Puneeth Kerehalli Arrest:‌ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು, ಜುಲೈ 27: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ ಮಟನ್​ ಮಾಂಸದ ಬಾಕ್ಸ್​ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದು, ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಅನ್ಯ ರಾಜ್ಯದಿಂದ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ. ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು, ಶುಕ್ರವಾರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದು, ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿ ಮಾಂಸದ ಬಾಕ್ಸ್​ಗಳನ್ನು ತಡೆಹಿಡಿದಿದ್ದಾರೆ.

hindu organization leader puneeth kerehalli arrested meat case

ಮಾಂಸ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಟನ್ ಪೇಟೆ ಠಾಣೆ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಠಾಣೆಯಲ್ಲಿ ಮಲಗಿದ್ದಾಗ ಪುನೀತ್ ಕೆರೆಹಳ್ಳಿ ಅಸ್ವಸ್ಥರಾಗಿದ್ದಾರೆ ಮುಂಜಾನೆ 4:45 ಕ್ಕೆ ಪುನೀತ್ ಕೆರೆಯಲ್ಲಿ ಅಸ್ವಸ್ಥಗೊಂಡಿದ್ದು, ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

ಶುಕ್ರವಾರ ರಾತ್ರಿ ಜೈಪುರದಿಂದ ಬಂದ ಸುಮಾರು 50ಕ್ಕೂ ಹೆಚ್ಚು ಬಾಕ್ಸ್ ಗಳಲ್ಲಿ 4,500 ಕೆಜಿ ಮಾಂಸ ಇತ್ತು. ಈ ಬಾಕ್ಸ್‌ ಗಳಲ್ಲಿ ಕುರಿಯ ಮಾಂಸದ ಜೊತೆ ನಾಯಿ ಮಾಂಸವನ್ನ ಮಿಕ್ಸ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂತು. ಈ ಆರೋಪದ ಕುರಿತು ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ರೈಲಿನಿಂದ ಈ ಬಾಕ್ಸ್ ಗಳು ಹೊರಗೆ ಬರ್ತಿದ್ದಂತೆ ರೈಲ್ವೆ ನಿಲ್ದಾಣದಲ್ಲೇ ತಡೆದಿದ್ದಾರೆ ಬಳಿಕ ಈ ಬಾಕ್ಸ್ ಗಳಲ್ಲಿ ನಾಯಿ ಮಾಂಸ ಮಿಕ್ಸ್ ಆಗಿದೆ. ಸ್ವಚ್ಚತೆ ಇಲ್ಲ ಅಕ್ರಮವಾಗಿ ಸಾಗಟ ಮಾಡಲಾಗ್ತಿದೆ ಎಂದು ಆರೋಪಿಸಿದ್ದು, ಅಬ್ದುಲ್‌ ರಜಾಕ್‌ ಹಾಗೂ ಪುನೀತ್‌ ಕೆರೆಹಳ್ಳಿ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+