School Holiday: ಫೆಬ್ರವರಿ 7ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School Holiday: ಸಾಮಾನ್ಯವಾಗಿ ಹಬ್ಬಗಳು, ವಿದ್ಯಾರ್ಥಿಗಳಿಗೆ ಪ್ರಕೃತಿ ವಿಕೋಪದಿಂದ ತೊಂದರೆ ಆಗುವಂತಹ ಮುನ್ಸೂಚನೆ ಸಮಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಆದರೆ, ಇದೀಗ ಬೇರೆಯದ್ದೇ ಕಾರಣಕ್ಕೆ ರಾಜ್ಯದ ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಫೆಬ್ರವರಿ 7, 2025ರಂದು ರಜೆ ಘೋಷಿಸಲಾಗಿದೆ. ಸಂಪೂರ್ಣ ಮಾಹಿತಿನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೊಡವರ ಸಂಸ್ಕೃತಿ ಉಳಿವಿಗಾಗಿ ಕೊಡಗಿನಲ್ಲಿ ನಡೆಯುತ್ತಿರುವ ಕೊಡವಾಮೆ ಬಾಳೋ ಪಾದಯಾತ್ರೆಗೆ ಬೆಂಬಲಿಸಿ ಫೆಬ್ರವರಿ 7ರಂದು ದಕ್ಷಿಣ ಕೊಡಗಿನ 5 ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕುಟ್ಟದಿಂದ ಮಡಿಕೇರಿವರೆಗೆ ಆರಂಭ ಆಗಿರುವ ಕೊಡವಾಮೆ ಬಾಳೊ ಪಾದಯಾತ್ರೆಯು ಮಡಿಕೇರಿಯಲ್ಲಿ ಸೇರುವ ಅಂತಿಮ ದಿನ ಅಂದರೆ ಫೆಬ್ರವರಿ 7ರಂದು ದಕ್ಷಿಣ ಕೊಡಗಿನ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳು ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಮಟೂರುವಿನ ಜೆ.ಸಿ ಶಿಕ್ಷಣ ಸಂಸ್ಥೆ, ಟಿ.ಶೆಟ್ಟಿಗೇರಿ ರೂಟ್ಸ್ ಶಿಕ್ಷಣ ಸಂಸ್ಥೆ, ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಸಂಸ್ಥೆ, ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾ ಸಂಸ್ಥೆ, ಗೋಣಿಕೊಪ್ಪದ ಕಾಪ್ಸ್ ವಿದ್ಯಾಸಂಸ್ಥೆಗೆ ರಜೆ ಘೋಷಿಸಲಾಗಿದೆ.
ಕೊಡವ ಆಡಳಿತ ಮಂಡಳಿಯಲ್ಲಿ ಇರುವ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಶಿಕ್ಷಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಜೆ ನೀಡಬೇಕೆಂದು ಆ ಶಾಲೆಗಳ ಮಕ್ಕಳ ಪೋಷಕರು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಮಾನ್ಯತೆ ನೀಡಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ರಜೆ ಘೋಷಿಸಲಾಗಿದೆ.
ಜನವರಿ 9ರಂದು ರಜೆ ಘೋಷಣೆ: ಇನ್ನು ಜನವರಿ 09ರಂದು ಬೀದರ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಈ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ರಾಜ್ಯಸಭೆಯಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎನ್ನುವ ವಿಚಾರ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲೂ ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು.
ಕರ್ನಾಟಕದಲ್ಲೂ ಕೂಡ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ವಿವಿಧ ದಲಿತ ಪರ ಸಂಘಟನೆಯಿಂದ ಬೀದರ್ ಬಂದ್‌ಗೆ ಕರೆ ನೀಡಿದ್ದು, ಈ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಬೀದರ್ ಜಿಲ್ಲಾ ಶಾಲಾ ಶಿಕ್ಷಣ ಉಪನಿರ್ದೇಶಕ ಎಸ್‌ಎಸ್ ಪ್ರಸನ್ನಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್ ಅವರು ಜನವರಿ 08ರಂದು ಜನವರಿ 9ರಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದರು. ಅಷ್ಟೇ ಅಲ್ಲದೆ ಹುಬ್ಬಳ್ಳಿ ಧಾರವಾಡದಲ್ಲೂ ಕೂಡ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಈ ಭಾಗದ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದರು.
ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ. ಅಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು ಎಂದು ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ಹೇಳಿದ್ದರು. ಅಂಬೇಡ್ಕರ್ ಅವರ ಹೆಸರನ್ನು ಕಾಂಗ್ರೆಸ್ ತೆಗೆದುಕೊಳ್ಳುತ್ತಿರುವುದಕ್ಕೆ ಬಿಜೆಪಿ ಸಂತೋಷವಾಗಿದೆ. ಆದರೆ ಪಕ್ಷವು ಅವರ ಬಗ್ಗೆ ತನ್ನ ನಿಜವಾದ ಭಾವನೆಗಳ ಬಗ್ಗೆ ಮಾತನಾಡಬೇಕು ಎಂದು ಗೃಹ ಸಚಿವರು ಹೇಳಿದ್ದರು.












Click it and Unblock the Notifications