ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಲಾಕ್‌ಡೌನ್; ಜನರಿಗೆ ಗೃಹ ಸಚಿವರ ಸೂಚನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 27: ಮಂಗಳವಾರ ರಾತ್ರಿಯಿಂದ ರಾಜ್ಯದಲ್ಲಿ ಆರಂಭವಾಗಲಿರುವ 14 ದಿನಗಳ ಕರ್ಫ್ಯೂ ಸಂದರ್ಭ ಜನರು ಸ್ವಯಂ ನಿಯಂತ್ರಣ ಮಾಡಿಕೊಂಡರೆ ಕೊರೊನಾ ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜನರ ಸಂಪೂರ್ಣ ಸಹಕಾರ ಬಯಸುತ್ತೇನೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಈ ಬಿಗಿ ಕ್ರಮಗಳನ್ನು ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ರಾಜ್ಯದ ಜನರ ಮೇಲಿದೆ ಎಂದರು. ಕರ್ನಾಟಕದಲ್ಲಿ ಏಪ್ರಿಲ್ 27ರ ರಾತ್ರಿಯಿಂದ ಲಾಕ್‌ಡೌನ್ ವಿಧಿಸಲಾಗಿದ್ದು, ಅಗತ್ಯ ಬಿದ್ದರೆ ಮುಂದುವರೆಸಲಾಗುವುದು ಎಂದು ಸೋಮವಾರ ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮುಂದೆ ಓದಿ...

"ಜನರು ಸ್ವಯಂ ಪ್ರೇರಣೆಯಿಂದ ಸ್ಪಂದಿಸಬೇಕಿದೆ"

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಬಿಗಿ ಕ್ರಮ ಕೈಗೊಳ್ಳುವ ನಿರ್ಧಾರ ಮಾಡಲಾಗಿದೆ. ಇದಕ್ಕೆ ಜನ ಸ್ವಯಂ ಪ್ರೇರಣೆಯಿಂದ ಸ್ಪಂದಿಸಬೇಕಾದ ಅವಶ್ಯಕತೆಯಿದೆ. ಸ್ವಯಂ ನಿಯಂತ್ರಣದಲ್ಲಿಯೇ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಕೊರೊನಾ ಕರ್ಫ್ಯೂ; ಪೊಲೀಸರಿಗೆ ಗೃಹಸಚಿವರ ಕಟ್ಟುನಿಟ್ಟಿನ ಸೂಚನೆಕೊರೊನಾ ಕರ್ಫ್ಯೂ; ಪೊಲೀಸರಿಗೆ ಗೃಹಸಚಿವರ ಕಟ್ಟುನಿಟ್ಟಿನ ಸೂಚನೆ

"ಪ್ರತಿಯೊಬ್ಬರೂ ಜಾಗೃತರಾಗಿರಬೇಕು"

ಈ 14 ದಿನಗಳ ಕಾಲ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ನಮ್ಮ ಆರೋಗ್ಯದ ಜೊತೆ ಇತರರ ಆರೋಗ್ಯವೂ ಮುಖ್ಯ ಎಂಬುದನ್ನು ಮನಗಾಣಬೇಕು. ಸರ್ಕಾರ ಹೇರಿರುವ ನಿರ್ಬಂಧಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ಬಹಳ ಅವಶ್ಯವಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ಫ್ಯೂ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

 ಕಠಿಣ ಕ್ರಮ ಕೈಗೊಳ್ಳಲು ಸೂಚನೆ

ಕಠಿಣ ಕ್ರಮ ಕೈಗೊಳ್ಳಲು ಸೂಚನೆ

ಮಹಾರಾಷ್ಟ್ರ ಸರ್ಕಾರ ಬಿಗಿ ಕ್ರಮ ಕೈಗೊಂಡಿದೆ. ಆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ನಮ್ಮ ಮುಖ್ಯಮಂತ್ರಿಗಳು ಬಿಗಿ ಕ್ರಮದ ತೀರ್ಮಾನ ಮಾಡಿದ್ದಾರೆ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಕರ್ಫ್ಯೂ ಸಂದರ್ಭದಲ್ಲಿ ವಿನಾಕಾರಣ ಹೊರಗೆ ಓಡಾಡುವ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಉದ್ದೇಶಪೂರ್ವಕವಾಗಿ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡುವ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

Recommended Video

ತಜ್ಞರ ಅಭಿಪ್ರಾಯ ತಗೊಂಡು lock down ಮಾಡಿರೋದು! | Oneindia Kannada
 ಅಗತ್ಯ ಸೇವೆಗಳಿಗೆ ಬಿಎಂಟಿಸಿ ಬಸ್ ವ್ಯವಸ್ಥೆ

ಅಗತ್ಯ ಸೇವೆಗಳಿಗೆ ಬಿಎಂಟಿಸಿ ಬಸ್ ವ್ಯವಸ್ಥೆ

ಬೆಂಗಳೂರು ನಗರದಲ್ಲಿ ಅಗತ್ಯ ಸೇವೆಗಳಿಗಾಗಿ ಬಿಎಂಟಿಸಿಯ ಕೆಲ ಬಸ್ಸುಗಳ ವ್ಯವಸ್ಥೆಯನ್ನು ಮಾಡುತ್ತೇವೆ. ಔಷಧ, ಆಸ್ಪತ್ರೆ, ತರಕಾರಿ, ಕೆಲಸಕ್ಕೆ ಹೋಗುವವರಿಗೆ ನಿಯಮಿತವಾಗಿ ಕೆಲ ಬಸ್ಸುಗಳ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಭಾನುವಾರಕ್ಕೆ ಹೋಲಿಸಿದರೆ ಸ್ವಲ್ಪ ಪ್ರಮಾಣದಲ್ಲಿ ತಗ್ಗಿದೆ. 34 ರಿಂದ ಸೋಂಕಿತ ಪ್ರಕರಣಗಳ ಸಂಖ್ಯೆ 29 ಸಾವಿರಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ 24 ಗಂಟೆಗಳಲ್ಲಿ 29744 ಮಂದಿಗೆ ಕೊರೊನಾ ವೈರಸ್ ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 201 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 10663 ಸೋಂಕಿತರು ಗುಣಮುಖರಾಗಿದ್ದಾರೆ.

English summary
To face corona virus, people should self control says Home minister Basavaraj Bommai ahead of corona lockdown from april 27
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X