ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದ ಆದೇಶ
ಬೆಂಗಳೂರು, ಫೆಬ್ರವರಿ 5: ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಖಾಸಗಿ ಶಾಲಾ-ಕಾಲೇಜುಗಳಲ್ಲಿ ಸಹ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದು ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು ಎಂದು ತಿಳಿಸಿದೆ.
ಒಂದು ವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರದಾದ್ಯಂತ ಕರ್ನಾಟಕದ ಹಿಜಾಬ್ vs ಕೇಸರಿ ಶಾಲು ವಿವಾದ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆಯನ್ನು ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ಪದ್ಮಿನಿ ಹೊರಡಿಸಿದ್ದಾರೆ. ಇದು ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ, ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.
ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸಬೇಕು. ರಾಜ್ಯದಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹೆಚ್ಚಾದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ.
ಆಯಾ ಶಾಲೆಗಳು ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳ ನಿರ್ಧಾರವೇ ಅಂತಿಮವಾಗಿದೆ.

ಪದವಿ ಪೂರ್ವ ಕಾಲೇಜುಗಳಿಗೂ ಕಡ್ಡಾಯ ಸಮವಸ್ತ್ರವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ್ದು, ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಖಾಸಗಿ ಶಾಲೆಗಳು ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರ ಧರಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ CDC ಅಥವಾ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಕಾಲೇಜುಗಳಲ್ಲಿ CDC ಅಥವಾ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದಿದ್ದರೆ ಸಮಾನತೆ ಹಾಗೂ ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಬೇಕೆಂದು ಆದೇಶಿಸಲಾಗಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications