Heavy Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ಘೋಷಣೆ
Heavy Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ( ಮೇ 26) ಬೆಳ್ಳಂಬೆಳಗ್ಗೆ ಮಳೆರಾಯ ಆರ್ಭಟ ಶುರು ಮಾಡಿದ್ದಾನೆ. ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಹಲವೆಡೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ಮೇ 26) ಬೆಳ್ಳಂಬೆಳಗ್ಗೆ ಮಳೆರಾಯ ಆರ್ಭಟ ಶುರು ಮಾಡಿದ್ದಾರೆ. ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಹಲವೆಡೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

* ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆ, ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿದೆ. ಈ ಆದೇಶವನ್ನು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಭಾನುವಾರ (ಮೇ 25) ಜಾರಿಗೊಳಿಸಿದ್ದಾರೆ. ಮಕ್ಕಳ ಸುರಕ್ಷತೆಯನ್ನ ಖಾತ್ರಿಪಡಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಂದುವರೆದ ಪರಿಣಾಮ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ಈ ನಿರ್ಧಾರವವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.
* ಉಡುಪಿ ಜಿಲ್ಲೆಯಲ್ಲೂ ಸಹ ಭಾರೀ ಮಳೆ ಮುಂದುವರೆದ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಹೀಗೆ ಮಳೆ ಮುಂದುವರೆದರೆ ರಜೆ ವಿಸ್ತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಇದೀಗ ಹವಾಮಾನ ಇಲಾಖೆಯು, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂದಿನ ರೆಡ್ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಯಿರಿ.
ಇಂದು ಸಹ ಭಾರೀ ಮಳೆ ಮುಂದುವರೆದ ಪರಿಣಾಮ ಮಂಗಳೂರು ನಗರದ ಹಲವೆಡೆ ರಸ್ತೆಗಳು ಕೆರೆಯಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಅಧಿಕಾರಿಗಳ ಪ್ರಕಾರ, ಜಿಲ್ಲೆಯಾದ್ಯಂತ ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ.
ಕೊಟ್ಟಾರ ಜಂಕ್ಷನ್, ಮಾಲೆಮಾರ್, ಮಹಾವೀರ ವೃತ್ತ ಜವಾವೃತಗೊಂಡಿದ್ದು, ಉರ್ವ, ಮಟಡಕಣಿ, ಕುದ್ರೋಳಿ ಮತ್ತು ಕೊಡಿಯಾಲ್‌ಬೈಲ್‌ಗಳಲ್ಲಿ ಸಣ್ಣ ಪ್ರಮಾಣದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತೊಕ್ಕುಟ್ಟು, ಗೂಡಿನಬಳಿ, ಮರಕಡ, ಪಣಂಬೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳೂ ಜಲಾವೃತಗೊಂಡಿವೆ ಎಂದು ತಿಳಿದುಬಂದಿದೆ.












Click it and Unblock the Notifications