School Holiday: ಭಾರಿ ಮಳೆ ಹಿನ್ನೆಲೆ ರಾಜ್ಯದ ಈ ಭಾಗಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School Holiday: ರಾಜ್ಯದಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಜಲಮೂಲಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಇದೀಗ ಮಂಗಳವಾರ (ಆಗಸ್ಟ್ 4) ರಣಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳ ಈ ಭಾಗದಲ್ಲಿ ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಾಲೆಗಳಿಗೆ ರಜೆ ಘೋಷಣೆ
ಮಂಗಳವಾರ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲೆಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ, ಮುಲ್ಕಿ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ಭಾಗಗಳಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಹಾಗೂ ಐಟಿಐ, ಡಿಫ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಉಡುಪಿಯಲ್ಲೂ ಸಹ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ.ಅವರು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಲೇಜುಗಳಿಗೆ ಪ್ರಮುಖ ಸೂಚನೆಗಳು
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕಾಲೇಜಿನ ಮುಖ್ಯಸ್ಥರು ಹಾಗೂ ಸಂಬಂಧಪಟ್ಟವರು ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.
* ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
* ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವಾಗ ಸುರಕ್ಷಿತವಾಗಿ ತಲುಪುವ ಬಗ್ಗೆ ಕಾಲೇಜು ಮುಖ್ಯಸ್ಥರು ನಿಗಾ ವಹಿಸಬೇಕು.
* ಕಠಿಣವಾದ ಅಥವಾ ಅಪಾಯಕಾರಿ ದಾರಿ ಇರುವ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರಲು ಸೂಚಿಸುವುದು.
* ದುರ್ಬಲ ಹಾಗೂ ಶಿಥಿಲಗೊಂಡ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸಬಾರದು.
* ಮಳೆಯಿಂದಾಗಿ ನಷ್ಟವಾಗಿರುವ ಕಲಿಕಾ ಸಮಯವನ್ನು ಸರಿದೂಗಿಸಲು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಬೇಕು.
* ವಿದ್ಯಾರ್ಥಿಗಳು ನೀರಿರುವ ತಗ್ಗು ಪ್ರದೇಶ, ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಪೋಷಕರು ಮತ್ತು ಕಾಲೇಜು ಮುಖ್ಯಸ್ಥರು ಜಾಗ್ರತೆ ವಹಿಸಬೇಕು.
* ವಿದ್ಯಾರ್ಥಿಗಳು ಕಾಲೇಜಿಗೆ ತೆರಳುವ ವಾಹನಗಳ ಸುರಕ್ಷತೆಯನ್ನು ಪರಿಶೀಲಿಸಬೇಕು.
* ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಬೇಕು.
ತುರ್ತು ನೆರವಿಗೆ ಕಂಟ್ರೋಲ್ ರೂಂ ಸಂಖ್ಯೆಗಳು
* 24x7 ಟೋಲ್ ಫ್ರೀ ಸಂಖ್ಯೆ / ಕಂಟ್ರೋಲ್ ರೂಂ: 1077 / 0820-2574802 (DC Office)
* ಉಡುಪಿ ತಾಲೂಕು: 0820-2520417
* ಕಾರ್ಕಳ ತಾಲೂಕು: 08258-230201
* ಕುಂದಾಪುರ ತಾಲೂಕು: 08254-230357
* ಬ್ರಹ್ಮಾವರ ತಾಲೂಕು: 0820-2560494
* ಬೈಂದೂರು ತಾಲೂಕು: 08254-251657
* ಕಾಪು ತಾಲೂಕು: 0820-2551444
* ಹೆಬ್ರಿ ತಾಲೂಕು: 08253-250201
* ಉಡುಪಿ ನಗರಸಭೆ: 0820-2520306


Click it and Unblock the Notifications
