School Holiday: ಶಾಲೆಗಳಿಗೆ ರಜೆ ಘೋಷಣೆ
School Holiday: ಸಾಮಾನ್ಯವಾಗಿ ಹಬ್ಬಗಳು, ವಿದ್ಯಾರ್ಥಿಗಳಿಗೆ ಪ್ರಕೃತಿ ವಿಕೋಪದಿಂದ ತೊಂದರೆ ಆಗುವಂತಹ ಮುನ್ಸೂಚನೆ ಸಮಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಆದರೆ ಇದೀಗ ಬೇರೆಯದ್ದೇ ಕಾರಣದಿಂದ ರಾಜ್ಯದ ಈ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದು (ಜನವರಿ 20) ರಜೆ ಘೋಷಣೆ ಮಾಡಲಾಗಿದೆ. ಹಾಗಾದರೆ ಎಲ್ಲಿ ಹಾಗೂ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಆಗುವ ರೀತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ಸಂಘಣೆಗಳು ಇಂದು (ಜನವರಿ 20) ಬಾಗಲಕೋಟೆ ಬಂದ್‌ಗೆ ಕರೆ ಕೊಟ್ಟಿವೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಾಗಲಕೋಟೆ, ನವಗಿರಿ, ವಿದ್ಯಾಗಿರಿ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಸರಣಿ ಪರೀಕ್ಷೆಯ ಪರೀಕ್ಷೆಯ ಪ್ರಥಮ ಭಾಷೆ ಪತ್ರಿಕೆಯನ್ನೂ ಜಿಲ್ಲೆಯಾದ್ಯಂತ ಜನವರಿ 27ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ್ತೊಂದೆಡೆ ಇಂದು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಂಡ ಪರಿಣಾಮ ನಗರ ಬಸ್ನಿ ಲ್ದಾಣದಲ್ಲಿ ಪ್ರಯಾಣಿಕರು ಪರದಾಡಿನ ಘಟನೆಗಳು ನಡೆದಿವೆ. ಬಳಿಕ ಪ್ರಯಾಣಿಕರು ಯಾವುದೇ ಪರ್ಯಾವ ಮಾರ್ಗವಿಲ್ಲದೆ ಖಾಸಗಿ ಆಟೋಗಳ ಮೂಲಕ ಪ್ರಯಾಣ ಮಾಡಲು ಮುಂದಾಗಿದ್ದಾರೆ. ಇದೀಗ ನವನಗರ, ವಿದ್ಯಾಗಿರಿಯಲ್ಲಿ ಅಂಗಡಿ ಮುಗ್ಗಟ್ಟುಗಳು ಕ್ಲೋಸ್ ಆಗಿವೆ ಎಂದು ತಿಳಿದುಬಂದಿದೆ.
ಬೆಳಗ್ಗೆ 9:30ರಿಂದ 10 ಗಂಟೆ ಸುಮಾರಿಗೆ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರಿಂದ ನಗರದಲ್ಲಿ ಬಂದ್ ನಡೆಸಲಾಗುತ್ತದೆ. ಈ ವೇಳೆ ಅಂಗಡಿಯನ್ನು ಯಾರಾದರೂ ಓಪನ್ ಮಾಡಿದವರಿಗೆ ಬಂದ್ ಮಾಡುವಂತೆ ಮನವಿ ಮಾಡಲಿದ್ದಾರೆ. ಬಳಿಕ 12 ಗಂಟೆ ಸುಮಾರಿಗೆ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಮಿತ್ ಶಾ ಹೇಳಿದ್ದೇನು?: ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಷಣದ ವೇಳೆ, ಅಂಬೇಡ್ಕರ್, ಅಂಬೇಡ್ಕರ್ ಅಂತಾ ನಾಮಸ್ಮರಣೆ ಮಾಡುವುದು ಒಂದು ಫ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ನಾಮಸ್ಮರಣೆ ಮಾಡಿದರೆ 7 ಜನ್ಮಗಳಿಗೆ ಸ್ವರ್ಗ ಸಿಗುತ್ತಿತ್ತು ಎಂದು ಹೇಳಿದ್ದರು. ಇದಕ್ಕೆ ಇದೀಗ ಬರೀ ಕರ್ನಾಟಕ ಮಾತ್ರವಲ್ಲದೆ, ದೇಶಾದ್ಯಂತ ಆಕ್ರೋಶಗಳು ಭುಗಿಲೆದ್ದಿವೆ.
ಬೀದರ್ & ಧಾರವಾಡದಲ್ಲಿ ರಜೆ: ಇದೇ ವಿಚಾರವಾಗಿ ಜನವರಿ 09ರಂದು ಬೀದರ್ ಬಂದ್‌ಗೆ ಕರೆ ನೀಡಲಾಗಿತ್ತು. ಈ ಹಿನ್ನೆಲೆ ಈ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಬೀದರ್ ಜಿಲ್ಲಾ ಶಾಲಾ ಶಿಕ್ಷಣ ಉಪನಿರ್ದೇಶಕ ಎಸ್‌ಎಸ್ ಪ್ರಸನ್ನಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದರು.
ಅಷ್ಟೇ ಅಲ್ಲದೆ ಇದೇ ವೇಳೆ ಹುಬ್ಬಳ್ಳಿ ಧಾರವಾಡದಲ್ಲೂ ಕೂಡ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಈ ಭಾಗದ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದರು.












Click it and Unblock the Notifications