ಕೂಡಲಸಂಗಮದಲ್ಲಿ ಸಂಕ್ರಾಂತಿ ಪುಣ್ಯಸ್ನಾನ ನಿಷೇಧಿಸಿ ಸರ್ಕಾರದ ಆದೇಶ!
ಬೆಂಗಳೂರು, ಜ. 11: ಕೊರೊನಾ ವೈರಸ್ ಸೃಷ್ಟಿಸಿರುವ ಆತಂಕ ಒಂದೆರಡಲ್ಲ. ಕೋವಿಡ್ನಿಂದಾಗಿ ಕಳೆದ ವರ್ಷದ ಬಹುತೇಕ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸಲು ಸರ್ಕಾರ ನಿಷೇಧ ಹೇರಿತ್ತು. ಇದೀಗ ಸಂಕ್ರಾಂತಿ ಆಚರಣೆಗೂ ಕೋವಿಡ್ ಅಡ್ಡವಾಗಿದೆ. ಪ್ರತಿವರ್ಷ ಮಕರ ಸಂಕ್ರಾಂತಿಯಂದು ಲಕ್ಷಾಂತರ ಭಕ್ತರು ಕೂಡಲಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದರು. ಆದರೆ ಈ ಬಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ಸಂಗಮದಲ್ಲಿ ಪುಣ್ಯಸ್ನಾನವನ್ನು ನಿಷೇಧಿಸಲಾಗಿದೆ.
ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ, ಪ್ರತಿವರ್ಷದಂತೆ ಈ ವರ್ಷವೂ ಕೂಡಲ ಸಂಗಮ ಸುಕ್ಷೇತ್ರಕ್ಕೆ ಮಕರ ಸಂಕ್ರಾಂತಿ ನಿಮಿತ್ತ, ಜನವರಿ 14ರಂದು ಪುಣ್ಯಸ್ನಾನಕ್ಕಾಗಿ ಜೊತೆಗೆ ಶ್ರೀ ಸಂಗಮೇಶ್ವರ ಹಾಗೂ ಶ್ರೀ ಬಸವೇಶ್ವರ ದರ್ಶನಕ್ಕಾಗಿ ರಾಜ್ಯದ ಹಲವು ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ಈ ವರ್ಷ ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಗಟ್ಟುವ ಸಲುವಾಗಿ ಸಂಕ್ರಾಂತಿಯಂದು ಶ್ರೀ ಸಂಗಮೇಶ್ವರ ದೇವಸ್ಥಾನದ ಆವರಣದ ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ಸಂಗಮದಲ್ಲಿ ಪುಣ್ಯಸ್ನಾನ ಮಾಡುವುದನ್ನು ನಿಷೇಧಿಲಾಗಿದೆ ಎಂದು ಕೂಡಲ ಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತರು ಆದೇಶ ಮಾಡಿದ್ದಾರೆ.

ಪ್ರತಿವರ್ಷ ಸಂಕ್ರಾಂತಿಯಂದು ಲಕ್ಷಾಂತರ ಭಕ್ತರು ಕೂಡಲಸಂಗಮದಲ್ಲಿ ಸ್ನಾನ ಮಾಡಿ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ಇಷ್ಟಲಿಂಗ ಪೂಜೆ ಮಾಡಿಕೊಳ್ಳುವುದು ಸಂಪ್ರದಾಯ. ಆದರೆ ಈ ಬಾರಿ ಪುಣ್ಯಸ್ನಾನವನ್ನು ನಿಷೇಧಿಸಲಾಗಿದೆ ಎಂದು ಅಭಿವೃದ್ಧಿ ಮಂಡಳಿ ಆದೇಶ ಮಾಡಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications