ಬೆಳಗಾವಿ ಜಿಲ್ಲೆ ವಿಭಜನೆ: ಗುಡ್ ನ್ಯೂಸ್ ಕೊಟ್ಟ ಹೆಚ್ ಕೆ ಪಾಟೀಲ್
ಬೆಳಗಾವಿ: ರಾಜ್ಯದಲ್ಲಿ ಆಡಳಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವುದು ಗುಡ್ ನ್ಯೂಸ್ ಆಗಿದೆ. ಬೆಳಗಾವಿ ವಿಭಜನೆ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸ್ಥಳೀಯ ಶಾಸಕರು ಒಗ್ಗಟ್ಟಿನಿಂದ ನಿರ್ಧಾರ ಕೈಗೊಳ್ಳಬೇಕಿದೆ. ಬೆಳಗಾವಿ ಜಿಲ್ಲೆಯಲ್ಲಿ ಮತ್ತೆರಡು ತಾಲೂಕುಗಳನ್ನ ಜಿಲ್ಲೆಗಳನ್ನಾಗಿ ವಿಭಜಿಸುವ ಕುರಿತು ಸ್ಥಳೀಯ ಜನಪ್ರತಿನಿಧಿಗಳಿಂದ ಒತ್ತಡ ಕೇಳಿ ಬಂದಿದ್ದು, ಇದೀಗ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಮಹತ್ವದ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಾತನಾಡಿ, ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಚಿಕ್ಕೋಡಿ ಜಿಲ್ಲೆಯಾಗಲು ಬಹಳ ದಿನವಿಲ್ಲ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು ಎಂದು ಹೇಳಿದರು. ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಹೊರಬರಲಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರು ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್ಗೆ ದೂರು ನೀಡಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು. ಎಲ್ಲೂ ಇಲ್ಲದ ಗೊಂದಲವನ್ನು ಸೃಷ್ಟಿ ಮಾಡಲು ಏಕೆ ಹೊರಟಿದ್ದೀರಿ?. ಕನ್ನಡಿಗರು ಮರಾಠಿಗರು ಸಹೋದರರಂತೆ ಸಹಬಾಳ್ವೆಯಿಂದ ಇದ್ದೇವೆ. ಯಾಕೆ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ?. ರಾಜಕೀಯ ಉದ್ದೇಶದಿಂದ ಗೊಂದಲ ಸೃಷ್ಟಿ ಮಾಡೋದು ಸೂಕ್ತವಲ್ಲ ಎಂದು ಹೇಳಿದರು.
800 ವರ್ಷಗಳ ಇತಿಹಾಸ ಇರುವ ಚಿಕ್ಕೋಡಿ ನ್ಯಾಯಾಲಯದ ಹೊಸ ಕಟ್ಟಡ ಉದ್ಘಾಟನೆ ಬಹಳ ಸಂತೋಷ ತಂದಿದೆ. ಈ ನ್ಯಾಯಾಲಯಕ್ಕೆ ಅಂಬೇಡ್ಕರ್ ಕೂಡ ಬಂದಿದ್ದರು. ಅವರು ನ್ಯಾಯಕ್ಕಾಗಿ ಹೋರಾಟ ಮಾಡಿರುವ ಇತಿಹಾಸ ಕೇಳಿದ್ದೇವೆ. ಈ ನ್ಯಾಯಾಲಯದ ಬಾರ್ ರಾಜ್ಯಕ್ಕೆ ಬಹು ದೊಡ್ಡ ಕೊಡುಗೆ ಕೊಟ್ಟಿದೆ. ವಿಧಾನಸಭೆ ಸ್ಪೀಕರ್ ಕಟಾವಳಿ ಹೆಸರು ನೆನಪಿಗೆ ಬರುತ್ತದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications