School Holiday: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ: ಶಿಕ್ಷಣಾಧಿಕಾರಿ ಆದೇಶ

School Holiday: ಸಾಮಾನ್ಯವಾಗಿ ಶಾಲೆಗಳಿಗೆ ಪ್ರಕೃತಿ ವಿಕೋಪಗಳು, ವಿಶೇಷ ಕಾರ್ಯಕ್ರಮಗಳ ವೇಳೆ ರಜೆ ಘೋಷಣೆ ಮಾಡಲಾಗುತ್ತದೆ. ಆದರೆ ಇದೀಗ ರಾಜ್ಯದ ಈ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇರೆಯದ್ದೇ ಉದ್ದೇಶಕ್ಕೆ ರಜೆ ಘೋಷಣೆ ಮಾಡಲಾಗಿದೆ. ಹಾಗದಾರೆ ಯಾವ ಜಿಲ್ಲೆಯಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿ ಯಾವುದೇ ತೊಂದರೆ ಆಗಬಾರದೆಂದು ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹಾಗೆಯೇ ಇದೀಗ ಇಂದು (ಫೆಬ್ರವರಿ 24) ಈ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Holiday Declared to Schools in This District of State Today

ಬುಲ್ಡೋಟಾ ಉಕ್ಕಿನ ಕಾರ್ಖನೆ ಸ್ಥಾಪನೆ ವಿರೋಧಿಸಿ ಪರಿಸರ ಹಿತರಕ್ಷಣಾ ವೇದಿಕೆ ವತಿಯಿಂದ ಇಂದು ಅಂದರೆ ಸೋಮವಾರ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಣಾಧಿಕಾರಿ ಟಿ.ಎಸ್‌.ಶಂಕರಯ್ಯ ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ಪರಿಸರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಬಿ.ಎಸ್.ಪಿ.ಎಲ್.ಕಾರ್ಖಾನೆ ವಿರುದ್ಧ ಫೆ ೨೪ರಂದು ನಡೆಯುವ 'ಕೊಪ್ಪಳ ಬಂದ್' ನಿಮಿತ್ತ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಪ್ಪಳ ಬಂದ್ ನಿಮಿತ್ತ ಮಕ್ಕಳ ಹಿತರಕ್ಷಣೆಯ ದೃಷ್ಟಿಯಿಂದ ಕೊಪ್ಪಳ ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಮಂಜೂರು ಮಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬಂದ್‌ ಘೋಷಣೆಯಾದ ದಿನವೇ ಖಾಸಗಿ ಶಾಲೆಗಳ ಒಕ್ಕೂಟ ಬಂದ್‌ ಬೆಂಬಲಿಸಿ ಶಾಲೆಗಳಿಗೆ ರಜೆ ಘೋಷಿಸಿದ್ದವು. ಆದರೆ, ಸರ್ಕಾರಿ ಶಾಲೆಗಳಿಗೆ ರಜೆ ನೀಡಿರಲಿಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡುವಂತೆ ಶಾಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ಸೂಚಿಸಿದ ಹಿನ್ನೆಲೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ಬಂದ್‌ಗೆ ಕರೆ: ಇತ್ತೀಚೆಗಷ್ಟೇ ಬೀದರ್‌ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಈ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ರಾಜ್ಯಸಭೆಯಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎನ್ನುವ ವಿಚಾರ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ರಾಷ್ಟ್ರಮಟ್ಟದಲ್ಲೂ ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿತ್ತಯ. ಕರ್ನಾಟಕದಲ್ಲೂ ಕೂಡ ಆಕ್ರೋಶಗಳು ಭುಗಿಲೆದ್ದಿತ್ತು.

ಈ ಹಿನ್ನೆಲೆ ವಿವಿಧ ದಲಿತ ಪರ ಸಂಘಟನೆ‌ಯಿಂದ ಬೀದರ್ ಬಂದ್‌ಗೆ ಕರೆ ನೀಡಿದ್ದು, ಈ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+