BJP protest: ಹೆಚ್ಚಿಸಿದ ವಿದ್ಯುತ್ ದರ ತಕ್ಷಣ ಹಿಂದಕ್ಕೆ ಪಡೆಯಬೇಕು- ಮಾಜಿ ಸಚಿವ ಅಶ್ವತ್ಥನಾರಾಯಣ್ ಆಗ್ರಹ

ಬೆಂಗಳೂರು ಜೂನ್ 6: ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು.

ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ರಾಜ್ಯದ ಕಾಂಗ್ರೆಸ್ ಸರಕಾರದ ನೀತಿಯನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಇಂದು ಏರ್ಪಡಿಸಿದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ವಿದ್ಯುತ್ ಬೆಲೆ ಏರಿಕೆಯ ಹೊರೆಯನ್ನು ರಾಜ್ಯದ ಜನರ ಮೇಲೆ ಕಾಂಗ್ರೆಸ್ ಸರಕಾರ ವಿಧಿಸಿದ್ದು, ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು.

Hiked electricity rates should be withdrawn immediately- ex-minister Ashwatthanarayan demands

ಕಾಂಗ್ರೆಸ್ ಸರಕಾರವು ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಖಂಡಿಸಿದರು. ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ಕೇಶವ ಪ್ರಸಾದ್, ವಿನಯ ಬಿದರೆ, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಸಿ.ಕೆ.ರಾಮಮೂರ್ತಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ, ನಗರ ಜಿಲ್ಲಾಧ್ಯಕ್ಷರಾದ ನಾರಾಯಣ, ಮಂಜುನಾಥ್, ಎನ್.ಆರ್.ರಮೇಶ್, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಗೋಪೂಜೆ ನೆರವೇರಿಸಿದ ಕಾರ್ಯಕರ್ತರು ಮತ್ತು ಪ್ರಮುಖರು ಬಿಜೆಪಿ ಜಾರಿಗೊಳಿಸಿದ ಗೋಹತ್ಯಾ ನಿಷೇಧ ಕಾನೂನನ್ನು ಮುಂದುವರಿಸಬೇಕು ಮತ್ತು ಅದನ್ನು ಹಿಂದಕ್ಕೆ ಪಡೆಯದಂತೆ ಸರಕಾರವನ್ನು ಆಗ್ರಹಿಸಿದರು. ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಯಥಾವತ್ ಮುಂದುವರಿಸುವಂತೆ ಒತ್ತಾಯಿಸಲಾಯಿತು.

ಬಿಜೆಪಿ ಸರ್ಕಾರ ಇದ್ದಾಗ ಹಾಲಿನ ಪ್ರೋತ್ಸಾಹಧನವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ನೀಡುತ್ತಿತ್ತು. ಕಾಂಗ್ರೆಸ್ ಸರ್ಕಾರ ಅದರಲ್ಲಿ 1.5 ರೂಪಾಯಿ ಕಡಿಮೆ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ತಿಳಿಸಿದ್ದಾರೆ.

ಇದರಿಂದ ಬಡ ರೈತರಿಗೆ ತೊಂದರೆಯಾಗಲಿದೆ ಎಂದು ಬಿಜೆಪಿ ದೂರಿದೆ. ಹೀಗಾಗಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ಹಾಲಿನ ಫ್ರೋತ್ಸಾಹಧನ ಕಡಿಮೆ ಮಾಡದಿರಲು ಒತ್ತಾಯಿಸಿದೆ. ಹೀಗೆ ನಾನಾ ಆರೋಪ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆಯ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ. ಮೊನ್ನೆ 200 ಯುನಿಟ್‌ವರೆಗೆ ವಿದ್ಯುತ್ ಉಚಿತ ಎಂದಿದ್ದ ಕರ್ನಾಟಕ ರಾಜ್ಯದ ಸಿದ್ದರಾಮಯ್ಯ ಸರ್ಕಾರ, ಈಗ 80 ಯೂನಿಟ್‌ವರೆಗೆ ಎಂದು ಆದೇಶ ಹೊರಡಿಸಿ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ಆರೋಪಿಸಿದರು.

Hiked electricity rates should be withdrawn immediately- ex-minister Ashwatthanarayan demands

ರಾಜ್ಯ ಸರ್ಕಾರದ ಮೂರು ಜನ ವಿರೋಧಿ ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಮತ್ತು ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ವಿದ್ಯುತ್ ಶುಲ್ಕವನ್ನೂ ಏರಿಸಿದ್ದೀರಿ. ಒಂದು ಯೂನಿಟ್‌ಗೆ 70 ಪೈಸೆ ಹೆಚ್ಚಿಸಲಾಗಿದೆ. ಅಂದರೆ 80 ಯೂನಿಟ್‌ಗೆ 56 ರೂ. ಹೆಚ್ಚಿಸಿದಂತಾಗಿದೆ. ಹಾಗಿದ್ದರೆ ಸರ್ಕಾರ ಮಾಡಿದ್ದೇನು? ಸರ್ಕಾ ಒಂದೆಡೆ ಉಚಿತ ಎನ್ನುತ್ತದೆ. ಅದೇ ರೀತಿಯಲ್ಲಿ ಶುಲ್ಕ ಹೆಚ್ಚಿಸಿದೆ ಜನರಿಂದಲೇ ಮತ್ತೆ ವಸೂಲಾತಿ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಹೆಚ್ಚಿಸಿದ 70 ಪೈಸೆ ದರವನ್ನು ವಾಪಾಸ್ ಪಡೆಯಲು ಆಗ್ರಹಿಸುತ್ತದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+