• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಹರ್ಷನ ಕೊಲೆ ಆರೋಪಿಗಳ ವಿಡಿಯೋ ಕಾಲ್: ಪರಪ್ಪನ ಅಗ್ರಹಾರ ತಪಾಸಣೆ

|
Google Oneindia Kannada News

ಬೆಂಗಳೂರು, ಜು. 12 : ಕೈದಿಗಳ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಜೈಲು ಸಿಬ್ಬಂದಿ ಜತೆ ತೆರಳಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕೈದಿಗಳ ಬ್ಯಾರಕ್‌ಗಳನ್ನು ತಪಾಸಣೆ ನಡೆಸಿದರು. ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಕೈದಿಗಳಿಗೆ ಸೂಚನೆ ನೀಡಿದರು. ಅತಿ ಭದ್ರತಾ ಬ್ಯಾರಕ್ ಗಳಿಗೆ ಭೇಟಿ ನೀಡಿ, ಮಾದಕ ವಸ್ತು ಹಾಗೂ ಮೊಬೈಲ್ ಬಳಕೆ ಕುರಿತು ತಪಾಸಣೆ ಮಾಡಿದರು.

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ಬೆಂಗಳೂರು ಜೈಲಿನಿಂದ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಇದು ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಹರ್ಷನ ಕೊಲೆ ಆರೋಪಿಗಳು ಜೈಲಿನಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ.

Home Minister Araga Jnanedra surprise visit to Bengaluru central jail

ಮಹಿಳಾ ಕೈದಿಗಳ ಜತೆ ಸಂವಾದ:

ಜೈಲಿನಲ್ಲಿರುವ ಸೌಲಭ್ಯ, ಮಹಿಳಾ ಕೈದಿಗಳ ಸಮಸ್ಯೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಹವಾಲು ಸ್ವೀಕರಿಸಿದ್ದಾರೆ. ಗೃಹ ಸಚಿವರ ತಪಾಸಣೆ ಮುಂದುವರೆದಿದ್ದು, ಮುಗಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿದ್ದಾರೆ.

Recommended Video

   ಶ್ರೀಲಂಕಾ: ಕೊಲಂಬೊದಲ್ಲಿರುವ ಅಧ್ಯಕ್ಷರ ಭವನವನ್ನು ಪ್ರತಿಭಟನಾಕಾರರು ಸ್ವಚ್ಛಗೊಳಿಸಿದರು | OneIndia Kannada
   English summary
   Bengaluru jail video call row: Home Minister Araga Jnanedra visited Bengaluru central jail and warned to jail authorities. know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X