• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಾತಿ ಧರ್ಮದ ಹಂಗುಗಳಿಲ್ಲದ ಮಡಿಕೇರಿಯ ದಸರಾ

By ಬಿಎಂ ಲವಕುಮಾರ್, ಮೈಸೂರು
|

ಮೈಸೂರು ದಸರಾಕ್ಕೆ ತೆರೆ ಬೀಳುತ್ತಿದ್ದಂತೆ ಕೊಡಗಿನ ಮಂಜಿನ ನಗರಿ ಮಡಿಕೇರಿ ದಸರಾ ಆಚರಣೆಗೆ ಅಣಿಯಾಗುತ್ತದೆ. ಹೀಗಾಗಿಯೇ ಮೈಸೂರು ದಸರಾ ಸ್ವಾಗತಿಸಿದರೆ... ಮಡಿಕೇರಿ ಬೀಳ್ಕೊಡುತ್ತದೆ... ಎಂಬ ಮಾತಿದೆ.

ಮೈಸೂರಿನಲ್ಲಿ ಹಗಲು ನಡೆಯುವ ಜಂಬೂಸವಾರಿ ಗತ ದಿನಗಳ ರಾಜವೈಭವವನ್ನು ಕಣ್ಮುಂದೆ ತಂದರೆ, ಮಡಿಕೇರಿಯಲ್ಲಿ ರಾತ್ರಿ ನಡೆಯುವ ದಶಮಂಟಪಗಳ ಮೆರವಣಿಗೆ ದೇವಲೋಕಕ್ಕೆ ಕರೆದೊಯ್ಯುತ್ತದೆ.

ಮಡಿಕೇರಿ ದಸರಾವೇ ವಿಭಿನ್ನ. ಇಲ್ಲಿ ಅಧಿಕಾರಿಗಳ ದರ್ಬಾರ್ ಇಲ್ಲ. ಸರ್ಕಾರದ ಹಸ್ತಕ್ಷೇಪವಿಲ್ಲ. ಜಾತಿ, ಧರ್ಮಗಳ ಹಂಗುಗಳಿಲ್ಲದೆ ಜನರೇ ಜನರಿಗೋಸ್ಕರ ಆಚರಿಸುವ ಜನೋತ್ಸವವಾಗಿದೆ. ದಸರಾ ಉತ್ಸವವನ್ನು ಕೇವಲ ಹಿಂದೂಗಳು ಮಾತ್ರವಲ್ಲದೆ, ಎಲ್ಲಾ ಮತಗಳ, ಧರ್ಮಗಳ ಜನರು ಒಗ್ಗೂಡಿ ನಡೆಸುತ್ತಾ ಬಂದಿದ್ದಾರೆ. ಆದ್ದರಿಂದಲೇ ಮಡಿಕೇರಿ ದಸರಾ ಭಾವೈಕ್ಯತೆಯನ್ನು ಸಾರುವ ಉತ್ಸವವಾಗಿದೆ. [ಪ್ರವಾಸಿಗರಿಗೆ ಮೈಸೂರೆಂದರೆ ಅದೇಕೆ ಅಷ್ಟು ಇಷ್ಟವಾಗುತ್ತೆ?]

ಮಡಿಕೇರಿ ದಸರಾ ಇತಿಹಾಸ : ಮಡಿಕೇರಿ ದಸರಾಕ್ಕೂ ಶತಮಾನಗಳ ಇತಿಹಾಸವಿದೆ. ಶಿವಮೊಗ್ಗದ ಇಕ್ಕೇರಿಯಿಂದ ಕೊಡಗಿನ ಹಾಲೇರಿಗೆ ಬಂದು ನೆಲೆಸಿ, ಆ ನಂತರ ಅರಸೊತ್ತಿಗೆಯನ್ನು ಸ್ಥಾಪಿಸಿ ಕೊಡಗನ್ನಾಳಿದ ಹಾಲೇರಿ ವಂಶಸ್ಥರು ವಿಜಯದಶಮಿ ಆಚರಣೆಯನ್ನು ಮಾಡುತ್ತಿದ್ದರು. 1781ರಿಂದ 1809ರವರೆಗೆ ಕೊಡಗನ್ನಾಳಿದ ದೊಡ್ಡವೀರ ರಾಜೇಂದ್ರ ಒಡೆಯರ್ ಮೈಸೂರು ಮಹಾರಾಜರು ನಡೆಸುತ್ತಿದ್ದಂತೆ ಆಯುಧಪೂಜೆ, ಶ್ರೀದೇವಿಯ ಆರಾಧನೆ ಸೇರಿದಂತೆ ನವರಾತ್ರಿಯ ಉತ್ಸವವನ್ನು ಆಚರಿಸುತ್ತಿದ್ದರು.

ಆಗಿನ ಕಾಲದಲ್ಲಿ ಪಾಡ್ಯದ ಪ್ರಾತಃ ಕಾಲದಲ್ಲಿ ಏಳುತ್ತಿದ್ದ ಮಹಾರಾಜರು ಮಂಗಳ ಸ್ನಾನ ಮಾಡಿ ನವರಾತ್ರಿ ಉತ್ಸವಕ್ಕೆ ಸಂಕಲ್ಪ ತೊಡುತ್ತಿದ್ದರು. ಆ ನಂತರ ಕೋಟೆಯಲ್ಲಿರುವ ಮಹಾಗಣಪತಿಗೆ ಮೊದಲ ಪೂಜೆ ನೆರವೇರಿಸುವ ಮೂಲಕ ನವರಾತ್ರಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿತ್ತು. ನವರಾತ್ರಿ ಕಾರ್ಯಕ್ರಮಗಳೆಲ್ಲವೂ ಅರಮನೆಯ ಆವರಣದಲ್ಲಿಯೇ ನಡೆಯುತ್ತಿತ್ತು. ನವರಾತ್ರಿ ಉತ್ಸವದಲ್ಲಿ ವಿಶೇಷ ರಾಜರ ದರ್ಬಾರ್, ಕುದುರೆ ಹಾಗೂ ಜಂಬೂಸವಾರಿಯೂ ನಡೆಯುತ್ತಿತ್ತಲ್ಲದೆ, ಕೊಡವರ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವಂತಹ ಕಾರ್ಯಕ್ರಮಗಳು ಹಗಲು ಹೊತ್ತಿನಲ್ಲಿ ನಡೆಯುತ್ತಿದ್ದವು.

ವಿಜಯದಶಮಿಯಂದು ಎಲ್ಲೆಡೆ ದೇವಾಲಯಗಳಲ್ಲಿ ಭಜನೆ, ವಿಶೇಷ ಪೂಜೆ, ಅರ್ಚನೆ, ಅಭಿಷೇಕ, ಉತ್ಸವಗಳು ನಡೆಯುತ್ತಿದ್ದವು. ಅಂದು ಮೈಸೂರಿನಲ್ಲಿ ನಡೆಯುವಂತೆ ಜಂಬೂ ಸವಾರಿಯೂ ನಡೆಯುತ್ತಿತ್ತು. ಮಡಿಕೇರಿಯ ಅರಮನೆ ಆವರಣದಿಂದ ಮೆರವಣಿಗೆ ಆರಂಭವಾಗುತ್ತಿತ್ತು.

ಒಂದು ಕಡೆ ದೇವರ ವಿಗ್ರಹವನ್ನು ಹೊತ್ತ ಅಂಬಾರಿ ಆನೆ, ಮತ್ತೊಂದು ಕಡೆ ಮಹಾರಾಜರನ್ನು ಹೊತ್ತ ಆನೆ ಹೀಗೆ ಎರಡು ಆನೆಗಳು ಮುನ್ನಡೆದರೆ ಸುತ್ತಲೂ ಸಿಂಗಾರಗೊಂಡ ಆನೆಗಳು, ಕುದುರೆಗಳು, ಸೇನಾಧಿಪತಿಗಳು, ಸೈನಿಕರು ಹಾಗೂ ಕೊಡವರು ಸಾಂಪ್ರದಾಯಿಕ ಉಡುಪಿನಲ್ಲಿ ನೃತ್ಯ ಮಾಡುತ್ತಾ ಮೆರವಣಿಗೆಯಲ್ಲಿ ಸಾಗುತ್ತಿದ್ದವು. ಪ್ರಮುಖ ಬೀದಿಗಳಲ್ಲಿ ಸಾಗುತ್ತಿದ್ದ ಮೆರವಣಿಗೆ ಮಹದೇವಪೇಟೆ ಬಳಿಯ ಬನ್ನಿಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ಮುಕ್ತಾಯಗೊಳ್ಳುತ್ತಿತ್ತು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Mysore Dasara welcomes the festivities of Navaratri in Karnataka, but Madikeri Dasara concludes it. So, pack your luggage to witness spectacular Dasara in Madikeri. Do you know the history of Madikeri Dasara? If not read on this article.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more