ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿರ್ಬಂಧ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 12 : ಹೊಗೇನಕಲ್ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಿದೆ. ಆದ್ದರಿಂದ, ಪ್ರವಾಸಿಗರ ಮತ್ತು ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅರಣ್ಯ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ ಬಿಡಲಾಗುತ್ತಿದೆ. ಆದ್ದರಿಂದ, ಹೊಗೇನಕಲ್‌ಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಪ್ರವಾಸಿಗರು ಸುರಕ್ಷತೆಯ ಕಾರಣಕ್ಕಾಗಿ ಸಂಚಾರ ನಿರ್ಬಂಧಿಸಲಾಗಿದೆ.

45 ವರ್ಷದ ಬಳಿಕ ದಾಖಲೆ ಬರೆದ ಕಾವೇರಿ ಕಣಿವೆಯ 4 ಜಲಾಶಯಗಳು!45 ವರ್ಷದ ಬಳಿಕ ದಾಖಲೆ ಬರೆದ ಕಾವೇರಿ ಕಣಿವೆಯ 4 ಜಲಾಶಯಗಳು!

Hogenakkal : travellers entry to falls restricted

ನೀರಿನ ಮಟ್ಟ ಕಡಿಮೆ ಆಗುವ ತನಕ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ನೀರಿನ ಪ್ರಮಾಣ ಕಡಿಮೆಯಾದ ಕೂಡಲೇ ಜಲಪಾತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತದೆ.

ಭರ್ತಿಯಾದ ಕೆಆರ್‌ಎಸ್ ಒಡಲು, 1 ಕೋಟಿಗೂ ಅಧಿಕ ಆದಾಯಭರ್ತಿಯಾದ ಕೆಆರ್‌ಎಸ್ ಒಡಲು, 1 ಕೋಟಿಗೂ ಅಧಿಕ ಆದಾಯ

ಮಲೆ ಮಹದೇಶ್ವರಬೆಟ್ಟಕ್ಕೆ ಸಾವಿರಾರು ಜನರು ಆಗಮಿಸುತ್ತಾರೆ. ಬಹುತೇಕರು ದೇವರ ದರ್ಶನ ಮುಗಿಸಿಕೊಂಡು ಹೊಗೇನಕಲ್ ಜಲಪಾತ ವೀಕ್ಷಣೆಗೆ ಆಗಮಿಸುತ್ತಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಲೆ ಮಹದೇಶ್ವರ ಬೆಟ್ಟ, ಪಾಲಾರ್ ಮತ್ತು ಕೊಕ್ಕರೆ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿಯನ್ನು ನಿಯೋಜನೆ ಮಾಡಿ ಹೊಗೆನೇಕಲ್‌ಗೆ ವಾಹನಗಳು ಹೋಗದಂತೆ ತಡೆಯಲಾಗುತ್ತಿದೆ.

ಶ್ರೀರಂಗಪಟ್ಟಣದ ಕೆಆರ್‌ಎಲ್ ಜಲಾಶಯದಿಂದ 62,319 ಕ್ಯುಸೆಕ್, ಕಬಿನಿ ಜಲಾಶಯದಿಂದ 81,200 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಆದ್ದರಿಂದ, ಜಲಪಾತದ ಸುತ್ತಲೂ ಭಾರೀ ನೀರು ಹರಿಯುತ್ತಿದೆ.

English summary
After water released from Kabini and Krishnaraja Sagar dams (KRS) travelers entry to Hogenakkal waterfalls banned. Tourist will allow visiting waterfalls after water level come to control.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X