Holiday: ರಾಜ್ಯದ 5 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School Holiday: ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾರಣಾಂತರಗಳಿಂದ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಿಸಲಾಗಿದೆ. ಹಾಗೆಯೇ ಇದೀಗ ಈ 5 ಜಿಲ್ಲೆಗಳಲ್ಲಿ ಇಂದು (ಜುಲೈ 3) ಕೂಡ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ರಜೆ ಮುಗಿದು ಶಾಲೆಗಳು ಕೂಡ ಆರಂಭ ಆಗಿವೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಹಲವೆಡೆ ಕಾರಣಾಂತರಗಳಿಂದ ಸಾಲು ರಜೆಗಳೇ ಸಿಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ.

ಎಲ್ಲೆಲ್ಲಿ ರಜೆ?: ಇದೀಗ ಇಂದು (ಜುಲೈ 3) ರಣಭೀಕರ ಮಳೆ ಮುಂದುವರೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಐದು ಜಿಲ್ಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ತಾಲ್ಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಎಲ್ಲೆಲ್ಲಿ ರಜೆ?: ಕಳೆದ ಕೆಲ ದಿನಗಳಿಂದ ನಿಂತಿದ್ದ ಮುಂಗಾರು ಮಳೆ ಆರ್ಭಟ ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚುರುಕು ಪಡೆದಿದೆ. ಅದರಲ್ಲೂ ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಮುಂದುವರೆಸಿದ್ದಾರೆ. ಈಗಾಗಲೇ ರಣ ಮಳೆಯಿಂದ ಹಲವು ಕಡೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿ ಆಗಿವೆ.
ಶಾಲೆ-ಕಾಲೇಜುಗಳಿಗೆ ರಜೆ: ಭಾರೀ ಮಳೆ ಮುಂದುವರೆದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ಎನ್ಆರ್ ಪುರ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗಳಿಗಿಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ರಜೆ ಘೋಷಣೆ: ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರೆದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಾಂಡೇಲಿ ಮತ್ತು ಜೋಯಿಡಾ ತಾಲೂಕಿನಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಾಲಾ-ಕಾಲೇಜುಗಳಿಗೆ ರಜೆ: ರಣಭೀಕರ ಮಳೆ ಮುಂದುವರೆದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.
ಶಾಲೆ-ಕಾಲೇಜುಗಳಿಗೆ ರಜೆ: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗ ಮತ್ತು ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುಂದುವರೆದ ಪರಿಣಾಮ ಸುಳ್ಯ, ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಹೀಗೆ ಮಳೆ ಮುಂದುವರೆದರೆ, ರಜೆ ವಿಸ್ತರೆಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ.












Click it and Unblock the Notifications