• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರೀ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

|
Google Oneindia Kannada News

ಬೆಂಗಳೂರು, ನವೆಂಬರ್ 19: ರಾಜ್ಯದಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶುಕ್ರವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿತ್ರದುರ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರವೂ ರಜೆ ಘೋಷಿಸಲಾಗಿದೆ.

"ಎಡೆಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆಗಳ ಕಾರ್ಯನಿರ್ವಹಣೆ ಕುರಿತು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿರ್ಧರಿಸುವಂತೆ,," ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್. ಆರ್ ಆದೇಶ ಹೊರಡಿಸಿದ್ದಾರೆ.

"ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹವಾಮಾನವನ್ನು ಅವಲಂಬಿಸಿ ಸ್ಥಳೀಯ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಅಗತ್ಯ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ರಜೆ ಘೋಷಿಸಿದರೆ, ನಂತರ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು," ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಶುಕ್ರವಾರ ನಗರದಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. "ಮಕ್ಕಳು ಶಾಲೆಗಳಿಗೆ ತೆರಳಲು ತೊಂದರೆ ಅನುಭವಿಸುತ್ತಾರೆ, ಇದರಿಂದಾಗಿ ನಾವು ಶಾಲೆಗಳನ್ನು ಒಂದು ದಿನದ ಮಟ್ಟಿಗೆ ಮುಚ್ಚುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ,'' ಎಂದು ಮಂಜುನಾಥ್ ತಿಳಿಸಿದರು.

Holiday Announces For Schools In These Districts For Two Days Due To Heavy Rain

ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳ ಪ್ರಕಾರ ಶುಕ್ರವಾರ ಮತ್ತು ಶನಿವಾರ ರಜೆ ಘೋಷಿಸಿದ್ದಾರೆ.

ಚಿಕ್ಕಬಳ್ಳಾಪುರ ಡಿಡಿಪಿಐ ಕೆ.ಎಂ. ಜಯರಾಮ ರೆಡ್ಡಿ ಮಾತನಾಡಿ, ಜಿಲ್ಲೆಯ ಶಾಲಾ- ಪಿಯು ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಾಲೆಗೆ ಹೋಗುವ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಕೂಡ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಾದ್ಯಂತ ಒಂದರಿಂದ ಹತ್ತನೇ ತರಗತಿಯವರೆಗೆ ಶುಕ್ರವಾರ ಮತ್ತು ಶನಿವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕವಿತಾ. ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ; ಮೂವರು ಸಾವು
ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯ ಅವಾಂತರಗಳು ಮುಂದುವರಿದಿವೆ.

ಭಾರೀ ಮಳೆ ಆರ್ಭಟಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯ ಬೆಟ್ಟಹಲಸೂರು ಕ್ರಾಸ್ ಬಳಿ ರಸ್ತೆ ಕಾಣದೆ ಡಿವೈರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ 9 ಗಂಟೆಗೆ ನಡೆದಿದೆ.

ಗ್ರಾಹಕರಿಲ್ಲದೆ ಬೀದಿ‌ಬದಿ ವ್ಯಾಪಾರಸ್ತರ ನೋವು
ಗ್ರಾಹಕರ ನಿರೀಕ್ಷೆಯಲ್ಲಿ ಎಂದಿನಂತೆ ಬಂಡವಾಳ ಹೂಡಿ, ತರಕಾರಿ ಮಾರಾಟಗಾರರು, ಚಾಟ್ಸ್ ವ್ಯಾಪಾರಿಗಳು ಅಗತ್ಯ ಆಹಾರ ಸಾಮಾಗ್ರಿಗಳನ್ನು ತಯಾರಿಸಿಟ್ಟುಕೊಂಡಿದ್ದಾರೆ. ಆದರೆ ಜಿಟಿಜಿಟಿ ಮಳೆಯ ಕಾರಣ ಗ್ರಾಹಕರು ಮನೆಯಿಂದ ಹೊರಗೆ ಬರುತ್ತಿಲ್ಲ. ಇದರಿಂದ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿದ್ದಾರೆ. ಕೊರೊನಾ ಲಾಕ್‌ಡೌನ್ ಒಂದೆಡೆ ಬರೆ ಎಳೆದರೆ, ಮತ್ತೊಂದೆಡೆ ನಿರಂತರವಾದ ಮಳೆ ಬದುಕನ್ನು ದುಸ್ತರವಾಗಿಸಿದೆ ಎಂದು ವ್ಯಾಪಾರಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಸಚಿವರ ಮನೆ ರಸ್ತೆಗಳು ಜಲಮಯ
ಸಚಿವರಾದ ಮುರುಗೇಶ್ ನಿರಾಣಿ, ಶ್ರೀರಾಮುಲು, ಡಾ.ಕೆ. ಸುಧಾಕರ್, ಸಿ.ಸಿ. ಪಾಟೀಲ್, ಎಂ.ಪಿ. ರೇಣುಕಾಚಾರ್ಯ, ಎಸ್.ಆರ್. ಪಾಟೀಲ್ ವಾಸವಾಗಿರುವ ಸ್ಯಾಂಕಿ ರಸ್ತೆಯಲ್ಲಿರುವ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ ಬಳಿ ಕೂಡ ರಸ್ತೆಯ ಮೇಲೆ ಸುಮಾರು 3 ಅಡಿಯಷ್ಟು ನೀರು ಸಂಗ್ರಹವಾಗಿದೆ.

ಇದರಿಂದಾಗಿ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ ಮುಂಭಾಗದ ರಸ್ತೆ ಜಲಮಯವಾಗಿದ್ದು, ರಸ್ತೆಯಲ್ಲಿ ಓಡಾಡುವುದಕ್ಕೆ ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಇನ್ನು ಇಂಜಿನ್​ಗೆ ನೀರು ಹೋಗಿ ಆಟೋ ಕೈಕೊಟ್ಟಿದ್ದು, ಆಟೋ ಸ್ಟಾರ್ಟ್ ಮಾಡಲು ಚಾಲಕ ಹರಸಾಹಸಪಟ್ಟಿದ್ದಾರೆ.

   600 ವರ್ಷಗಳ ನಂತರ ನಾಳೆ ಸಂಭವಿಸಲಿದೆ ಸುದೀರ್ಘ ಚಂದ್ರಗ್ರಹಣ | Oneindia Kannada
   English summary
   Due to torrential rains, many districts, including Bengaluru, have announced holiday for schools on Friday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X