Holiday: ನಾಳೆ ರಾಜ್ಯದ ಎರಡು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ

Holiday: ರಾಜ್ಯದ ಹಲವು ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ಈವರೆಗೂ ಒಂದಲ್ಲ ಒಂದು ಕಾರಣಕ್ಕೆ ಸಾಲು ರಜೆಗಳನ್ನೇ ನೀಡಲಾಗಿದೆ. ಇದೀಗ ಎರಡು ಜಿಲ್ಲೆಗಳಲ್ಲಿ ಸೋಮವಾರ (ಆಗಸ್ಟ್‌ 17) ರಜೆ ಘೊಷಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿ ಸಾಲು ಹಬ್ಬಗಳು ಬರುತ್ತವೆ. ಹಾಗೆಯೇ ಇದೀಗ ಕರವಾಳಿ ಭಾಗದಲ್ಲಿ ನಾಗರ ಪಂಚಮಿ ಹಬ್ಬದ ಸಡಗರ ಕಳೆಗಟ್ಟಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ತಮ್ಮದೇ ಆದ ಪದ್ಧತಿ ಮತ್ತು ಆಚಾರ-ವಿಚಾರಗಳೊಂದಿಗೆ ಈ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಆಗಸ್ಟ್ 17, 2026) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Holiday declared for schools colleges government offices in Dakshina Kannada and Udupi districts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ

ಕರಾವಳಿ ಭಾಗದ ಜನರು ನಾಗರ ಪಂಚಮಿ ಹಬ್ಬವನ್ನು ತಮ್ಮ ಮೂಲಸ್ಥಾನಗಳಲ್ಲಿ ಅದ್ಧೂರಿಯಾಗಿ ಆಚರಿಸುತ್ತಾರೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಈ ಧಾರ್ಮಿಕ ಆಚರಣೆಯಲ್ಲಿ ಭಾಗವಹಿಸಲು ಅನುಕೂಲ ಆಗುವಂತೆ ಆಗಸ್ಟ್ 17ರಂದು ರಜೆ ನೀಡಬೇಕೆಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ರಜೆ ಘೋಷಣೆ

ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯಲ್ಲೂ ನಾಗರ ಪಂಚಮಿ ಆಚರಣೆಯ ಮಹತ್ವವನ್ನು ಪರಿಗಣಿಸಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಅವರು ಆಗಸ್ಟ್ 17ರಂದು ಶಾಲೆಗಳು, ಪದವಿಪೂರ್ವ ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿ ಅಧಿಕೃತ ಆದೇಶ ನೀಡಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸಾರ್ವತ್ರಿಕ ರಜೆಯಿಂದ ಕರಾವಳಿ ಭಾಗದ ಜನರು ತಮ್ಮ ಕುಟುಂಬಸ್ಥರೊಂದಿಗೆ ತೆರಳಿ ನಾಗದೇವರಿಗೆ ಹಾಲೆರೆದು, ಪೂಜೆ ಪುನಸ್ಕಾರಗಳಲ್ಲಿ ಪಾಲ್ಗೊಳ್ಳಲು ಅನುಕೂಲ ಆದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+