HMT ಗಡಿಯಾರಗಳಿಗೆ ಭರ್ಜರಿ ಡಿಮ್ಯಾಂಡ್‌! ಇಂಡಿಪೆಂಡೆನ್ಸ್ ಡೇ ಸೇಲ್‌ನಲ್ಲಿ ಒಂದೇ ದಿನ ₹35 ಲಕ್ಷ ವಹಿವಾಟು

ಹಾಸನ: ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಹೆಚ್'ಎಂಟಿ ಕೈಗಡಿಯಾರಗಳ ಮಾರಾಟ ದಾಖಲೆಯ ಪ್ರಮಾಣದಲ್ಲಿ ಆಗಿದ್ದು ಒಂದೇ ದಿನ ಸುಮಾರು ₹35 ಲಕ್ಷಕ್ಕೂ ಹೆಚ್ಚು ವಹಿವಾಟು ನಡೆದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರ ಜೊತೆಗೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಸ್ವಾತಂತ್ರ್ಯ ದಿನದ ಪ್ರಯುಕ್ತ ಹೆಚ್ಎಂಟಿ ಕಂಪನಿಯು ವಿಶೇಷ ಆವೃತ್ತಿಯ ಕೆಲ ಅಪರೂಪದ ಕೈಗಡಿಯಾರಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಅಂದು ವಾಚ್ಚುಗಳ ಖರೀದಿಗೆ ಮುಗಿಬಿದ್ದ ಗ್ರಾಹಕರು ಸುಮಾರು ಎರಡು ವರೆ ಕಿಲೋಮೀಟರ್ ಗೂ ಹೆಚ್ಚು ದೂರ ಸಾಲಿನಲ್ಲಿ ನಿಂತು ಖರೀದಿ ಮಾಡಿದರು. ಇದನ್ನು ಕಂಡು ನಾನು ಆಶ್ಚರ್ಯಚಕಿತನಾಗಿದ್ದೆ ಎಂದರು.

HMT Watches Record 35 Lakh in Sales on Independence Day Union Minister H D Kumaraswamy said

ಅಂದು ನಮ್ಮ ಕಡೆಯಿಂದ ಸಾವಿರಾರು ಕೈ ಗಡಿಯಾರಗಳು ಮಾರಾಟವಾಗಿದ್ದು, ಒಂದೇ ₹35 ಲಕ್ಷ ವಹಿವಾಟು ನಡೆದಿರುವುದು ಕಂಪನಿಯನ್ನು ಪುನಶ್ಚೇತನಗೊಳಿಸುವ ನಮ್ಮ ಉದ್ದೇಶಕ್ಕೆ ಮತ್ತಷ್ಟು ಬಲ ನೀಡಿದೆ.
ಹೆಚ್ಎಂ.ಟಿ ಗಡಿಯಾರಗಳ ಬಗ್ಗೆ ಜನರಲ್ಲಿ ಇವತ್ತಿಗೂ ಅಭಿಮಾನ ಗೌರವ ಇದೆ. ಹಿಂದೆ ಹಿಂದೆ ಹೆಚ್ಎಂಟಿ ಗಡಿಯಾರ ಕಟ್ಟುವುದು ಎಂದರೆ ಹೆಮ್ಮೆ ಮತ್ತು ಪ್ರತಿಷ್ಠೆಯ ಸಂಗತಿಯಾಗಿತ್ತು. ಆ ವೈಭವವನ್ನು ಮರಳಿ ತರುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದರು.

ಕಾರ್ಖಾನೆಗೆ ಮರುಜೀವ ನೀಡುವ ನಿಟ್ಟಿನಲ್ಲಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯೋಜನಾ ಆಯೋಗದ ಸದಸ್ಯರಾದ ವಿ.ಕೆ. ಸಾರಸ್ವತ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಠದ ಸಮಿತಿಯನ್ನು ರಚಿಸಲಾಗಿತ್ತು. ಈಗಾಗಲೇ ಸಮಿತಿ ವರದಿಯನ್ನು ನೀಡಿ ಕೆಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಅದರಂತೆಯೇ ಕಾರ್ಖಾನೆಗೆ ಮರುಜೀವ ನೀಡಲು ಈಗಾಗಲೇ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರೊಂದಿಗೂ ಕೂಡ ಮತಕತೆ ನಡೆಸಿದ್ದೇನೆ ಎಂದು ಎಂದು ಹೇಳಿದರು.

ಯುವಕರಿಗೆ ಕೃತಜ್ಞತೆ

ದೊಡ್ಡ ಪ್ರಮಾಣದಲ್ಲಿ ಯುವಕರು ಸ್ವಾತಂತ್ರ್ಯ ದಿನ ವಾಚ್ ಗಳನ್ನು ಖರೀದಿ ಮಾಡಿದ್ದಾರೆ. ವಯಸ್ಸಿನ ಹಂಗಿಲ್ಲದೆ ಹಿರಿಯರು ಕಿರಿಯರು ಮಕ್ಕಳು ಕೂಡ ಸಾಲಿನಲ್ಲಿ ನಿಂತು ಗಡಿಯಾರಗಳನ್ನು ಖರೀದಿ ಮಾಡಿದ್ದಾರೆ. ಎಚ್ಎಂಟಿಯ ಮೇಲೆ ಅವರೆಲ್ಲರೂ ಇರಿಸಿರುವ ಅಭಿಮಾನಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಖ್ಯವಾಗಿ ಯುವಜನತೆ ನಮ್ಮ ಗಡಿಯಾರಗಳಿಗೆ ಅತಿಹೆಚ್ಚು ಅಭಿಮಾನ ತೋರುತ್ತಿದ್ದಾರೆ, ಅವರ ಬೆಂಬಲ ಹೀಗೆಯೇ ಇರಲಿ ಎಂದು ಸಚಿವ ಕುಮಾರಸ್ವಾಮಿ ಅವರು ಕೋರಿದರು.

ನೈಸ್ ಯೋಜನೆಯನ್ನು ನೈಸ್ ಕಂಪನಿಯಿಂದ ಯಾರೋ ಒಬ್ಬರು ಟೇಕ್ ಓವರ್ ಮಾಡಲು ಹೊರಟಿದ್ದಾರೆ! ಟೇಕ್ ಓವರ್ ಮಾಡಲು ಹೊರಟವರು ಯಾರು? ಎಂಬ ಬಗ್ಗೆ ಈ ರಾಜ್ಯದ ಮುಖ್ಯಮಂತ್ರಿಯೇ ಹೇಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು; ನನಗೆ ಒಂದು ಮಾಹಿತಿ ಇದೆ, ಆ ಯೋಜನೆಯನ್ನು ಆ ಕಂಪನಿಯಿಂದ ಯಾರು ಈಗ ಟೇಕ್ ಓವರ್ ಮಾಡಲು ಹೊರಟಿದ್ದಾರೆ! ಈ ಮುಖ್ಯಮಂತ್ರಿಯನ್ನು ಕೇಳುತ್ತೇನೆ, ಇದರಲ್ಲಿ ಯಾರ ಪಾಲಿದೆ? ಯಾರು ಅದನ್ನು ಟೇಕ್ ಓವರ್ ಮಾಡಲು ಹೊರಟಿದ್ದಾರೆ? ಇವೆಲ್ಲವನ್ನೂ ಅವರೇ ಹೇಳಬೇಕು ಎಂದು ಒತ್ತಾಯ ಮಾಡಿದರು. ಇವರು ಮಾಧ್ಯಮಗಳ ಮುಂದೆ, ವೇದಿಕೆ ಮೇಲೆ ಭಾರೀ ವಿನಮ್ರವಾಗಿ ಭಾಷಣ ಮಾಡುವುದು ಬೇರೆ. ಆದರೆ ಒಳಗೆ ನಡೆಯುತ್ತಿರುವುದೇ ಬೇರೆ. ಈ ಮುಖ್ಯಮಂತ್ರಿಯ ಹುಟ್ಟುಗುಣ ಇದೆಯಲ್ಲಾ.. ಅದನ್ನು ಎಲ್ಲರೂ ಬಲ್ಲರು.

ನನ್ನ ಮುಂದಿನ ತಲೆಮಾರುಗಳು ಖರ್ಚು ಮಾಡಿದರೂ ಹಣ ಕರಗದೆ ಇರುವಷ್ಟು ಆಸ್ತಿ ಮಾಡಿದ್ದೇನೆ ಎಂದು ಮೊನ್ನೆ ಹೇಳಿದ್ದಾರೆ. ಬಹಳ ಸಂತೋಷ. ಅಷ್ಟು ಆಸ್ತಿ ಸಂಪಾದನೆ ಮಾಡಿದ್ದರೂ ಈಗಲೂ ಸಹ ಅಧಿಕಾರ ದುರುಪಯೋಗಪಡಿಸಿಕೊಂಡು ನಾನು ಹರಿಶ್ಚಂದ್ರನಾಗುತ್ತೇನೆ, ಸತ್ಯ ಹೇಳ್ತಿನಿ ಎಂದರೆ ಹೇಗೆ? ಪಾಪ.. ನಾನು ಇನ್ನೂ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ರಾಜ್ಯ ಅಳುತ್ತಿದ್ದೇನೆ ಅಂಥ ಹೇಳ್ತಾರೆ. ಆದರೆ ಅವರ ಹುಟ್ಟುಗುಣ ಹೋಗಲ್ಲ ಎಂದು ಹರಿಹಾಯ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+