School Holiday: ಮೈಸೂರು, ದಕ್ಷಿಣ ಕನ್ನಡ ಸೇರಿದಂತೆ ಈ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜಿಗೆ ರಜೆ

ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳ ಮೇಲೂ ಚಂಡಮಾರುತದ ಪ್ರಭಾವವಿದ್ದು, ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ್ದರಿಂದ ಸೋಮವಾರ ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿತ್ತು, ಮಂಗಳವಾರ ಕೂಡ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ಮೈಸೂರು, ರಾಮನಗರ, ಉಡುಪಿ, ಕೋಲಾರ, ಕೊಡಗು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ಕೂಡ ಶಾಲಾ ಕಾಲೇಜುಗಳನ್ನು ಮುಚ್ಚಲಾಗುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Holiday declared for schools and collges in Dakshin Kannada kodagu chamarajanagar ditrsicts

ಚಾಮರಾಜನಗರ ಜಿಲ್ಲೆಯಲ್ಲಿ ರಜೆ ಘೋಷಣೆ

ಫೆಂಗಲ್ ಚಂಡಮಾರುತದ ಪರಿಣಾಮ ಚಾಮರಾಜನಗರ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಮಂಗಳವಾರ ಕೂಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3ರ ಮಂಗಳವಾರವು ಸಹ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (12ನೇ ತರಗತಿಯವರೆಗೆ ಮಾತ್ರ) ಡಿಸೆಂಬರ್ 3ರಂದು ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.

ವಿಪರೀತ ಮಳೆಯಾಗುತ್ತಿರುವುದರಿಂದ ಸಾರ್ವಜನಿಕರು ನದಿ, ತೊರೆಗಳು, ವಿದ್ಯುತ್ ಕಂಬದ ಸಮೀಪ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ದೂರುಗಳಿಗೆ 1077 ಅಥವಾ 0824-2442590 ಸಂಖ್ಯೆಗೆ ಕರೆ ಮಾಡುವಂತೆ ಕೇಳಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (12ನೇ ತರಗತಿಯವರೆಗೆ ಮಾತ್ರ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿಗೆ 1077 ಅಥವಾ 0820-2574802 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕೂಡ 1 ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಎಲ್ಲಾ ಜಿಲ್ಲೆಗಳಲ್ಲಿ ಪದವಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+