ಮಡಿಕೇರಿಯಲ್ಲಿ ದಸರಾ ಜನೋತ್ಸವವಾದದ್ದು ಹೇಗೆ?

ಅಂದಿನ ದಿನಗಳಲ್ಲಿ ದಸರಾ ಮಂಟಪಗಳ ಮೆರವಣಿಗೆಯಲ್ಲಿ ಧಾರ್ಮಿಕ ಆಚರಣೆ ಇತ್ತಾದರೂ ಈ ಉತ್ಸವಕ್ಕೆ ಸಾರ್ವಜನಿಕ ರಂಗದಲ್ಲಿ ಅಷ್ಟೇನು ಮಹತ್ವದ ಸ್ಥಾನ ದೊರೆತಿರಲಿಲ್ಲ. 1969ರಲ್ಲಿ ಮಡಿಕೇರಿ ಪುರಸಭೆಯ ಅಂದಿನ ಅಧ್ಯಕ್ಷರಾಗಿದ್ದ ದಿ. ಕೆ.ಎಸ್.ಅಪ್ಪಚ್ಚುರವರ ನೇತೃತ್ವದಲ್ಲಿ ಪ್ರಥಮ ಬಾರಿಗೆ ದಸರಾ ಸಮಿತಿಯನ್ನು ರಚಿಸುವ ಮೂಲಕ ಭಜನಾ ಮಂದಿರಗಳನ್ನು ಹಾಗೂ ಕರಗ ದೇವಾಲಯಗಳನ್ನು ಒಂದುಗೂಡಿಸುವ ಮೂಲಕ ಸಾಮೂಹಿಕ ಮೆರವಣಿಗೆಗೆ ಅವಕಾಶ ಮಾಡಿಕೊಡುವುದರೊಂದಿಗೆ ಮಡಿಕೇರಿ ದಸರಾ ಜನೋತ್ಸವವಾಗಲು ಕಾರಣವಾಯಿತು.

ಎಲ್ಲಾ ಮಂಟಪಗಳು ನಿರ್ದಿಷ್ಟ ಸಮಯದಲ್ಲಿ ಹಾದು ಹೋಗುವಂತೆಯೂ ಅಲ್ಲದೆ, ಉತ್ತಮ ಕಲಾಕೃತಿ ಹೊಂದಿದ ಮಂಟಪಗಳಿಗೆ ಬಹುಮಾನಗಳನ್ನು ನೀಡುವ ಸಂಪ್ರದಾಯವೂ ಜಾರಿಗೆ ಬಂತು. ಇದರೊಂದಿಗೆ ಮಂಟಪಗಳ ಮೆರವಣಿಗೆಯಲ್ಲಿ ಒಂದು ಧಾರ್ಮಿಕ ಶಿಸ್ತನ್ನು ಕಾಲೇಜು ರಸ್ತೆಯ ರಾಮಮಂದಿರವು ರೂಪಿಸಿತು.

ಅದೇನೆಂದರೆ ವಿಜಯದಶಮಿ ದಿನದಂದು ನಡೆಯುವ ಮೆರವಣಿಗೆಯಲ್ಲಿ ಪೇಟೆ ಶ್ರೀರಾಮ ಮಂದಿರದ ಮಂಟಪ ಮಂಗಳವಾದ್ಯ ಹಾಗೂ ಕಳಶದೊಂದಿಗೆ ಬಾರದ ಹೊರತು ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ಕರಗ ಹೊರಡುವಂತಿಲ್ಲ. ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಕರಗ ಹೊರಡದ ಹೊರತು ಉತ್ಸವದ ಅಂಗವಾಗಿ ಪ್ರದರ್ಶಿಸಲ್ಪಡುವ ಕರಗಗಳಾಗಲೀ, ಮಂಟಪಗಳಾಗಲೀ ಮೆರವಣಿಗೆಯಲ್ಲಿ ಬರುವಂತಿಲ್ಲ.

History of Madikeri spectacular Dasara (Part 3)

ಎಲ್ಲಾ ಕರಗಗಳು ಹಾಗೂ ಮಂಟಪಗಳು ಶ್ರೀದಂಡಿನ ಮಾರಿಯಮ್ಮನ ಪೂಜೆಯನ್ನು ಸ್ವೀಕರಿಸಿದ ನಂತರವೇ ಬನ್ನಿ ಕಡಿಯಲು ಮೆರವಣಿಗೆಯಲ್ಲಿ ಸಾಗಬೇಕು. ಹಾಗಾಗಿ ಅಂದು ಪೇಟೆಯ ಶ್ರೀರಾಮಮಂದಿರದಿಂದ ಕಳಶ ಹೊತ್ತ ಪಲ್ಲಕ್ಕಿ ಮೆರವಣಿಗೆಯಲ್ಲಿ ಶ್ರಿ ಚೌಟಿ ಮಾರಿಯಮ್ಮ ದೇವಾಲಯಕ್ಕೆ ತೆರಳಿ ಅಲ್ಲಿ ಕರಗ ಪೂಜೆಯನ್ನು ಸ್ವೀಕರಿಸಿ, ಬಳಿಕ ಶ್ರೀ ಕಂಚಿಕಾಮಾಕ್ಷಮ್ಮ ದೇವಾಲಯಕ್ಕೆ ಹೋಗಿ ಅಲ್ಲಿಯೂ ಪೂಜೆಯನ್ನು ಸ್ವೀಕರಿಸಿ ಅಲ್ಲಿಂದ ದಂಡಿನ ಮಾರಿಯಮ್ಮ ದೇವಾಲಯಕ್ಕೆ ಆಗಮಿಸುತ್ತದೆ. ಅದೇ ಸಮಯಕ್ಕೆ ಕೋಟೆ ಮಾರಿಯಮ್ಮ ದೇವಾಲಯದ ಕರಗ ಕೂಡ ಅಲ್ಲಿಗೆ ಬರುತ್ತದೆ. ಬಳಿಕ ಪೇಟೆ ರಾಮಮಂದಿರದ ಕಳಶ ಪೂಜೆ ನಡೆದು ಮೆರವಣಿಗೆ ಸಾಗುತ್ತದೆ.

ಇಂದು ನಗರದ ವಿವಿಧ ದೇವಾಲಯಗಳಾದ ಶ್ರೀ ಪೇಟೆ ರಾಮಮಂದಿರ, ಶ್ರೀಕೋಟೆಮಾರಿಯಮ್ಮ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕೋದಂಡರಾಮ ಮಂದಿರ, ಶ್ರೀ ಚೌಡೇಶ್ವರಿ, ಶ್ರೀದೇಚೂರು ರಾಮಮಂದಿರ, ಕರವಲೆ ಬಾಡಗದ ಶ್ರೀ ಭಗವತಿ ಹಾಗೂ ಶ್ರೀ ಕೋಟೆಗಣಪತಿ ದೇವಾಲಯಗಳ ದಶಮಂಟಪಗಳು ಮೆರವಣಿಗೆಯಲ್ಲಿ ಸಾಗುತ್ತಿವೆ.

ಹಿಂದೆ ಕೇವಲ ಐದೋ ಹತ್ತೋ ಸಾವಿರ ರೂಪಾಯಿಯಲ್ಲಿ ನಿರ್ಮಾಣವಾಗುತ್ತಿದ್ದ ಮಂಟಪಗಳು ಇಂದು ಐದರಿಂದ ಇಪ್ಪತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿವೆ. ಜಗಮಗಿಸುವ ವಿದ್ಯುತ್ ದೀಪಗಳೊಂದಿಗೆ ಹೈಟೆಕ್ ಮಾದರಿಯ ಚಲನವಲನಗಳನ್ನೊಳಗೊಂಡ ಪೌರಾಣಿಕ ಕಥಾಹಂದರದ ಕಲಾಕೃತಿಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದರೆ, ಇಡೀ ನಗರ ವಿದ್ಯುತ್‌ದೀಪಗಳಿಂದ ಸಿಂಗಾರಗೊಂಡು ಕಣ್ಮನ ಸೆಳೆಯುತ್ತದೆಯಲ್ಲದೆ, ದೇವಲೋಕವೇ ಧರೆಗೆ ಇಳಿದು ಬಂದಂತೆ ಭಾಸವಾಗುತ್ತದೆ. ನಗರದ ಗಾಂಧಿ ಮೈದಾನದಲ್ಲಿರುವ ಬೃಹತ್ ವೇದಿಕೆಯಲ್ಲಿ ಜನೋತ್ಸವ ಕಾರ್ಯಕ್ರಮಗಳು ನಡೆದರೆ, ನಗರದಾದ್ಯಂತ ರಾತ್ರಿ ಪೂರ್ತಿ ಅಲ್ಲಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ.

ಮೈಸೂರು ದಸರಾವನ್ನು ವೀಕ್ಷಿಸಿದ ಬಳಿಕ ಪ್ರವಾಹೋಪಾದಿಯಲ್ಲಿ ಜನ ಮಡಿಕೇರಿ ದಸರಾವನ್ನು ವೀಕ್ಷಿಸಲು ಬರುವುದರಿಂದ ಮೈಸೂರಿನಿಂದ ಮಡಿಕೇರಿಗೆ ಅಂದು ವಿಶೇಷ ಬಸ್ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತದೆ. ಒಮ್ಮೆ ಮಡಿಕೇರಿಯ ಮಂಜಿನಲ್ಲಿ ಮಿಂದೆದ್ದು ದಸರಾ ವೀಕ್ಷಿಸಿ ಹೋದವರು ಆ ಸುಂದರ ಕ್ಷಣವನ್ನು ಎಂದೆಂದಿಗೂ ಮರೆಯಲಾರರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+