ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಿಂಗಾಯತರಿಗೆ ಇಂದು ಐತಿಹಾಸಿಕ ದಿನ : ಸಚಿವರ ಪತ್ರಿಕಾಗೋಷ್ಠಿ

|
Google Oneindia Kannada News

ಬೆಂಗಳೂರು, ಮಾರ್ಚ್ 19 : 'ಲಿಂಗಾಯತ ಧರ್ಮ ಜಾಗತಿಕ ಧರ್ಮವಾಗಬೇಕು ಎಂದು ಬಸವಣ್ಣ ಅವರು ಬಯಸಿದ್ದರು. ಇಂದು ಅದಕ್ಕೆ ಒಪ್ಪಿಗೆ ಸಿಕ್ಕಿದೆ. ಇದರಿಂದಾಗಿ ನಮ್ಮ ಜವಾಬ್ದಾರಿ ಹೆಚ್ಚಿದೆ' ಎಂದು ಮೂವರು ಸಚಿವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಸಚಿವರಾದ ಎಂ.ಬಿ.ಪಾಟೀಲ್, ಡಾ.ಶರಣ ಪ್ರಕಾಶ್ ಪಾಟೀಲ್ ಮತ್ತು ವಿನಯ್ ಕುಲಕರ್ಣಿ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಲಿಂಗಾಯತ ಪ್ರತ್ಯೇಕ ಧರ್ಮ: ಯಾರು, ಏನು ಹೇಳಿದರು?ಲಿಂಗಾಯತ ಪ್ರತ್ಯೇಕ ಧರ್ಮ: ಯಾರು, ಏನು ಹೇಳಿದರು?

'ವೀರಶೈವರೂ ಲಿಂಗಾಯತ ಧರ್ಮದ ಭಾಗವಾಗಬಹುದು. ಬಸವ ತತ್ವ, ಬಸವವಣ್ಣನ ವಚನಗಳನ್ನು ಒಪ್ಪುವವರಿಗೆ ಅಲ್ಪ ಸಂಖ್ಯಾತರ ಸ್ಥಾನಮಾನವನ್ನು ನೀಡಲಾಗುತ್ತದೆ' ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು : ಸಚಿವ ಸಂಪುಟದ ನಿರ್ಣಯಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು : ಸಚಿವ ಸಂಪುಟದ ನಿರ್ಣಯ

Lingayat

ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

* ಲಿಂಗಾಯತ ಸಮುದಾಯದವರಿಗೆ ಇಂದು ಐತಿಹಾಸಿಕ ದಿನ. ಪ್ರತ್ಯೇಕ ಧರ್ಮಕ್ಕಾಗಿ ಶಿಫಾರಸು ಮಾಡಲು ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ.

* ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ನಮ್ಮ ಜೊತೆಗೆ ಇದ್ದ ಸಮುದಾಯದ ಎಲ್ಲಾ ಜನರಿಗೆ, ಸಂಸ್ಥೆಗಳಿಗೆ ನಮ್ಮ ಧನ್ಯವಾದಗಳು.

* ಬಸವಣ್ಣನವರು ಇದು ಜಾಗತಿಕ ಧರ್ಮವಾಗಬೇಕು ಎಂದು ಕನಸು ಕಂಡಿದ್ದರು. ಆ ಬೇಡಿಕೆ ಇಂದು ಈಡೇರಿದೆ. ಇದರಿಂದಾಗಿ ನಮ್ಮ ಜವಾಬ್ದಾರಿಯೂ ಹೆಚ್ಚಾಗಿದೆ.

* ಕರ್ನಾಟಕ ಅಲ್ಪಸಂಖ್ಯಾತರ ಕಾಯ್ದೆ 2 (ಸಿ) ಪ್ರಕಾರ ಲಿಂಗಾಯತ ಧರ್ಮಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡುವಂತೆ ಶಿಫಾರಸು ಮಾಡಲಾಗುತ್ತದೆ.

English summary
Karnataka cabinet accepts Justice Nagamohan Das report on Lingayat row. In a joint press conference Minister M.B.Patil, Vinay Kulkarni, Sharan Prakash Patil said that, it is a historic day for Lingayat community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X