ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಚ್ಚುದಿನ ಉಳಿಯದ ಮಡಿಕೇರಿ ಮಹಾರಾಜರ ನವರಾತ್ರಿ

By ಬಿಎಂ ಲವಕುಮಾರ್, ಮೈಸೂರು
|
Google Oneindia Kannada News

ಮಹಾರಾಜರ ಈ ನವರಾತ್ರಿ ಉತ್ಸವ ಹೆಚ್ಚು ದಿನ ನಡೆಯಲಿಲ್ಲ. 1834ರಲ್ಲಿ ಕೊಡಗನ್ನಾಳುತ್ತಿದ್ದ ಚಿಕ್ಕವೀರರಾಜನನ್ನು ಬ್ರಿಟೀಷರು ಸೆರೆಹಿಡಿದರು. ಆ ನಂತರ ನವರಾತ್ರಿ ಉತ್ಸವ ಸಾರ್ವಜನಿಕ ಉತ್ಸವವಾಗಿ ಬದಲಾಯಿತು. ನಂತರ ಮಡಿಕೇರಿಯಲ್ಲಿದ್ದ ಭಜನಾಮಂದಿರಗಳು ನವರಾತ್ರಿ ಉತ್ಸವವನ್ನು ಮುಂದುವರೆಸಿದವು.

ಅಲ್ಲದೆ, ಮಡಿಕೇರಿಯ ಕೋಟೆಯನ್ನು ಕಾಯುವ ಕೋಟೆ ಮಾರಿಯಮ್ಮ, ನಗರವನ್ನು ಕಾಯುವ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಸೈನ್ಯವನ್ನು ಕಾಪಾಡುವ ದಂಡಿನ ಮಾರಿಯಮ್ಮ, ಆರೋಗ್ಯ ಹಾಗೂ ಐಶ್ವರ್ಯವನ್ನು ದಯಪಾಲಿಸುವ ಶ್ರೀ ಕಂಚಿಕಾಮಾಕ್ಷಮ್ಮ ಹೀಗೆ ನಾಲ್ಕು ಶಕ್ತಿದೇವತೆಗಳನ್ನು ಪೂಜಿಸುವ ಮೂಲಕ ತೇರನ್ನು ರಚಿಸಿ ಮೆರವಣಿಗೆಯಲ್ಲಿ ಸಾಗುವ ಆಚರಣೆ ರೂಢಿಗೆ ಬಂತು.

ಬಿದಿರಿನ ಅಟ್ಟಣಿಗೆಯಿಂದ ಮಂಟಪವನ್ನು ರಚಿಸಿ ಅದರಲ್ಲಿ ಉತ್ಸವ ಮೂರ್ತಿಯನ್ನು ಇಡಲಾಗುತ್ತಿತ್ತು. ಈ ಉತ್ಸವ ಮೂರ್ತಿಗೆ ಕನ್ಯೆಯರು ಚೌರಿಗೆಯನ್ನು ಬೀಸುತ್ತಿದ್ದರೆ, ಪುರುಷರು ಮಂಟಪವನ್ನು ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿದ್ದರು. ದಾರಿಯುದ್ದಕ್ಕೂ ಪೂಜೆಗಳು ನಡೆಯುತ್ತಿದ್ದವು. ಕೊಡವ ಸಾಂಪ್ರದಾಯಿಕ ವಾಲಗ, ನೃತ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿತ್ತು. ಕೊನೆಗೆ ಮಹದೇವಪೇಟೆ ಬಳಿ ಬನ್ನಿಕಡಿಯುವುದರೊಂದಿಗೆ ದಸರಾ ಆಚರಣೆಗೆ ತೆರೆ ಬೀಳುತ್ತಿತ್ತು.

History of Madikeri spectacular Dasara (Part 2)

ಹಾಲೇರಿ ವಂಶಸ್ಥರ ಕಾಲದಿಂದ ಆರಂಭಗೊಂಡ ಮಡಿಕೇರಿ ದಸರಾ ನಂತರದ ಕಾಲದಲ್ಲಿ ನಿಲ್ಲದೆ ಮುಂದುವರೆಯುತ್ತಾ ಬಂದಿರುವುದು ಇತಿಹಾಸವೇ ಎನ್ನಬೇಕು. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಆಗ ಆಳ್ವಿಕೆ ನಡೆಸುತ್ತಿದ್ದ ಬ್ರಿಟೀಷ್ ಸರ್ಕಾರ ಎಲ್ಲಾ ರೀತಿಯ ಉತ್ಸವವಗಳನ್ನು ಬಹಿಷ್ಕರಿಸಿದಾಗಲೂ ಮಡಿಕೇರಿ ದಸರಾ ನಿಲ್ಲಲಿಲ್ಲವಂತೆ. ಮುಂದೆ 1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿಯೂ ಕರಗವನ್ನು ಹೊರಡಿಸುವುದು ನಿಲ್ಲಲಿಲ್ಲ. ಬದಲಿಗೆ ವರ್ಷದಿಂದ ವರ್ಷಕ್ಕೆ ಮಡಿಕೇರಿ ದಸರಾ ಅಭಿವೃದ್ಧಿಯತ್ತ ಸಾಗತೊಡಗಿತು.

ಮೊದಲಿದ್ದ ನಾಲ್ಕು ಮಂಟಪಗಳ ಜೊತೆಗೆ ಇನ್ನು ಕೆಲವು ದೇವಾಲಯಗಳು ಕೂಡ ಮಂಟಪವನ್ನು ಹೊರಡಿಸುವುದರ ಮೂಲಕ ದಸರಾ ಮೆರವಣಿಗೆಗೆ ಕಳೆಕಟ್ಟತೊಡಗಿದವು. 1958ರಲ್ಲಿ ರಾಜಾಸ್ತಾನದಿಂದ ಬಂದು ಮಡಿಕೇರಿಯ ನೆಲೆಸಿದ್ದ ಭೀಮ್‌ಸಿಂಗ್‌ರವರು ಬಾಣೆಮೊಟ್ಟೆಯ ರಘುರಾಮ ಮಂಟಪವನ್ನು ಮೆರವಣಿಗೆಗೆ ಸೇರ್ಪಡೆ ಮಾಡಿದರು

ಆಗ ಮೆರವಣಿಗೆಯಲ್ಲಿ ನಾಲ್ಕು ಶಕ್ತಿ ದೇವತೆಗಳ ಮಂಟಪದೊಂದಿಗೆ ಪೇಟೆ ಶ್ರೀ ರಾಮಮಂದಿರ, ದೇಚೂರಿನ ರಾಮಮಂದಿರ, ಚಿಕ್ಕಪೇಟೆಯ ಬಾಲಕ ರಾಮಮಂದಿರದ ಮಂಟಪಗಳು ಸಾಗುತ್ತಿದ್ದವು. ಮೊದಲು ಇದ್ದ ನಾಲ್ಕು ಮಂಟಪಗಳು ನಂತರದ ವರ್ಷದಲ್ಲಿ ಐದು, ಏಳು, ಒಂಭತ್ತು ಆಯಿತು. ಬಳಿಕ ಹನ್ನೊಂದಕ್ಕೆ ಏರಿತಾದರೂ ದಸರಾ ಸಮಿತಿ ಮಂಟಪದ ಸಂಖ್ಯೆಯನ್ನು ಹತ್ತಕ್ಕೆ ಸೀಮಿತಗೊಳಿಸಿದೆ.

English summary
Mysore Dasara welcomes the festivities of Navaratri in Karnataka, but Madikeri Dasara concludes it. So, pack your luggage to witness spectacular Dasara in Madikeri. Do you know the history of Madikeri Dasara? If not read on this article.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X