Hiriyur By-Election: ಬಿಜೆಪಿಗೆ ಪ್ರತಿಷ್ಠೆಯಾದ ಹಿರಿಯೂರು ಉಪಚುನಾವಣೆ; ಗೆಲುವಿಗಾಗಿ ಘಟಾನುಘಟಿ ನಾಯಕರಿಗೆ ಮಹತ್ವದ ಜವಾಬ್ದಾರಿ!

ಬೆಂಗಳೂರು: ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಬಿಜೆಪಿ ಈಗಿನಿಂದಲೇ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದು, ಪಕ್ಷದ ಘಟಾನುಘಟಿ ನಾಯಕರಿಗೆ ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿದೆ.

ಈ ಸಂಬಂಧ ಬಿಜೆಪಿ ಪ್ರಮುಖ ನಾಯಕರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಹಲವು ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ.

Hiriyur By-Election BJP Takes Hiriyur Election Seriously Senior Leaders Appointed as Election In-Charges

ಗೆಲುವಿಗಾಗಿ ಘಟಾನುಘಟಿ ನಾಯಕರಿಗೆ ಹೊಣೆ!

ಉಸ್ತುವಾರಿಗಳ ಪಟ್ಟಿಯಲ್ಲಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ಶಾಸಕ ಎಂ. ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಸಂಸದ ಎಸ್. ಮುನಿಸ್ವಾಮಿ ಹಾಗೂ ಜಿಲ್ಲಾ ಅಧ್ಯಕ್ಷ ಮತ್ತು ಮಾಜಿ ವಿಧಾನಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಅವರಿಗೂ ಸ್ಥಾನ ನೀಡಲಾಗಿದೆ.

ಹಿರಿಯೂರು ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಸಂಘಟನಾತ್ಮಕವಾಗಿ ಪಕ್ಷವನ್ನು ಬಲಪಡಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಈ ಹಿರಿಯ ನಾಯಕರ ಅನುಭವವನ್ನು ಬಳಸಿಕೊಳ್ಳಲು ಮುಂದಾಗಿದೆ. ಘಟಾನುಘಟಿ ನಾಯಕರಿಗೆ ಹೊಣೆಗಾರಿಕೆ ನೀಡಿರುವುದು ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಸಿದ್ಧತೆಯ ವೇಗವನ್ನು ಹೆಚ್ಚಿಸಿದೆ.

ಎನ್‍ಡಿಎ ಗೆಲುವು, ಕಾಂಗ್ರೆಸ್ ಸೋಲಿಗೆ ರಣತಂತ್ರ: ವಿಜಯೇಂದ್ರ

ಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಒಂದಾಗಿ ಕೆಲಸ ಮಾಡಲಿವೆ. ಎನ್‍ಡಿಎ ಗೆಲುವಿಗಾಗಿ ರಣತಂತ್ರ ರೂಪಿಸುತ್ತೇವೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಹೇಗೆ ಸೋಲಿಸಬೇಕು ಎಂಬುದರ ಬದಲಾಗಿ ನಾವು ಯಾವ ರೀತಿ ಗೆಲ್ಲಬೇಕು ಅನ್ನೋದರ ಬಗ್ಗೆ ರಣತಂತ್ರವನ್ನು ನಾವು ರೂಪಿಸುತ್ತೇವೆ ಎಂದು ತಿಳಿಸಿದರು.

ಹಿರಿಯೂರು ಉಪ ಚುನಾವಣೆ ಯಾವ ಕ್ಷಣದಲ್ಲಿ ಬೇಕಾದರೂ ಘೋಷಣೆ ಆಗಬಹುದು. ನಮ್ಮ ಕೋರ್ ಕಮಿಟಿ ಸಭೆಯಲ್ಲಿ ಸವಿಸ್ತಾರವಾಗಿ ಎಲ್ಲವನ್ನು ಕೂಡ ಚರ್ಚೆ ಮಾಡಿದ್ದೇವೆ. ಬಿಜೆಪಿ ಕೆಲವು ಪ್ರಮುಖ ನಾಯಕರೊಂದಿಗೆ, ಕುಮಾರಸ್ವಾಮಿಯವರ ಜೊತೆಗೂ ಕೂತು ಚರ್ಚೆ ಮಾಡಬೇಕು. ಯಾವ ರೀತಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕು, ಅದರ ಬಗ್ಗೆ ಕೂತು ಚರ್ಚೆ ಮಾಡಿ ತೀರ್ಮಾನವನ್ನು ಮಾಡುತ್ತೇವೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದ ಮೇಲೆ ಕಳೆದ ಎರಡು-ಮೂರು ತಿಂಗಳಲ್ಲಿ ಆಗಲೇ ಹಿರಿಯೂರಿಗೆ ಹೋಗಿ ಬಂದಿದ್ದಾರೆ. ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವನ್ನು ಕೂಡ ತಾವು ನೋಡಿದ್ದೀರಿ. ಆಡಳಿತ ಪಕ್ಷ, ಕಾಂಗ್ರೆಸ್ ಸರ್ಕಾರ ಏನೇ ಆರ್ಭಟ ನಡೆಸಿದರೂ, ಮುಖ್ಯಮಂತ್ರಿಗಳು ಏನೇ ಆರ್ಭಟ ನಡೆಸಿದರೂ ರಾಜ್ಯದ ಜನ ಈ ಸರ್ಕಾರದ ಬಗ್ಗೆ, ಕಾಂಗ್ರೆಸ್ ಸರ್ಕಾರದ ಬಗ್ಗೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.

ರಾಜ್ಯ ಪದಾಧಿಕಾರಿಗಳ ಸಭೆ

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ನಡೆದಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಪ್ರಭಾರಿ ಹರೀಶ್ ದ್ವಿವೇದಿ ಅವರು ಭಾಗವಹಿಸಿದ್ದರು. ಈ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯದಲ್ಲಿ ಸಂಘಟನೆಯನ್ನು ಹೇಗೆ ಬಲಪಡಿಸಬೇಕು ಎಂಬ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ ಎಂದರು.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಡಿನ ಜನರಲ್ಲಿ ಯಾವ ರೀತಿ ಆಕ್ರೋಶ ಇದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ವಿರುದ್ಧ ಹಾಗೂ ಆಡಳಿತ ಪಕ್ಷದ ವಿರುದ್ಧ ಜನಾಕ್ರೋಶವಿದೆ. ನಾವು ಸಕಾರಾತ್ಮಕವಾಗಿ ಹೋರಾಟಗಳನ್ನು ಮಾಡುವುದರ ಮುಖೇನ ಸಂಘಟನೆ ಬಲಪಡಿಸಬೇಕು. ಮುಂದೆ ಬರುವಂತಹ ಜಿಬಿಎ ಚುನಾವಣೆ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕೂಡ ಹೇಗೆ ನಾವು ಮುಂದೆ ಹೋಗುವ ಕುರಿತು ತಿಳಿಸಿದ್ದಾರೆ ಎಂದು ಹೇಳಿದರು.

ಕೆಲಸದಲ್ಲಿ ಸಕ್ರಿಯರಾಗಲು ಕಾರ್ಯಕರ್ತರಿಗೆ ಕರೆ

ಮುಂದೆ ಬರುವಂತಹ ವಿಧಾನಸಭಾ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಕೆಲಸ ಮಾಡಬೇಕಿದೆ. ವಿಧಾನಸಭಾ ಚುನಾವಣೆ ಬಹಳ ದಿನಗಳೇನು ಉಳಿದಿಲ್ಲ. ಆದರೆ ಬಹಳಷ್ಟು ಸವಾಲುಗಳು ನಮ್ಮ ಮುಂದೆ ಇದೆ. ಆ ಸವಾಲುಗಳನ್ನ ಯಾವ ರೀತಿ ನಾವು ಹೇಗೆ ಮೆಟ್ಟಿ ನಿಲ್ಲಬೇಕು, ಯಾವ ರೀತಿ ಯಶಸ್ವಿಯಾಗಿ ಮುಂದೆ ಹೋಗಬೇಕು ಅನ್ನೋದರ ಬಗ್ಗೆನೂ ಕೂಡ ನಮಗೆ ಕೆಲವು ಬೆಳಕು ಚೆಲ್ಲಿದ್ದಾರೆ ಎಂದು ತಿಳಿಸಿದರು.

ರಾಜ್ಯ ಕೋರ್ ಕಮಿಟಿಯ ಸದಸ್ಯರೊಂದಿಗೆ ಅನೌಪಚಾರಿಕವಾಗಿ ಕೆಲವು ವಿಚಾರಗಳನ್ನು ಕೂಡ ಚರ್ಚೆ ಮಾಡಿದ್ದಾರೆ. ರಾಜ್ಯದ ಉಸ್ತುವಾರಿ ಹರೀಶ್ ದ್ವಿವೇದಿಯವರು, ರಾಜ್ಯಕ್ಕೆ ಎಷ್ಟು ಹೆಚ್ಚು ಸಮಯವನ್ನು ಕೊಡುವುದಾಗಿ ತಿಳಿಸಿದ್ದಾರೆ ಎಂದು ನುಡಿದರು. ಅಪಾರವಾದ ಅನುಭವ ಇರುವ ಹರೀಶ್ ದ್ವಿವೇದಿಯವರು ನಮ್ಮ ರಾಜ್ಯಕ್ಕೆ ಹೆಚ್ಚು ಸಮಯವನ್ನು ಕೊಡುವುದರ ಜೊತೆಗೆ ಸಂಘಟನೆ, ನಮಗೂ ಕೂಡ ಒಂದು ದೊಡ್ಡ ಶಕ್ತಿಯನ್ನು ಬಂದಂತಾಗಿದೆ ಎಂದು ಅಭಿಪ್ರಾಯಪಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+