Holiday: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Holiday: ವಿದ್ಯಾರ್ಥಿಗಳಿಗೆ ಸಾಮಾನ್ಯವಾಗಿ ಹಬ್ಬಗಳು, ಪ್ರಕೃತಿ ವಿಕೋಪದಿಂದ ತೊಂದರೆ ಆಗುವಂತಹ ಮುನ್ಸೂಚನೆಯಂತಹ ಸಮಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ. ಫೆಬ್ರವರಿಯ ಈ ದಿನದಂದು ಶಾಲಾ-ಕಲೇಜುಗಳಿಗೆ ರಜೆ ನೀಡಲಾಗಿದೆ. ಹಾಗಾದರೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಜನವರಿಯಲ್ಲಿ ಸಾಲು ಸಾಲು ರಜೆ ಬಂದಿದ್ದವು. ಕೆಲವು ಜಿಲ್ಲೆಗಳಲ್ಲಿ ಹಬ್ಬಗಳನ್ನು ಹೊರತುಪಡಿಸಿ ಬೇರೆ ದಿನಗಳಲ್ಲೂ ಕೂಡ ಬೇರೆ ಕಾರಣಗಳಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇನ್ನು ಫೆಬ್ರವರಿ 26, 2025ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

Holiday for Schools and Colleges in All Districts of State on February 26

ಫೆಬ್ರವರಿಯಲ್ಲಿ ಕೇವಲ 4 ಭಾನುವಾರಗಳು ಮತ್ತು ಶಿವರಾತ್ರಿ ಹಬ್ಬದ ರಜೆಗಳು ಬರುತ್ತವೆ. ಶಿವರಾತ್ರಿ ಹಬ್ಬವನ್ನ ಇದೇ ತಿಂಗಳು 26ರಂದು ಆಚರಣೆ ಮಾಡಲಾಗುತ್ತದೆ. ಈ ದಿನದಂದು ನಾಡಿನ ಎಲ್ಲಾ ದೇವಾಲಯಗಳನ್ನು ಶಿವನ ಆರಾಧನೆ ನಡೆಯುತ್ತವೆ. ಈ ಹಿನ್ನೆಲೆ ರಜೆ ನೀಡಲಾಗಿದೆ.

ಅದರಂತೆಯೇ ಮಾರ್ಚ್‌ನಲ್ಲೂ ಭಾನುವಾರಗಳನ್ನು ಹೊರತುಪಡಿಸಿ ಎರಡು ರಜೆ ಇವೆ. ಮಾರ್ಚ್‌ 3 ರಂದು ಯುಗಾದಿ ಹಬ್ಬ, ಮಾರ್ಚ್‌ 31ಕ್ಕೆ ಈದ್‌ ಹಬ್ಬ ಇರಲಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಸಿಕ್ಕಂತಾಗಲಿದೆ.

5 ಶಾಲಾ-ಕಾಲೇಜುಗಳಿಗೆ ರಜೆ: ಕೊಡವರ ಸಂಸ್ಕೃತಿ ಉಳಿವಿಗಾಗಿ ಕೊಡಗಿನಲ್ಲಿ ನಡೆಯುತ್ತಿರುವ ಕೊಡವಾಮೆ ಬಾಳೋ ಪಾದಯಾತ್ರೆಗೆ ಬೆಂಬಲಿಸಿ ಫೆಬ್ರವರಿ 7ರಂದು ದಕ್ಷಿಣ ಕೊಡಗಿನ 5 ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕುಟ್ಟದಿಂದ ಮಡಿಕೇರಿವರೆಗೆ ಆರಂಭ ಆಗಿರುವ ಕೊಡವಾಮೆ ಬಾಳೊ ಪಾದಯಾತ್ರೆಯು ಮಡಿಕೇರಿಯಲ್ಲಿ ಸೇರುವ ಅಂತಿಮ ದಿನ ಅಂದರೆ ಫೆಬ್ರವರಿ 7ರಂದು ದಕ್ಷಿಣ ಕೊಡಗಿನ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳು ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಮಟೂರುವಿನ ಜೆ.ಸಿ ಶಿಕ್ಷಣ ಸಂಸ್ಥೆ, ಟಿ.ಶೆಟ್ಟಿಗೇರಿ ರೂಟ್ಸ್ ಶಿಕ್ಷಣ ಸಂಸ್ಥೆ, ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಸಂಸ್ಥೆ, ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾ ಸಂಸ್ಥೆ, ಗೋಣಿಕೊಪ್ಪದ ಕಾಪ್ಸ್ ವಿದ್ಯಾಸಂಸ್ಥೆಗೆ ರಜೆ ಘೋಷಿಸಲಾಗಿದೆ.

ಕೊಡವ ಆಡಳಿತ ಮಂಡಳಿಯಲ್ಲಿ ಇರುವ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಶಿಕ್ಷಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಜೆ ನೀಡಬೇಕೆಂದು ಆ ಶಾಲೆಗಳ ಮಕ್ಕಳ ಪೋಷಕರು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಮಾನ್ಯತೆ ನೀಡಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ರಜೆ ಘೋಷಿಸಲಾಗಿದೆ.

ಅಮಿತ್ ಶಾ ಹೇಳಿಕೆ ವಿರುದ್ಧ ಪ್ರತಿಭಟನೆ: ಇನ್ನು ಜನವರಿ 09ರಂದು ಬೀದರ್‌ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಈ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ರಾಜ್ಯಸಭೆಯಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎನ್ನುವ ವಿಚಾರ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲೂ ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು.

ಕರ್ನಾಟಕದಲ್ಲೂ ಕೂಡ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ವಿವಿಧ ದಲಿತ ಪರ ಸಂಘಟನೆ‌ಯಿಂದ ಬೀದರ್ ಬಂದ್‌ಗೆ ಕರೆ ನೀಡಿದ್ದು, ಈ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+