ಫೆಬ್ರವರಿ 14 ರಿಂದ ಪ್ರೌಢ ಶಾಲೆ ಪ್ರಾರಂಭ: ಸಿಎಂ ಬೊಮ್ಮಾಯಿ
ಬೆಂಗಳೂರು ಫೆಬ್ರವರಿ 10: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಮುಚ್ಚಲ್ಪಟ್ಟಿದ್ದ 10 ನೇ ತರಗತಿಯನ್ನು ಸೋಮವಾರದಿಂದ ಪ್ರಾರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಮುಂದಿನ ಆದೇಶದವರೆಗೆ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ನೀಡಿರುವ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚದೆ, ತಕ್ಷಣವೇ ಪುನರಂಭಿಸಬೇಕು ಎಂದು ಹೈಕೋಟ್೯ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ತಿ ನೇತೃತ್ವದ ತ್ರಿಸದಸ್ಯ ಪೀಠ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಜತೆ ನಡೆಸಿದ ಸಭೆಯಲ್ಲಿ ಸೋಮವಾರದಿಂದ ಹತ್ತನೇ ತರಗತಿಗಳನ್ನು ಮಾತ್ರ ಆರಂಭಿಸಲು ತೀರ್ಮಾನಿಸಲಾಯಿತು.
ಹಿಜಾಬ್, ಕೇಸರಿ ಶಾಲು ಧರಿಸದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ: ಹೈಕೋರ್ಟ್ ಮೌಖಿಕ ಸೂಚನೆ
ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ ಅವರು, ಸೋಮವಾರದಿಂದ ಪ್ರೌಢ ಶಾಲೆ ತೆರೆಯಲು ನಿರ್ಧಾರ ಮಾಡಲಾಗಿದೆ. ಎರಡನೇ ಹಂತದಲ್ಲಿ ಕಾಲೇಜು ಆರಂಭಕ್ಕೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು. ಪದವಿ, ಪಿಯುಸಿ, ಸ್ನಾತಕೋತ್ತರ ತರಗತಿಗಳಿಗೆ ಸೋಮವಾರದಿಂದ ತರಗತಿ ಆರಂಭವಾಗುವುದಿಲ್ಲ ಎಂದು ಹೇಳಿದರು. ಶುಕ್ರವಾರ ಮತ್ತೊಮ್ಮೆ ಸಭೆ ನಡೆಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು, ಎರಡನೇ ಹಂತದಲ್ಲಿ ಪಿಯುಸಿ, ಪದವಿ ತರಗತಿ ಆರಂಭವಾಗಲಿದೆ ಎಂದರು.

ಹಿಜಾಬ್ ವಿವಾದ; ದಾವಣಗೆರೆ ಎಸ್‌ಪಿ ಖಡಕ್ ಸೂಚನೆ
ಪರಿಸ್ಥಿತಿಗನುಗುಣವಾಗಿ ನಿರ್ಧಾರ
ನಾಳೆ ಸಂಜೆ ಎಲ್ಲಾ ಸಚಿವರು, ಡಿಸಿ, ಡಿಡಿಪಿಐ, ಬಿಇಓ ಜೊತೆ ಒಟ್ಟಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು. ತರಗತಿಯ ಆರಂಭದ ವೇಳೆ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸೂಚನೆ ನೀಡುವುದಾಗಿ ತಿಳಿಸಿದರು. ಮೊದಲ ಹಂತದಲ್ಲಿ ಪ್ರೌಢ ಶಾಲೆಗಳು ಆರಂಭವಾಗಲಿವೆ. ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪರಿಸ್ಥಿತಿಗನುಗುಣವಾಗಿ ನಿರ್ಧರಿಸುತ್ತೇವೆ ಎಂದರು.
ನಿರಂತರವಾಗಿ ಶಿಕ್ಷಣ ಸಚಿವರ ಸಂಪರ್ಕದಲ್ಲಿ ಇದ್ದೇವೆ. ಹಿರಿಯ ಅಧಿಕಾರಿಗಳು ಕೂಡ ನಿರಂತರ ಸಂಪರ್ಕಕ್ಕೆ ಸೂಚನೆ ನೀಡಲಾಗಿದೆ. ಬರುವ ದಿನದಲ್ಲಿ ಹೈಕೋರ್ಟ್ ಆದೇಶ ಶಾಂತಿ, ಸುವ್ಯವಸ್ಥೆ ಕಾಪಾಡಲು ಕ್ರಮ ತೆಗೆದುಕೊಳ್ಳುವುದಾಗಿ ಸಿ.ಎಂ.ಮಾಹಿತಿ ನೀಡಿದರು. ಕೆಲವು ದಿನಗಳಿಂದ ವಸ್ತ್ರ ಸಂಹಿತೆ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ಎಲ್ಲರಿಗೂ ಶಾಂತಿ ರೀತಿಯಿಂದ ಇರಬೇಕು ಎಂದು ಸಲಹೆ ಮಾಡಲಾಗಿತ್ತು. ಬೆಳಗ್ಗೆ ಕೂಡ ಶಾಂತಿಯಿಂದ ಇರುವಂತೆ ಮನವಿ ಮಾಡಲಾಗಿತ್ತು. ಮಕ್ಕಳಲ್ಲಿನ ಗೊಂದಲ ಕಡಿಮೆಯಾಗಿದೆ. ಆದರೆ ಹೊರಗಿನ ಗೊಂದಲ ಹೆಚ್ಚಾಗಿತ್ತು.ಎಲ್ಲಾ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಇರಬೇಕಿದೆ. ಎರಡು ದಿನಗಳ ದೃಶ್ಯಾವಳಿ ಗಮನಿಸಿದ್ದೇವೆ ಎಂದು ಹೇಳಿದರು.
ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ''ನಾವು ಪರಿಸ್ಥಿತಿ ನೋಡುತ್ತಿದ್ದೇವೆ. ಎಲ್ಲಾ ಕಡೆ ಸಹಜ ಸ್ಥಿತಿಗೆ ಮರಳುತ್ತಿದೆ.ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದು ವಿವರಣೆ ನೀಡಿದರು. ಸೋಮವಾರದಿಂದ ಹತ್ತರವರೆಗೂ ಶಾಲೆ ನಡೆಯಲಿದೆ.ಮುಂದಿನ ಆದೇಶದವರೆಗೂ ಪಿಯು ರಜೆ ಇರಲಿದೆ.ಕೋವಿಡ್ ಬಂದು ಎಲ್ಲಾ ಹಾಳಾಗಿದೆ. ಈಗ ಶಾಲೆ ತರಗತಿ ನಡೆಯಬೇಕು. ಪೋಷಕರು ಸಹಕರಿಸಬೇಕು.ಓದಲು ಅನುವು ಮಾಡಿ ಕೊಡಬೇಕು,'' ಎಂದು ಮನವಿ ಮಾಡಿದರು.
ನಾವು ನ್ಯಾಯಾಲಯದ ಸೂಚನೆಯಂತೆ ಶಾಲೆ ಆರಂಭಿಸುತ್ತಿದ್ದೇವೆ. ನಮ್ಮ ಎಳೆಯ ಮಕ್ಕಳ ಮನಸ್ಸಿನಲ್ಲಿ ಬಿತ್ತುವ ಕೆಲಸ ಆಗಬಾರದು. ಕಾನೂನು ಲಾಠಿ ಬಳಸುವಂತೆ ಆಗಬಾರದು ಎಂದು ಕಿವಿಮಾತು ಹೇಳಿದರು. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್ ಧರಿಸಿದರೆ, ನಾವು ಕೇಸರಿ ಶಾಲು ಹಾಕಿಕೊಂಡು ತರಗತಿಗಳಿಗೆ ಬರುತ್ತೇವೆ ಎಂದು ಹಿಂದೂ ವಿದ್ಯಾರ್ಥಿಗಳು ಸಡ್ಡು ಹೊಡೆದಿದ್ದರು. ಇದು ರಾಜ್ಯದ ಎಲ್ಲಾ ಕಡೆ ಕಾಡ್ಗಿಚ್ಚಿನಂತೆ ಹಬ್ಬಿ ಭಾರೀ ಆತಂಕದ ವಾತವರಣದವನ್ನು ಮೂಡಿಸಿತ್ತು. ರಾಜ್ಯದ ಒಟ್ಟು 18 ಜಿಲ್ಲೆಗಳ 55 ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಸಂಘರ್ಷ ತಾರಕ್ಕೇರಿತ್ತು.
ಅದರಲ್ಲೂ ಶಿವಮೊಗ್ಗ, ದಾವಣಗೆರೆ, ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಪರಿಸ್ಥಿತಿ ಕೈ ಮೀರಿದ್ದರಿಂದ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಲಘು ಲಾಠಿಚಾಚ್೯ ನಡೆಸಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಪ್ರೌಢ ಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳುಗೆ ಮೂರು ದಿನಗಳ ಕಾಲ ರಜೆ ಘೋಷಿಸಿತ್ತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications