ಹಿಂದುತ್ವ ಕೊಲೆ, ತಾರತಮ್ಯ, ಗಲಭೆಯನ್ನು ಪ್ರಚೋಧಿಸುತ್ತದೆ: ಸಿದ್ದರಾಮಯ್ಯ
ಯಾವುದೇ ಧರ್ಮವು ಕೊಲೆ ಮತ್ತು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಹಿಂದುತ್ವ ಮತ್ತು ಮನುವಾದವು ಕೊಲೆ, ಹಿಂಸೆ ಮತ್ತು ತಾರತಮ್ಯವನ್ನು ಬೆಂಬಲಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು, ಫೆಬ್ರವರಿ 7: ಹಿಂದುತ್ವ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಹಿಂದುತ್ವ ಮತ್ತು ಹಿಂದೂ ಧರ್ಮ ಬೇರೆ ಬೇರೆ. ನಾನು ಹಿಂದೂ ಧರ್ಮದ ವಿರೋಧಿಯಲ್ಲ, ನಾನೂ ಕೂಡ ಹಿಂದೂ. ಆದರೆ ಮನುವಾದ ಮತ್ತು ಹಿಂದುತ್ವವನ್ನು ವಿರೋಧಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಾಜಿ ಶಾಸಕ ಬಿ.ಆರ್.ಪಾಟೀಲ್ ಅವರ ಜೀವನಾಧಾರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಧರ್ಮವು ಕೊಲೆ ಮತ್ತು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಹಿಂದುತ್ವ ಮತ್ತು ಮನುವಾದವು ಕೊಲೆ, ಹಿಂಸೆ ಮತ್ತು ತಾರತಮ್ಯವನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯನವರು ಹಿಂದುತ್ವದ ಬಗ್ಗೆ ಹೇಳಿಕೆ ನೀಡಿ ವಿವಾದ ಹುಟ್ಟು ಹಾಕುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಜನವರಿ 8 ರಂದು ಅವರು ಹಿಂದೂ ಎಂದು ಪ್ರತಿಪಾದಿಸಿದ್ದರು. ಆದರೆ ಹಿಂದುತ್ವವನ್ನು ವಿರೋಧಿಸಿದ್ದರು. ಅದೇ ಸಮಾರಂಭದಲ್ಲಿ ಅವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಎಂದಿಗೂ ವಿರೋಧಿಸಲಿಲ್ಲ. ಆದರೆ ಅದನ್ನು ರಾಜಕೀಯ ಲಾಭಕ್ಕಾಗಿ ಬಳಸುವುದನ್ನು ವಿರೋಧಿಸಿದ್ದರು.

ಶನಿವಾರದಂದು ಕರ್ನಾಟಕ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು, ಮೇಕೆ, ಹಸು ಎಂದು ಹೇಳಲಾಗದ ಮೂರ್ಖ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಯ್ದಿದ್ದ ಸಿದ್ದರಾಮಯ್ಯ ಅವರು ಪಶುಸಂಗೋಪನೆ ಸಚಿವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡು ಸರಣಿ ಟ್ವೀಟ್ ಮಾಡಿದ್ದಾರೆ. ಪಶುಸಂಗೋಪನಾ ಸಚಿವರಿಗೆ ಕನ್ನಡ ಸೇರಿದಂತೆ ಯಾವ ಭಾಷೆಯೂ ಬರುವುದಿಲ್ಲ, ಅಂತಹವರು ಶಾಸಕರಾಗಲು ಅನರ್ಹರು ಎಂದು ಬರೆದ್ದಿದ್ದರು.
ಮುಂದುವರಿದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಬಿಜೆಪಿ ಮುಖಂಡರು ಪ್ರತಿ ಶಾಸಕರಿಗೆ ₹ 15ರಿಂದ 20 ಕೋಟಿ ಹಣ ನೀಡಿ ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚಿಸಿದ್ದರು. 2013ರಲ್ಲಿ ನಾವು 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಅಲ್ಲದೆ 30 ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದೇವೆ. ಬಿಜೆಪಿ 2018ರಲ್ಲಿ 600 ಭರವಸೆಗಳನ್ನು ನೀಡಿತು. ಅದರಲ್ಲಿ 50 ರಿಂದ 60 ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.
ಪೆನ್ನು, ಪೆನ್ಸಿಲ್, ಪುಸ್ತಕ, ಮೊಸರಿನ ಮೇಲೆ ಶೇ.18ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರ ಮೇಲೆ ಸರ್ಕಾರ ಹೆಚ್ಚಿನ ಹೊರೆ ಹೇರಿದೆ. ಆದರೆ, ಪ್ರತಿ ಮನೆ ಮಾಲೀಕರಿಗೆ ತಿಂಗಳಿಗೆ ₹ 20,00 ಮತ್ತು ತಿಂಗಳಿಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಅವರು ಹೇಳಿದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications