ಗಣೇಶ ಪ್ರತಿಷ್ಠಾಪಿಸಿದವರೇ A1,A1ನಿಂದ A23 ವರೆಗೆ ಎಲ್ಲಾ ಹಿಂದೂಗಳೇ: ಯತ್ನಾಳ ಕಿಡಿ
ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ ಮತ್ತೊಮ್ಮೆ ಗುಡುಗಿದ್ದಾರೆ. ನಾಗಮಂಗಲ ಗಲಭೆಯನ್ನು ರಾಜ್ಯ ಸರ್ಕಾರ ಹಗುರವಾಗಿ ಪರಿಗಣಿಸುತ್ತಿದೆ. ಗೃಹ ಸಚಿವರು ಇದು ಆಕಸ್ಮಿಕ ಘಟನೆ ಎಂದಿದ್ದಾರೆ. ಇದು ಆಕಸ್ಮಿಕವೇ ಎಂದು ಬಿಜೆಪಿ ಗುರುವಾರದಿಂದ ಗುಡುಗಿದೆ. ಇದೀಗ ತನಿಖೆ ನಡೆಯುತ್ತಿರುವ ವಿಧಾನಕ್ಕೆ ಬಸನಗೌಡ ಯತ್ನಾಳ ಸೇರಿದಂತೆ ಬಿಜೆಪಿಯ ಕೆಲವು ಮುಖಂಡರು ಈಗಾಗಲೇ ವಿರೋಧಿಸಿದ್ದಾರೆ. ಇದೀಗ ಸೆಕ್ಷನ್ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಯತ್ನಾಳ ಮತ್ತೊಮ್ಮೆ ಗರಂ ಆಗಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಯತ್ನಾಳ್ ಅವರು ಮತ್ತೊಮ್ಮೆ ಗುಡುಗಿದ್ದಾರೆ. ಪೊಲೀಸರ ತನಿಖೆಯ ತರ್ಕಾನುಸಾರ ಗಣೇಶನನ್ನು ಕೂರಿಸಿದ ಆಯೋಜಕರೇ ದೋಷಿಗಳು, ಅವರೇ ಗಲಭೆ ಸೃಷ್ಟಿಸಿದ್ದು, ಸಾರ್ವಜನಿಕ/ಖಾಸಗಿ ಆಸ್ತಿ ಪಾಸ್ತಿಗಳಿಗೆ ಬೆಂಕಿ ಹಚ್ಚಿದ್ದು ಗಣಪನನ್ನು ಕೂರಿಸಿದ ಹಿಂದೂಗಳೇ ಎಂದು ಪ್ರಶ್ನೆ ಮಾಡಿದ್ದಾರೆ.

ಮುಂದುವರಿದು ಪೊಲೀಸರು ಯಾರ ಒತ್ತಡ ಮೇಲೆ ಹಿಂದೂಗಳ ಮೇಲೆ ಕೇಸು ಮಾಡುತ್ತಿದ್ದಾರೆ ಎಂದು ಹೇಳಬೇಕು. ಮೆರವಣಿಗೆ ಹೋಗುತ್ತಿದ್ದಾಗ ಚಪ್ಪಲಿ, ಕಲ್ಲೆಸೆತ ಮಾಡಿದ್ದು ಯಾರೆಂದು ಪೊಲೀಸರಿಗೆ ಗೊತ್ತಿಲ್ಲವೇ ? A1 ನಿಂದ A23 ನ ಎಲ್ಲ ಆರೋಪಿಗಳು ಹಿಂದೂಗಳೇ ಆಗಿದ್ದಾರೆ. ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿಗಳೇ ನಿಮ್ಮ ಇಲಾಖೆ ಮಾಡುತ್ತಿರುವ ತನಿಖೆ ರಾಜಕೀಯ ಪ್ರೇರಿತವಾಗಿದೆ. ನೀವು ನಿಜವಾದ ಅಪರಾಧಿಗಳನ್ನು ಹಿಡಿಯಬೇಕು, ಅಮಾಯಕರನ್ನಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಕೂಡಲೇ, ತಪ್ಪುಗಳನ್ನು ಸರಿಪಡಿಸಿ ಎಂದು ಆಗ್ರಹಿಸಿದ್ದಾರೆ.
ಗಣೇಶ ಮೂರ್ತಿ ಪ್ರತಿಷ್ಠಾಪಿಸಿದವರೇ ಎ1 ಆರೋಪಿ ?
ಇನ್ನು ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದವರನ್ನೇ ಎ1 ಆರೋಪಿ ಮಾಡಲಾಗಿದೆ ಎಂದು ವರದಿಯಾಗುತ್ತಿದ್ದು, ಇದಕ್ಕೆ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೇ ಇದರಲ್ಲಿ ಎ1ನಿಂದ ಎ23ರ ವರೆಗೆ ಇರುವ ಎಫ್‌ಐಆರ್‌ನಲ್ಲಿ ಹಿಂದೂಗಳ ಹೆಸರನ್ನೇ ದಾಖಲು ಮಾಡಲಾಗಿದೆ. ಎ 24ನಿಂದ ಪೆಟ್ರೋಲ್ ಬಾಂಬ್, ಕಲ್ಲು ತೂರಿದವರು ಹಾಗೂ ಅಂಗಡಿಗಳನ್ನು ಸುಟ್ಟವರ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಲಾಗುತ್ತಿದೆ ಇದನ್ನು ಯತ್ನಾಳ ಅವರು ವಿರೋಧ ಮಾಡಿದ್ದಾರೆ.
ಯಾರನ್ನು ತುಷ್ಟೀಕರಣ ಮಾಡಬೇಕಿಲ್ಲ: ಪರಂ
ರಾಜ್ಯ ಕಾಂಗ್ರೆಸ್ ಸರ್ಕಾರವು ನಿರ್ದಿಷ್ಟ ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಅದರ ಪರಿಣಾಮವೇ ಈ ಘಟನೆ ಎಂದು ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧಿಸಿವೆ. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಮಾನಾಡಿರುವ ಗೃಹ ಸಚಿವ ಜಿ. ಪರಮೇಶ್ವರ್ ಅವರು, ಯಾವ ಸಮುದಾಯವನ್ನು ತುಷ್ಟೀಕರಣ ಮಾಡುವ ಅವಶ್ಯಕತೆ ನಮಗಿಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಳ್ಳುವವರಿಗೆ ನಾವೇನು ಮಾಡಲು ಸಾಧ್ಯ ಎಂದು ಪರಮೇಶ್ವರ್ ಅವರು ಪ್ರಶ್ನೆ ಮಾಡಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications