವಿಚಾರಣೆಯನ್ನು ಫೆ.15ಕ್ಕೆ ಮುಂದೂಡಿದ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ. ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಹಿಜಾಬ್ ವಿಚಾರಣೆ ಮುಂದೂಡಿದೆ.

Karnataka Hijab Row: High Court Adjourns Hearing for February 16

ಮಂಗಳವಾರ ಆರಂಭಗೊಂಡ ಹಿಜಾಬ್ ವಿವಾದದ ಅರ್ಜಿಯ ವಿಚಾರಣೆಯ ವೇಳೆ ಸಂವಿಧಾನದ 25 (1)ನೇ ವಿಧಿಯ ಕುರಿತಂತೆ ಹೈಕೋರ್ಟ್‌ನ ತ್ರಿಸದಸ್ಯ ನ್ಯಾಯಪೀಠದಲ್ಲಿ ಬಿಸಿಬಿಸಿ ಚರ್ಚೆ ನಡೆಯಿತು.

ಶುಕ್ರವಾರ ನ್ಯಾಯಾಲಯವು ಶಿಕ್ಷಣ ಸಂಸ್ಥೆಗಳನ್ನು ಶೀಘ್ರವಾಗಿ ಪುನಃ ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಮತ್ತು ವಿಷಯವು ವಿಚಾರಣೆಗೆ ಬಾಕಿ ಇರುವಾಗ ವಿದ್ಯಾರ್ಥಿಗಳು ತರಗತಿಗಳಲ್ಲಿ ಯಾವುದೇ ರೀತಿಯ ಧಾರ್ಮಿಕ ಬಟ್ಟೆಗಳನ್ನು ಧರಿಸುವುದನ್ನು ನಿರ್ಬಂಧಿಸಿತ್ತು.

ಇಂದು ಅರ್ಜಿದಾದರ ಪರವಾಗಿ ಮೊಹಮ್ಮದ್ ತಾಹೀರ್ ವಾದ ಮಂಡಿಸಿ, ಉರ್ದು ಶಾಲೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡುತ್ತಿಲ್ಲ ಎಂದ ವಾದವನ್ನು, ಈ ಸಂಬಂಧ ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಸಲಹೆ ನೀಡಿದರು.

ಇನ್ನು ಸೋಮವಾರ ಅರ್ಜಿದಾರರ ಪರವಾಗಿ ಹಿರಿಯ ವಕೀಲ ದೇವದತ್ತ್ ಕಾಮತ್ ವ್ಯಾಪಕ ವಾದ ಮಂಡಿಸಿದ್ದರು. ಹಿಜಾಬ್ ಧರಿಸುವ ಹಕ್ಕು ಇಸ್ಲಾಂ ಧರ್ಮದ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ. ಸಂವಿಧಾನದ 14, 19 ಮತ್ತು 25ನೇ ವಿಧಿಗಳ ಅಡಿಯಲ್ಲಿ ಅಂತಹ ಹಕ್ಕುಗಳಲ್ಲಿ ಹಸ್ತಕ್ಷೇಪ ಮಾಡಲು ರಾಜ್ಯಕ್ಕೆ ಅಧಿಕಾರವಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ವಿಚಾರವನ್ನು ನಿರ್ಧರಿಸುವವರೆಗೆ ಹಿಜಾಬ್, ಕೇಸರಿ ಶಾಲು ಅಥವಾ ಬೇರಾವುದೇ ಧಾರ್ಮಿಕ ಬಾವುಟಗಳನ್ನು ಇಟ್ಟುಕೊಂಡು ಕಾಲೇಜಿಗೆ ತೆರಳದಂತೆ ವಿದ್ಯಾರ್ಥಿಗಳಿಗೆ ಆದೇಶಿಸಿ ಕರ್ನಾಟಕ ಹೈಕೋರ್ಟ್‌ ಗುರುವಾರ ಮಧ್ಯಂತರ ಆದೇಶ ನೀಡಿತ್ತು. ಬಳಿಕ ಮುಂದಿನ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿತ್ತು. ನಂತರ ಫೆ.15ಕ್ಕೆ ಮುಂದೂಡಲಾಗಿತ್ತು. ಇದೀಗ ಮೂರನೇ ಬಾರಿಗೆ ಕೋರ್ಟ್ ಮುಂದೂಡಿದೆ.

ಹಿಜಾಬ್, ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಶಾಲೆ ಸೋಮವಾರದಿಂದ ಮತ್ತೆ ಆರಂಭವಾಗಿದ್ದು, ಬಿಗಿ ಭದ್ರತೆಯಲ್ಲಿ 9 ಮತ್ತು 10ನೇ ತರಗತಿ ಪ್ರಾರಂಭವಾಗಿದೆ. ಆದರೆ ಕೆಲವೆಡೆ ಹಿಜಾಬ್ ವಿವಾದ ನಡೆಯುತ್ತಲೇ ಇದೆ. ಕೋರ್ಟ್ ಅನುಮತಿ ಇಲ್ಲದಿದ್ದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಶಾಲೆಗಳಿಗೆ ಬರುತ್ತಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ಹಿಜಾಬ್ ತೆಗೆಯುವುದಿಲ್ಲ ಎಂದು ಶಾಲೆಯಿಂದ ವಾಪಸ್ ಮನೆಗೆ ಹೋಗಿದ್ದಾರೆ.

Recommended Video

5 ವರ್ಷಗಳಿಂದ ಇಲ್ಲದ ಹಿಜಾಬ್ ಈಗ್ಯಾಕೆ‌ ಬಂತು? ಹಿಜಾಬ್ ವಿವಾದದ ರಹಸ್ಯ ಇಲ್ಲಿದೆ ನೋಡಿ | Oneindia Kannada

ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಾರೆ ಅಂತ ಆರೋಪಿಸಿ ವಿದ್ಯಾರ್ಥಿನಿಯರಾದ ಆಯೇಷಾ ಹಜೀರಾ ಅಲ್ಮಾಸ್ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಪ್ರಾರಂಭದಲ್ಲಿ ಹೈಕೋರ್ಟ್‌ನ ಏಕಸದ್ಯಸ ಪೀಠ ನಡೆಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಮುಖ್ಯ ನ್ಯಾಯಾಮೂರ್ತಿಗಳಿಗೆ ವಿಚಾರಣೆಯನ್ನು ವರ್ಗಾವಣೆ ಮಾಡಿದ್ದರು.

ಸಂವಿಧಾನದ 25 (1)ನೇ ವಿಧಿ
ಭಾರತದ ಸಂವಿಧಾನದಲ್ಲಿ ಅನುಚ್ಛೇದ 25(1) 1949 (1) ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯ ಮತ್ತು ಈ ಭಾಗದ ಇತರ ನಿಬಂಧನೆಗಳಿಗೆ ಒಳಪಟ್ಟು, ಎಲ್ಲಾ ವ್ಯಕ್ತಿಗಳು ಸಮಾನವಾಗಿ ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಮತ್ತು ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಸಮಾನವಾಗಿ ಅರ್ಹರಾಗಿರುತ್ತಾರೆ ಎಂದು ಹೇಳುತ್ತದೆ.

English summary
Karnataka Hijab Row: Karnataka High Court adjourns Hijab hearing for Wednesday afternoon 2.30 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X