Rain News: ಮಳೆ ಅಬ್ಬರ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ!
ಮಳೆ ಅಬ್ಬರ ಕಡಿಮೆ ಆಗುತ್ತಿಲ್ಲ, ಮುಂಗಾರು ಮಳೆ ತೀವ್ರತೆ ಮತ್ತಷ್ಟು ಹೆಚ್ಚಾಗುತ್ತಿದೆ. ಈ ಕಾರಣಕ್ಕೆ ಇದೀಗ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಭರ್ಜರಿ ಮಳೆ ಬೀಳುವ ಮುನ್ಸೂಚನೆ ಇರುವ ಕಾರಣಕ್ಕೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಗೊತ್ತೆ? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.
ಮಳೆ.. ಮಳೆ.. ಎಲ್ಲೆಲ್ಲೂ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಳೆ ಅಬ್ಬರಕ್ಕೆ ಜನರ ಜೀವನವು ಕೂಡ ಸಂಕಷ್ಟದ ಸುಳಿಗೆ ಸಿಲುಕಿದ್ದು, ಮಳೆ ನಿಂತರೆ ಸಾಕಪ್ಪಾ ಅಂತಾ ಜನರು ಕೂಡ ಕಾಯ್ತಾ ಇದ್ದಾರೆ. ಪರಿಸ್ಥಿತಿ ಹಿಗಿದ್ದಾಗ ಮುಂದಿನ 48 ಗಂಟೆಗಳ ಕಾಲ, ಮತ್ತಷ್ಟು ಜೋರಾಗಿ ಮುಂಗಾರು ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಕಾರಣ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ನದಿಗಳ ಬಳಿ ಸುಳಿಯದಂತೆ ಎಚ್ಚರಿಕೆ ಬ್ಯಾನರ್ ಹಾಕಲಾಗುತ್ತಿದೆ. ಹಾಗಾದ್ರೆ, ಇದೀಗ ರಜೆ ಘೋಷಣೆ ಮಾಡಿರುವ ಜಿಲ್ಲೆ & ತಾಲೂಕುಗಳು ಯಾವುವು? ಮಾಹಿತಿ ಇಲ್ಲಿದೆ ಮುಂದೆ ಓದಿ.

ಈ ಜಿಲ್ಲೆಗಳಲ್ಲಿ ರಜೆ ಘೋಷಣೆ!
ಮಳೆ.. ಮಳೆ.. ಮಳೆ.. ಈಗಿನ ಪರಿಸ್ಥಿತಿ ನೋಡಿದರೆ ಮುಂಗಾರು ಮಳೆ ಆರ್ಭಟ ಸದ್ಯಕ್ಕೆ ಸೈಲೆಂಟ್ ಆಗುವ ಯಾವುದೇ ಮುನ್ಸೂಚನೆ ಇಲ್ಲ. ಮುಂದಿನ ವಾರ ಕೂಡ ಇದೇ ರೀತಿಯಲ್ಲಿ ಮಳೆ ಅಬ್ಬರ ಗ್ಯಾರಂಟಿ ಆಗಿದೆ. ಹೀಗಿದ್ದಾಗ ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರುವ ಕಾರಣ ಶಾಲೆ & ಕಾಲೇಜು ಬಂದ್ ಮಾಡಲು ಆದೇಶ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಬೀಳುತ್ತಿರುವ ಕಾರಣ, ಶಾಲಾ & ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಜುಲೈ 20 ರಂದು ರಜೆ ಇರಲಿದೆ.
ಹಾಸನದಲ್ಲೂ ರಜೆ ಘೋಷಣೆ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಇದೇ ರೀತಿ ಮಳೆ ಅಬ್ಬರ ಜೋರಾಗಿದ್ದು, ನಾಳೆ ಜಿಲ್ಲೆಯ ಎಲ್ಲಾ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೇ ಉಡುಪಿಯಲ್ಲಿ ಕೂಡ ಮಳೆ ಆರ್ಭಟ ಹೆಚ್ಚಾದ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ನೀಡಲಾಗಿದ್ದರೂ, ಪದವಿ ಕಾಲೇಜು, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಜೆ ಇಲ್ಲವೆಂದು ಮಾಹಿತಿಯನ್ನ ನೀಡಲಾಗಿದೆ. ಹಾಸನ ಜಿಲ್ಲೆಯ 6 ತಾಲೂಕುಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಸಕಲೇಶಪುರ ಸೇರಿ ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ & ಅರಕಲಗೂಡು ತಾಲೂಕು ಪೂರ್ತಿ ಮಳೆ ಅಬ್ಬರಕ್ಕೆ ತತ್ತರಿಸಿದೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದಿನ 48 ಗಂಟೆ ರಣಭೀಕರ ಮಳೆ!
ಒಟ್ನಲ್ಲಿ ಮಳೆರಾಯ ಬಿಡುವು ನೀಡದೆ ಕರ್ನಾಟಕ ರಾಜ್ಯದಲ್ಲಿ ಭರ್ಜರಿಯಾಗಿ ಸುರಿಯುತ್ತಿದ್ದು, ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ ಹೀಗಾಗಿ ಎಲ್ಲೆಲ್ಲೂ ಭಾರಿ ಮಳೆ ಬೀಳುತ್ತಿದೆ. ಕರಾವಳಿ & ಮಲೆನಾಡು ಕರ್ನಾಟಕದಲ್ಲಿ ಮಾತ್ರ ಅಲ್ಲ, ಉತ್ತರ ಕರ್ನಾಟಕ & ದಕ್ಷಿಣ ಕರ್ನಾಟಕದ ಭಾಗದಲ್ಲಿ ಕೂಡ ಮಳೆರಾಯ ಅಬ್ಬರಿಸಿದ್ದು ಎಲ್ಲೆಲ್ಲೂ ಬರೀ ನೀರೆ ಕಾಣ್ತಿದೆ ಪರಿಸ್ಥಿತಿ ಹೀಗಿದ್ದಾಗಲೇ ಮುಂದಿನ 48 ಗಂಟೆ ಕಾಲ ಮತ್ತಷ್ಟು ರಣಭೀಕರ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗೆ ಭಾರಿ ಮಳೆ ಬೀಳುವ ಜಿಲ್ಲೆಗಳಲ್ಲಿ ಜನರು ಎಚ್ಚರಿಕೆ ವಹಿಸುವುದು ಅತ್ಯಗತ್ಯ.












Click it and Unblock the Notifications