ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ಧರಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಗೃಹ ಸಚಿವ

|
Google Oneindia Kannada News

ಬೆಂಗಳೂರು, ಮಾರ್ಚ್ 28: ರಾಜ್ಯದಲ್ಲಿ ಇಂದಿನಿಂದ (ಸೋಮವಾರ) ಹತ್ತನೇ ತರಗತಿಯ ಪರೀಕ್ಷೆಗಳು ಪ್ರಾರಂಭವಾಗಿದ್ದು, ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸುವವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಯಾರಾದರೂ ಹಿಜಾಬ್ ನಿಯಮಗಳನ್ನು ಉಲ್ಲಂಘಿಸಿದರೆ ಕ್ರಮ ಎದುರಿಸಬೇಕಾಗುತ್ತದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಎದುರಿಸಬೇಕಾಗುತ್ತದೆ. ನಾವು ಅದರಲ್ಲಿ ರಾಜಿಯಾಗುವುದಿಲ್ಲ. ಪ್ರತಿಯೊಬ್ಬರೂ ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಇದೇ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, "ಸರಕಾರದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಸ್ವಾಭಾವಿಕವಾಗಿ ಕ್ರಮ ತೆಗೆದುಕೊಳ್ಳುತ್ತಾರೆ. ಯಾವುದೇ ಮಗು ಅಂತಹ ವಿಷಯಗಳಿಗೆ ಅವಕಾಶ ನೀಡುವುದಿಲ್ಲ ಎಂಬ ವಿಶ್ವಾಸವಿದೆ,'' ಎಂದು ಹೇಳಿದರು.

Home Minister Araga Jnanendra Warned of Strict Action If Wearing Hijab In SSLC Exam Centers

ರಾಜ್ಯದಾದ್ಯಂತ 3,440 ಪರೀಕ್ಷಾ ಕೇಂದ್ರಗಳಲ್ಲಿ 48,000ಕ್ಕೂ ಹೆಚ್ಚು ಪರೀಕ್ಷಾ ಕೊಠಡಿಗಳಲ್ಲಿ 8.74 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಏಪ್ರಿಲ್ 11 ರಂದು ಕೊನೆಯ ಪರೀಕ್ಷೆ ನಡೆಯಲಿದೆ.

ಆದಾಗ್ಯೂ, ಕೆಲವು ಮುಸ್ಲಿಂ ಹುಡುಗಿಯರು ಪರೀಕ್ಷಾ ಕೇಂದ್ರದೊಳಗೆ ಹಿಜಾಬ್, ಇಸ್ಲಾಮಿಕ್ ಶಿರಸ್ತ್ರಾಣದ (ಸ್ಕಾರ್ಫ್) ನಿಷೇಧವನ್ನು ವಿರೋಧಿಸಿ ಪರೀಕ್ಷೆಗಳನ್ನು 'ಬಹಿಷ್ಕರಿಸುವ' ಬೆದರಿಕೆ ಹಾಕಿದ್ದರು. ಕರ್ನಾಟಕ ಹೈಕೋರ್ಟಿನ ಪೂರ್ಣ ಪೀಠವು ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಎಲ್ಲರೂ ಏಕರೂಪದ ಉಡುಗೆ ನಿಯಮವನ್ನು ಪಾಲಿಸಬೇಕು ಎಂದು ತೀರ್ಪು ನೀಡಿತ್ತು.

ಈ ವಿಚಾರವಾಗಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಹತ್ತನೇ ತರಗತಿ ಪರೀಕ್ಷೆ ಬರೆದು ತೇರ್ಗಡೆಯಾಗಬೇಕು. ಇದು ಪ್ರಮುಖ ಪರೀಕ್ಷೆಯಾಗಿದ್ದು, ನಾನು ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತೇನೆ. ಕೋವಿಡ್ -19 ದೃಷ್ಟಿಯಿಂದ, ನಾವು ಈ ವರ್ಷ ಸುಗಮವಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಪ್ರತಿಯೊಬ್ಬರೂ ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾಗಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬುದು ನಮ್ಮ ಆಸೆ,'' ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೂಡ ಎಲ್ಲರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕು. ಎಲ್ಲಾ ಧರ್ಮದ ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಬದಿಗಿಟ್ಟು ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆಗೆ ಗೈರಾಗಬೇಡಿ ಎಂದು ಜೆಡಿ(ಎಸ್) ನಾಯಕ ಹೇಳಿದ್ದಾರೆ.

Recommended Video

ಥಿಯೇಟರ್ನಲ್ಲಿ ಫಿಲಂ ನೋಡ್ತಿದ್ದ ವ್ಯಕ್ತಿಗೆ ಹಾರ್ಟ್ ಅಟ್ಯಾಕ್.. ನಂತರ ನಡೆದಿದ್ದು ಪವಾಡ!!| Oneindia Kannada

English summary
Those who violating the HC Ruling will not be allowed to write the SSLC exam, Home Minister Araga Jnanendra said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X