ಹಿರಿಯೂರು ತಾಲೂಕಿನಲ್ಲಿ ಭೀಕರ ಅಪಘಾತ, ನಾಲ್ವರು ಸಾವು

Posted By:
Subscribe to Oneindia Kannada

ಹಿರಿಯೂರು, ಫೆ. 11: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನಕ್ಕೆ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಕಲಘಟಗಿ ತಾಲೂಕಿನ ಎಮ್ಮೆಟ್ಟಿ ಗ್ರಾಮದ ಮಂಜುನಾಥ, ಧಾರವಾಡ ತಾಲೂಕಿನ ಪುಡಕಲಕಟ್ಟಿ ಗ್ರಾಮದ ಸಂತೋಷ ಕಲ್ಕೇರಿ ಗ್ರಾಮದ ಸಂಜಯ್ ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ಧಾರವಾಡದ ಇಟ್ಟಿಗಟ್ಟಿ ಗ್ರಾಮದ ನಿವಾಸಿ ಚಂದ್ರು ಎಂಬುವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.ಮೃತರೆಲ್ಲರೂ 20-25 ವರ್ಷ ಆಸುಪಾಸಿನವರಾಗಿದ್ದಾರೆ.

Hiriyur: Lorry and Cruiser vehicle accident Kills Many

ಕ್ರೂಸರ್ ವಾಹನ ಬೆಂಗಳೂರಿನಿಂದ ಧಾರವಾಡಕ್ಕೆ ವಾಪಸ್ ಬರುತ್ತಿತ್ತು. ಎದುರು ದಿಕ್ಕಿನಿಂದ ಬರುತ್ತಿದ್ದ ಲಾರಿ ರಭಸದಿಂದ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ ಉಳಿದ 11 ಮಂದಿಗೂ ತೀವ್ರಗಾಯಗಳಾಗಿದ್ದು, ಚಿತ್ರದುರ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.(ಒನ್ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
At least 4 persons died on spot when a Lorry collided with Cruiser Vehicle in the wee hours today (Feb 11). The major accident occurred near Javanagondanahalliin Hiriyur Taluk on Chitradugra Bangalore Highway. Over 12 persons injured are admitted to near by hospitals.
Please Wait while comments are loading...