‘ಅವರು ಒಂದು ಮರ್ಡರ್ ಮಾಡಿದ್ರೆ ಇವರು ಒಂದು ಮರ್ಡರ್ ಮಾಡ್ತಿದ್ದಾರೆ’; ಮಂಗಳೂರು ಹತ್ಯೆ ಬಗ್ಗೆ ಪರಮೇಶ್ವರ್‌ ರಿಯಾಕ್ಷನ್

ಬೆಂಗಳೂರು,ಮೇ 29:ಮಂಗಳೂರು ಘಟನೆಯನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದರು. ಪ್ರತಿ ಭಾರಿ ಈ ರೀತಿ ಆದ್ರೆ ಕಣ್ಣು ಮುಚ್ಚಿ ಕೂರೋಕೆ ಆಗೋದಿಲ್ಲ. ಕಳೆದ‌ ಭಾರಿ ಹತ್ಯೆಯಾದಾಗ ನಾನು ಅಲ್ಲಿಗೆ ಹೋಗಿದ್ದೆ. ‌ಆಗ ಆ್ಯಂಟಿ‌ಕಮ್ಯುನಲ್‌ ವಿಂಗ್ ಮಾಡುವ ಬಗ್ಗೆ ಹೇಳಿದ್ದೆ. ಈಗ ಅದಕ್ಕೆ ಒಂದು ಸರ್ಕಾರಿ ಆದೇಶ ಕೂಡ ಹೊರಡಿಸಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು.

ಮಂಗಳೂರಲ್ಲಿ ದಿನೇ ದಿನೇ ಉದ್ವಿಗ್ನ ಪರಿಸ್ಥಿತಿ ನಿರ್ಮಾವಾಗುತ್ತಿರುವುದರಿಂದ ತಕ್ಷಣ ಆ್ಯಂಟಿ ಕಮ್ಯುನಲ್ ವಿಂಗ್ ಜಾರಿ ಮಾಡುವಂತೆ ಸರ್ಕಾರ ಆದೇಶ ನೀಡಿದೆ. ಸರ್ಕಾರ ಇಂತಹ ಘಟನೆಗಳನ್ನ ಹತ್ತಿಕ್ಕದೇ ಸುಮ್ಮನೇ ಬಿಡೋದಿಲ್ಲ. ಇತ್ತೀಚಿನ ದಿನಗಳಲ್ಲಿ ಅವರು ಒಂದು ಮರ್ಡರ್ ಮಾಡಿದ್ರೆ ಇವರು ಒಂದು ಮರ್ಡರ್ ಮಾಡೋದು ನಡೀತಿದೆ. ವೈಯಕ್ತಿಕ ದ್ವೇಷ, ಗಲಾಟೆಗಳೇ ಇದಕ್ಕೆಲ್ಲಾ ಕಾರಣವಾಗ್ತಿದೆ. ಆ್ಯಂಟಿ‌ ನಕ್ಸಲ್ ಫೋರ್ಸ್ ನ ಅರ್ಧ ಭಾಗವನ್ನ ಆ್ಯಂಟಿ ಕಮ್ಯುನಲ್ ವಿಂಗ್ ಗೆ ಸೇರಿಸಿ ಮಾಡ್ತಿದೇವೆ.

Home Minister Dr G Parameshwar s reaction on the Mangalore murder

ಇದೀಗ ಶಾಂತಿ ಸಭೆ ಮಾಡೋಕೆ ಹೇಳಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆ ಬಹಳ ವಿದ್ಯಾವಂತರು ಒಳ್ಳೆಯ ಜನ ಇರುವ ಜಿಲ್ಲೆ. ಇಂತಹ ಕಡೆ ಈ ರೀತಿ ಘಟನೆಗಳು ನಡೆಯುತ್ತಿರುವುದು ಸರಿಯಲ್ಲ. ಜನಪ್ರತಿನಿಧಿಗಳು ಕೂಡ ಪ್ರಚೋದನೆ ಮಾಡಬಾರದು. ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು.

ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ. ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.‌

ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು‌ ತಿಳಿಸಿದರು. ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ ಎಂದು ಹೇಳಿದರು.

ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ? ಇದನ್ನು ಸರ್ಕಾರ ನೋಡಿಕೊಂಡು ಸುಮ್ಮನೆ ಇರುವುದಿಲ್ಲ. ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಅಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+