School Holiday: ರಣಭೀಕರ ಮಳೆ ಮುಂದುವರೆದ ಹಿನ್ನೆಲೆ ಈ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

School Holiday: ರಾಜ್ಯದಲ್ಲಿ ಬೇಸಿಗೆ ರಜೆ ಮುಕ್ತಯವಾಗಿ ಮೇ 29ರಿಂದ ಶಾಲೆಗಳು ಪುನರಾರಂಭ ಆಗಿವೆ. ಆದರೆ, ಕೆಲವೆಡೆ ಮಾತ್ರ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಕಾರಣ ಏನೆಂದು ಸಂಪೂರ್ಣ ಮಾಹಿತಿ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯಕ್ಕೆ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ರಣಭೀಕರ ಮಳೆ ಮುಂದುವರೆದಿದೆ. ಕೆಲವೆಡೆ ಈಗಾಗಗಲೇ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದು, ಇನ್ನೂ ಶನಿವಾರ (ಮೇ 31) ಸಹ ವರುಣಾರ್ಭಟ ಮುಂದುವರೆದ ಕಾರಣ ಮಕ್ಕಳ ಹಿತದೃಷ್ಟಿಯಿಂದ ಈ ಜಿಲ್ಲೆಯಲ್ಲಿ ಅಂಗನವಾಡಿ, 1-10ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Holiday declared for All Anganwadi schools in This district of state on May 31

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಣಭೀಕರ ಮಳೆ ಮುಂದುವರೆದ ಪರಿಣಾಮ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, 1-10ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಣಭೀಕರ ಮಳೆ ಮುಂದುವರೆದ ಪರಿಣಾಮ ಹಲವೆಡೆ ಪ್ರಾಣಹಾನಿಗಳು ಸಂಭವಿಸಿವೆ. ಶುಕ್ರವಾರವೂ ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ ಆಗಿದೆ. ಇನ್ನೂ ಶನಿವಾರ ಸಹ ಭಾರೀ ಮಳೆ ಮುಂದುವರೆದಿದ್ದು, ಇನ್ನೇನು ಅನಾಹುತಗಳು ಸಂಭವಿಸಲಿವೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.

ಎರಡು ದಿನ ರಜೆ: ಈಗಾಗಲೇ ಭಾರೀ ಮಳೆ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಮೇ 29 ಹಾಗೂ 30ರಂದು ಎರಡು ದಿನ ಶಾಲಾ-ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದ್ದು, ರಾಜ್ಯದ ಹಲವು ಜಿಲ್ಲಗಳಲ್ಲಿ ಭಾರೀ ಮಳೆ ಸುರಿದ ಕಾರಣ ನದಿ-ಕೆರೆ, ಕಟ್ಟೆಗಳು ತುಂಬುವುದಲ್ಲದೆ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡ ಕಾರಣ ಗುರುವಾರ, ಶುಕ್ರವಾರ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದರು.

ರೆಡ್‌ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಕೊಡಗು ಜಿಲ್ಲೆಗೆ ಈ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಆದ್ದರಿಂದ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ರಜೆ ನಿರ್ಧಾರ ತೆಗೆದುಕೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+