ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದ ಆದೇಶ

|
Google Oneindia Kannada News

ಬೆಂಗಳೂರು, ಫೆಬ್ರವರಿ 5: ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ಶಾಲಾ-ಕಾಲೇಜುಗಳಲ್ಲಿ ಸಹ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದು ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು ಎಂದು ತಿಳಿಸಿದೆ.

ಒಂದು ವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Hijab Row In Karnataka: State Government Ordered Uniforms Compulsory in School And Colleges

ರಾಷ್ಟ್ರದಾದ್ಯಂತ ಕರ್ನಾಟಕದ ಹಿಜಾಬ್ vs ಕೇಸರಿ ಶಾಲು ವಿವಾದ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆಯನ್ನು ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್​. ಪದ್ಮಿನಿ ಹೊರಡಿಸಿದ್ದಾರೆ. ಇದು ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ, ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸಬೇಕು. ರಾಜ್ಯದಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು​ ವಿವಾದ ಹೆಚ್ಚಾದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ.

ಆಯಾ ಶಾಲೆಗಳು ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳ ನಿರ್ಧಾರವೇ ಅಂತಿಮವಾಗಿದೆ.

Hijab Row In Karnataka: State Government Ordered Uniforms Compulsory in School And Colleges

ಪದವಿ ಪೂರ್ವ ಕಾಲೇಜುಗಳಿಗೂ ಕಡ್ಡಾಯ ಸಮವಸ್ತ್ರವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ್ದು, ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಖಾಸಗಿ ಶಾಲೆಗಳು ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರ ಧರಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ CDC ಅಥವಾ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಕಾಲೇಜುಗಳಲ್ಲಿ CDC ಅಥವಾ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದಿದ್ದರೆ ಸಮಾನತೆ ಹಾಗೂ ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಬೇಕೆಂದು ಆದೇಶಿಸಲಾಗಿದೆ.

English summary
Karnataka State Government order uniforms compulsory in school and colleges after Hijab and Saffron Shawl Controversy in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X