ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಹಲವು ಶಕ್ತಿಗಳ ಕೈವಾಡ: ಆರಗ ಜ್ಞಾನೇಂದ್ರ

|
Google Oneindia Kannada News

ಬೆಂಗಳೂರು ಜುಲೈ 27: ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ. ಹತ್ಯೆಯಂತಹ ಅಮಾನವೀಯ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಪೊಲೀಸ್ ಇಲಾಖೆ ಶೀಘ್ರವೇ ಬಂಧಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಮೃತ ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆಗೈದ ಹಂತಕರನ್ನು ಪತ್ತೆ ಹಚ್ಚಲು ಈಗಾಗಲೇ ರಚನೆಯಾಗಿರುವ ಪೊಲೀಸ್ ತಂಡ ಕಾರ್ಯಚರಣೆ ಕೈಗೊಂಡಿದೆ. ಪ್ರವೀಣ್ ಅವರ ಅಂತ್ಯಕ್ರಿಯೆ ಬುಧವಾರ ಜರುಗಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿಯಿಂದ ವರ್ತಿಸಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸಹಕರಿಸಬೇಕೆಂದು ಎಂದು ಗೃಹ ಸಚಿವ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Formation of police team for action against Praveen killers Home minister said

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೆ ಮಾತನಾಡಿದ್ದೇನೆ. ಪ್ರವೀಣ ಕೊಲೆ ದುರುದೃಷ್ಟಕರ ಸಂಗತಿಯಾಗಿದ್ದು, ಕೃತ್ಯದ ಹಿಂದೆ ಹಲವು ಶಕ್ತಿಗಳ ಕೈವಾಡಿವಿದೆ ಎಂದು ಆರಗ ಜ್ಞಾನೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕರಾವಳಿ ಭಾಗದ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಕಗಳು ಕೊಲೆ ಮಾಡಿ ಪರಾರಿಯಾದ ಘಟನೆ ನಡೆದಿದೆ. ಪ್ರವೀಣ್ ದಕ್ಷಿಣ ಕನ್ನಡ ಜಿಲ್ಲೆ ಯುವ ಮೋರ್ಚಾದ ಕಾರ್ಯಾಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದರು ಅಂಗಡಿ ಮುಚ್ಚುವಾಗಿ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಪ್ರವೀಣ್ ಕೊಲೆಯನ್ನು ಖಂಡಿಸಿರುವ ಹಿಂದುಪರ ಸಂಘಟನೆಗಳು ಪುತ್ತೂರು, ಸುಳ್ಯಾ, ಬೆಳ್ಳಾರೆ, ಕಡಬ ಪಟ್ಟಣಗಳಲ್ಲಿ ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿವೆ. ಪದೇ ಪದೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಕಡಿವಾಣ ಹಾಕುವಲ್ಲಿ ಸರ್ಕಾರ, ಪೊಲೀಸ್‌ ಇಲಾಖೆ ವಿಫಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸಚಿವರ ಖಂಡನೆ:

ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಶ್ರೀ ಪ್ರವೀಣ್ ನೆಟ್ಟಾರು ಅವರ ಮೇಲಿನ ಹತ್ಯೆ ನಿಜಕ್ಕೂ ಖೇದಕರ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಈ ದುಷ್ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರು ಮುಲಾಜಿಲ್ಲದೆ ನಮ್ಮ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಅಮಾನವೀಯ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯವೆಸಗಿರುವ ದುರುಳರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವೀಣ್ ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಶಾಂತಿಕೋರಿ ಪ್ರಾರ್ಥಿಸುವೆ. ಓಂ ಶಾಂತಿ. ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಕೂ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ, ಹೇಯವಾದ ಕೃತ್ಯ. ಇಂತಹ ಅಮಾನವೀಯ ಮಟ್ಟಕ್ಕೆ ಇಳಿದ ದುಷ್ಕರ್ಮಿಗಳನ್ನು ಮಾನ್ಯ ಮುಖ್ಯಮಂತ್ರಿ ಶ್ರೀ @bsbommai ಸರ್ಕಾರ ಹೆಡೆಮುರಿ ಕಟ್ಟಲಿದೆ. ನಾಡಿನ ನೆಮ್ಮದಿಗೆ ಕೆಡುಕು ತಂದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ. ಪ್ರವೀಣ್ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಕೂ ಮಾಡಿದ್ದಾರೆ.

Recommended Video

Siddaramaiah ನಮ್ಮ ಮುಂದಿನ ಮುಖ್ಯ ಮಂತ್ರಿ !! *Politics | OneIndia Kannada

English summary
Praveen murder it is unfortunate. Formation of police team for action against Praveen killers Home minister Araga Jnanendra said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X