ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Santro Ravi: ತಪ್ಪಿತಸ್ಥನಾಗಿದ್ದರೆ ಸೂಕ್ತ ಕಾನೂನು ಕ್ರಮ, ಆರಗ ಜ್ಞಾನೇಂದ್ರ

|
Google Oneindia Kannada News

ಬೆಂಗಳೂರು, ಜನವರಿ 13: ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದು, ತಪ್ಪಿತಸ್ಥನಾಗಿದ್ದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆಯನ್ನ ಬಿಡುಗಡೆ ಮಾಡಿದ ಅವರು, ವಂಚಕ ಎನ್ನಲಾದ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆತನ ಬಂಧನದಿಂದ ಎಲ್ಲಾ ಊಹಾ ಪೋಹಗಳಿಗೆ ತೆರೆ ಬಿದ್ದಂತಾಗಿದೆ ಎಂದಿದ್ದಾರೆ.

Santro Ravi arrest : 11 ದಿನಗಳ ಬಳಿಕ ಗುಜರಾತ್‌ನಲ್ಲಿ ಸ್ಯಾಂಟ್ರೊ ರವಿ ಬಂಧನ Santro Ravi arrest : 11 ದಿನಗಳ ಬಳಿಕ ಗುಜರಾತ್‌ನಲ್ಲಿ ಸ್ಯಾಂಟ್ರೊ ರವಿ ಬಂಧನ

ಇನ್ನೂ ಕಳೆದ ಹನ್ನೊಂದು ದಿನಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಪ್ಪಿಸಿ ಕೊಳ್ಳುತ್ತಿದ್ದ ಸ್ಯಾಂಟ್ರೋ ರವಿ ವಿರುದ್ಧ ಇರುವ ಆರೋಪಗಳ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ ತಪ್ಪಿಸ್ಥಸ್ಥನಾಗಿದ್ದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ಅಲ್ಲದೆ ಸಂತ್ರಸ್ತ ವ್ಯಕ್ತಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಕ್ರಮ ವಹಿಸುತ್ತಾರೆ ಎಂದೂ ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಟ್ರೋ ರವಿ ಬಂಧನ ಆಗಿದೆ. ಕಳೆದ 11 ದಿನಗಳಿಂದ ಆತ ತಲೆ ಮರೆಸಿಕೊಂಡಿದ್ದ. ಆತನ ಬಂಧನಕ್ಕೆ ವಿಶೇಷ ಪೊಲೀಸ್ ತಂಡವನ್ನು ರಚನೆ ಮಾಡಲಾಗಿತ್ತು.

Home Minister Araga Jnanendra Reaction to Santro Ravi Arrest by Karnataka Police

ಕರ್ನಾಟಕದ ಪೊಲೀಸರು ಸ್ಯಾಂಟ್ರೊ ರವಿಯನ್ನು 11 ದಿನಗಳ ಬಳಿಕ ಗುಜರಾತ್‌ನಲ್ಲಿ ಬಂಧಿಸಿದ್ದಾರೆ. ಶುಕ್ರವಾರ ಸ್ಯಾಂಟ್ರೊ ರವಿಯನ್ನು ವಡೋದರಾದಲ್ಲಿ ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು.

ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ವಿರುದ್ಧ ದೂರು ದಾಖಲಾದ ಬಳಿಕ ಆತ ಪರಾರಿಯಾಗಿದ್ದ. ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದ ರವಿ ಬಂಧಿಸುವುದು ಪೊಲೀಸರಿಗೆ ಸವಾಲಾಗಿತ್ತು. ನಿರೀಕ್ಷಣಾ ಜಾಮೀನಿಗೂ ಸಹ ಸ್ಯಾಂಟ್ರೊ ರವಿ ಅರ್ಜಿ ಹಾಕಿದ್ದ. ಗುರುವಾರ ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಯಾಂಟ್ರೊ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿತ್ತು. ಮಂಡ್ಯದ ಫಾರಂ ಹೌಸ್‌ನಲ್ಲಿದ್ದ ಸ್ಯಾಂಟ್ರೊ ರವಿ ಅಲ್ಲಿಂದ ಪುಣೆಗೆ ತೆರಳಿದ್ದ. ಅಲ್ಲಿಂದ ಗುಜರಾತ್‌ಗೆ ಪರಾರಿಯಾಗಿದ್ದ. ಮೊಬೈಲ್ ಕರೆಗಳ ಮಾಹಿತಿ ಅನ್ವಯ ಕಾರ್ಯಾಚರಣೆ ನಡೆಸಿ ಪೊಲೀಸರ ವಿಶೇಷ ತಂಡ ಗುಜರಾತ್‌ನಲ್ಲಿ ಬಂಧಿಸಿದೆ.

Home Minister Araga Jnanendra Reaction to Santro Ravi Arrest by Karnataka Police

ಮೈಸೂರು, ರಾಮನಗರ ಪೊಲೀಸರು ವಿಶೇಷ ತಂಡಗಳನ್ನು ರಚನೆ ಮಾಡಿಕೊಂಡು ಸ್ಯಾಂಟ್ರೊ ರವಿಗಾಗಿ ಹುಡುಕಾಟ ನಡೆಸಿದ್ದರು. ಗುರುವಾರ ರಾಮನಗರದಲ್ಲಿ ರವಿ ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು.

ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ವಿರುದ್ಧ ದೂರು ದಾಖಲಾದ ಬಳಿಕ ಆತ ಪರಾರಿಯಾಗಿದ್ದ. ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದ ರವಿ ಬಂಧಿಸುವುದು ಪೊಲೀಸರಿಗೆ ಸವಾಲಾಗಿತ್ತು. ನಿರೀಕ್ಷಣಾ ಜಾಮೀನಿಗೂ ಸಹ ಸ್ಯಾಂಟ್ರೊ ರವಿ ಅರ್ಜಿ ಹಾಕಿದ್ದ. ಗುರುವಾರ ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಯಾಂಟ್ರೊ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿತ್ತು. ಮಂಡ್ಯದ ಫಾರಂ ಹೌಸ್‌ನಲ್ಲಿದ್ದ ಸ್ಯಾಂಟ್ರೊ ರವಿ ಅಲ್ಲಿಂದ ಪುಣೆಗೆ ತೆರಳಿದ್ದ. ಅಲ್ಲಿಂದ ಗುಜರಾತ್‌ಗೆ ಪರಾರಿಯಾಗಿದ್ದ. ಮೊಬೈಲ್ ಕರೆಗಳ ಮಾಹಿತಿ ಅನ್ವಯ ಕಾರ್ಯಾಚರಣೆ ನಡೆಸಿ ಪೊಲೀಸರ ವಿಶೇಷ ತಂಡ ಗುಜರಾತ್‌ನಲ್ಲಿ ಬಂಧಿಸಿದೆ.

English summary
The State police have succeeded in arresting the alleged fraudster, Santro Ravi. With his arrest, all speculations have been put to rest Araga Jnanendra said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X