Holiday: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Shool Holiday: ಬೇಸಿ ರಜೆಗಳು ಮುಗಿದ ಮೇಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಒಂದಲ್ಲ ಒಂದು ವಿಚಾರಕ್ಕೆ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ಇಂದು (ಜುಲೈ 26) ಈ ಭಾಗಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತೆ ಆರ್ಭಟ ಮುಂದುವರೆದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಮಳೆ ಇದೀಗ ಮತ್ತೆ ಬುಧವಾರ ಜೂನ್ 25ರಿಂದ ಆರ್ಭಟ ಶುರು ಮಾಡಿದೆ. ಇಂದು (ಜೂನ್ 26) ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಗುರುವಾರವೂ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಕೇವಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದ್ದರೆ, ಕೆಲವು ಕಡೆ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಎಲ್ಲೆಲ್ಲಿ ರಜೆ? ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲ ಇಲ್ಲಿನ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂರು ತಾಲುಕಿನ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಜಿಲ್ಲೆಯ ಖಾನಾಪುರ, ಕಿತ್ತೂರು ತಾಲೂಕಿನಲ್ಲಿ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ ಶಾಲೆಗಳಿಗೆ ರಜೆ: ಹಾಸನ ಜಿಲ್ಲೆಯಲ್ಲೂ ಸಹ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನಗನೆಲೆ ಇಲ್ಲಿನ 3 ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಸಕಲೇಶಪುರ , ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಕಾಲೇಜುಗಳಿಗೆ ರಜೆ ಇಲ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರೆದ ಹಿನ್ನೆಲೆ ಇಲ್ಲಿನ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ. ಇನ್ನೂ ಕಾಲೇಜುಗಳುಗೆ ರಜೆ ಇರುವುದಿಲ್ಲ, ಎಂದಿನಂತೆ ನಡೆಯಲಿವೆ ಎಂದು ತಿಳಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ: ಉತ್ತರ ಕನ್ನಡ ಜಿಲ್ಲೆಯಲ್ಲೂ ರಣಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಇಲ್ಲಿನ ಜೋಯಿಡಾ, ದಾಂಡೇಲಿ ಎರಡೂ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
ಐದು ತಾಲ್ಲೂಕುಗಳಲ್ಲಿ ರಜೆ: ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಂಡುಕೇಳರಿಯದ ಮಳೆ ಆರ್ಭಟಿಸುವ ಮಳೆ ಮುನ್ಸೂಚನೆ ಹಿನ್ನೆಲೆ ಇಲ್ಲಿನ ಕಳಸ, ಮೂಡಿಗೆರೆ, ಶೃಂಗೇರಿ ,ಕೊಪ್ಪ, ಎನ್‌ಆರ್ ಪುರ 5 ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.












Click it and Unblock the Notifications