• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಾಂಗ್ರೆಸ್ ನಾಯಕರು ಚೀಲದಲ್ಲಿರುವ ಹಾವು ಹೊರ ತೆಗೆಯಲಿ: ಗೃಹ ಸಚಿವರ ಸವಾಲು!

|
Google Oneindia Kannada News

ಬೆಂಗಳೂರು, ನ. 11: ಬಿಟ್‌ಕಾಯಿನ್ ಹಗರಣ ರಾಜಕೀಯ ಕೆಸರೆರಚಾಟಕ್ಕೆ ನಾಂದಿ ಹಾಡಿದೆ. ಬಿಟ್ ಕಾಯಿನ್ ಅಕ್ರಮದ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ತಿರಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕರು ನಮ್ಮ ಚೀಲದಲ್ಲಿ ಹಾವಿದೆ, ಹೊರ ತೆಗೆಯುತ್ತೇವೆ ಎಂದು ಖೊಟ್ಟಿ ಹೇಳಿಕೆ ನೀಡುತ್ತಿದ್ದಾರೆ. ಅವರು ಧೈರ್ಯದಿಂದ ಹೊರಗೆ ಬಿಡಲಿ. ಆಗ ಅದು ಯಾರನ್ನು ಕಚ್ಚುತ್ತೋ ನೋಡೋಣ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೆ ಮಾತನಾಡಿದ ಅವರು, ಬಿಟ್ ಕಾಯಿನ್ ವಿಷಯವನ್ನು ಇಟ್ಟುಕೊಂಡು, ವಿರೋಧ ಪಕ್ಷದ ಕಾಂಗ್ರೆಸ್ ನಾಯಕರು ಅನಗತ್ಯ ಗೊಂದಲ ನಿರ್ಮಿಸುತ್ತಿದ್ದಾರೆ. ಸೂಕ್ತ ದಾಖಲೆ ಇದ್ದರೆ ತನಿಖಾಧಿಕಾರಿಗಳಿಗೆ ಒದಗಿಸಲಿ ಎಂದು ಸವಾಲು ಎಸೆದಿದ್ದಾರೆ. ಅಲ್ಲದೇ ಬಿಟ್‌ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಿಟ್ ಅಂಡ್ ರನ್ ಕೆಲಸ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದರು.

ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಹಿಂದೆ ಬಿಟ್ ಕಾಯಿನ್ ಅಕ್ರಮದ ವಾಸನೆ ! ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಹಿಂದೆ ಬಿಟ್ ಕಾಯಿನ್ ಅಕ್ರಮದ ವಾಸನೆ !

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಮಯದಲ್ಲಿಯೇ, ಆರೋಪಿ ಶ್ರೀಕಿಯನ್ನು, ಹೋಟೆಲೊಂದರಲ್ಲಿ ನಡೆದ ದಾಂಧಲೆ ಸಮಯದಲ್ಲಿ ಬಂಧಿಸಲಾಗಿತ್ತು, ಎಂದು ನೆನಪಿಸಿದ ಸಚಿವರು, ಶ್ರೀಕಿಯ ಸಹಚರರು ಯಾರು ಇದ್ದರು ಎಂದು ಕಾಂಗ್ರೆಸ್ ನಾಯಕರಿಗೆ ತಿಳಿದಿತ್ತು. ಕಾಂಗ್ರೆಸ್ ನಾಯಕರು ಬಿಟ್‌ಕಾಯಿನ್ ವಿಷಯದಲ್ಲಿ ರಾಜಕೀಯ ಬೆರೆಸದೆ, ತಮ್ಮಲ್ಲಿರುವ ದಾಖಲೆಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರು, ನಮ್ಮ ಚೀಲದಲ್ಲಿ ಹಾವಿದೆ, ಹೊರ ತೆಗೆಯುತ್ತೇವೆ ಎಂದು ಖೊಟ್ಟಿ ಮಾತನಾಡದೆ, ಧೈರ್ಯದಿಂದ ಹೊರಗೆ ಬಿಡಲಿ, ಆಗ ಅದು ಯಾರನ್ನು ಕಚ್ಚುತ್ತದೆ ನೋಡೋಣ ಎಂದು ಇದೇ ವೇಳೆ ಮಾರ್ಮಿಕವಾಗಿ ನುಡಿದರು.

ಮುಖ್ಯಮಂತ್ರಿಗಳ ದೆಹಲಿ ಭೇಟಿಗೆ, ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ, ರಾಜ್ಯದ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಹಿತದೃಷ್ಟಿ ಯಿಂದ ಹೋಗಿದ್ದಾರೆ. ಮುಖ್ಯಮಂತ್ರಿಗಳು ದೆಹಲಿಗೆ ಹೋಗುವುದು ಹಾಗೂ ನಾಯಕರನ್ನು ಭೇಟಿ ಮಾಡುವುದು, ಹೊಸದೇನು ಅಲ್ಲ. ಇದಕ್ಕೆ ಅನ್ಯ ಅರ್ಥಗಳನ್ನು ಕಲ್ಪಿಸುವುದು ಬೇಡ ಎಂದು ಅಭಿಪ್ರಾಯಪಟ್ಟರು.
ಬಿಟ್ ಕಾಯಿನ್ ಸಮರ:

ಕೇಂದ್ರದ ತನಿಖಾ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಬಿಟ್ಕಾಯಿನ್ ಅಕ್ರಮದ ಬಗ್ಗೆ ಪ್ರಾಥಮಿಕ ವರದಿ ಸಿದ್ದಪಡಿಸಿ ಪ್ರಧಾನಿಗಳ ಕಾರ್ಯಾಲಯಕ್ಕೆ ರವಾನಿಸಿದ್ದಾರೆ ಎಂಬ ವಿಚಾದ ಬೆನ್ನಲ್ಲೇ ಈ ಪ್ರಕರಣ ದೊಡ್ಡ ಚರ್ಚೆ ಹುಟ್ಟು ಹಾಕಿದೆ. ರಾಜಕೀಯ ಕೆಸೆರೆಚಾಟಕ್ಕೆ ನಾಂದಿ ಹಾಡಿದೆ. ಬಿಟ್ ಕಾಯಿನ್ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಐದು ವರ್ಷವಿತ್ತು. ಅವತ್ತು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದರೆ, ಬಿಟ್ ಕಾಯಿನ್ ಪ್ರಕರಣ ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಈಗ ಬಿಟ್ ಕಾಯಿನ್ ಬಗ್ಗೆ ಜನರ ಮುಂದೆ ಹೇಳಿಕೆ ನೀಡುತ್ತಿದ್ದಾರೆ. ಅವರೇ ಮುಖ್ಯಮಂತ್ರಿಯಾಗಿದ್ದ ವೇಳೆಯೂ ಬಿಟ್ ಕಾಯಿನ್ ಅಕ್ರಮದ ಬಗ್ಗೆ ಏನೂ ಮಾಡಲಿಲ್ಲ. ಇವಾಗ ಜನರ ಮುಂದೆ ಹೋಗಿ ಹೇಳಿಕೆ ನೀಡುವ ಬದಲು ಅವತ್ತೇ ತಡೆಯಬಹುದಿತ್ತು ಅಲ್ಲವೇ ? ಹಗರಣಗಳ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಕಿತ್ತಾಡುತ್ತಿವೆ ಎಂದು ಮಾಜಿ ಸಿಎಂ ಕುಮರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿ ನಾಯಕರು ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಂತೂ ಬಿಟ್ ಕಾಯಿನ್ ಪ್ರಕರಣ ತನಿಖೆ ನಡೆಯುತ್ತದೋ ಇಲ್ಲವೋ ಅದರ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಕೆಸರೆರಚಾಟ ಮಾತ್ರ ಪರಕಾಷ್ಠೆ ತಲುಪಿದೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗಲಷ್ಟೇ ಅಸಲಿ ಸತ್ಯ ಹೊರ ಬರಲಿದೆ.

   ಬಿಟ್ ಕಾಯಿನ್ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ!! | Oneindia Kannada
   English summary
   Congress leaders remove snake from bag: Home Minister's Araga Jnanendra challenge know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X