ಗೃಹ ಸಚಿವ ಜಿ. ಪರಮೇಶ್ವರ್ ರಾಜೀನಾಮೆ ವಿಚಾರ: "ನನ್ನ ರಾಜಕೀಯ ಕೊರಟಗೆರೆ ಜನತೆಗೆ ಬಿಟ್ಟಿದ್ದೇನೆ"
ರಾಜೀನಾಮೆ ಕೊಡುವುದಾಗಿ ಹೇಳಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಇದೀಗ ಮಾತ್ತೊಮ್ಮೆ ಮಾತನಾಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ರಾಜೀನಾಮೆ ಕೊಡುವ ಬಗ್ಗೆ ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಅವರು ಈ ವಿಷಯದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ರಾಜೀನಾಮೆ ಕೊಡುವುದಾಗಿ ಯಾಕೆ ಎಂದರೆ ಅವರು ವಿವರಣೆ ಕೊಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ಬೆಳವಣಿಗೆಗಳು ನಡೆದಿವೆ. ಈ ರೀತಿ ಇರುವಾಗಲೇ ಅವರು ಜಿ. ಪರಮೇಶ್ವರ್ ಅವರ ವಿಚಾರವೂ ಭಾರೀ ಚರ್ಚೆಯಾಗಿತ್ತು. ಇದೀಗ ಈ ವಿಷಯದಲ್ಲಿ ಮತ್ತೊಂದು ಟ್ವಿಸ್ಟ್ ಬಂದಿದೆ.
ಜಿ. ಪರಮೇಶ್ವರ್ ಅವರು ವಿವಿಧ ವಿಷಯಗಳ ಬಗ್ಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಮುಖ್ಯಮಂತ್ರಿ ಯಾರಾಗಲಿದ್ದಾರೆ ನಿಮಗೆ ಮುಖ್ಯಮಂತ್ರಿ ಆಗುವ ಆಸೆ ಇದೆಯೇ ಎನ್ನುವ ಬಗ್ಗೆಯೂ ಅವರು ಮಾತನಾಡಿದ್ದಾರೆ. ನಾನು ಅದ್ಯಾವುದರ ಬಗ್ಗೆಯೂ ನಾನು ಮಾತನಾಡುವುದಿಲ್ಲ. ಮುಖ್ಯಮಂತ್ರಿಗಳ ವಿಚಾರ, ಕೆಪಿಸಿಸಿ ಅಧ್ಯಕ್ಷರ ವಿಚಾರದಲ್ಲಿ ಯಾವುದನ್ನು ಬಹಿರಂಗವಾಗಿ ಮಾತನಾಡುವುದಿಲ್ಲ. ನಮ್ಮ ಅನಿಸಿಕೆಗಳನ್ನು ಹೈಕಮಾಂಡ್ ಮುಂದೆ ಹೇಳುವ ರೂಢಿ ನಮ್ಮ ಪಕ್ಷದಲ್ಲಿದೆ. ಇದನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಮಾಡುತ್ತಾರೆ. ನಾನು ಸೇರಿದಂತೆ ಎಲ್ಲರು ಮಾಡುತ್ತೇವೆ ಎಂದಿದ್ದಾರೆ.

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಮೈಸೂರು ಉದಯಗಿರಿ ಗಲಾಟೆಗೆ ಯಾರು ಕಾರಣಕರ್ತರಾಗಿದ್ದರು ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಬಿಜೆಪಿಯವರು ಘಟನೆಯನ್ನು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಂಡು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬಿಜೆಪಿಯವರು ಮೈಸೂರಿನಲ್ಲಿ ಇಂದು ಪ್ರತಿಭಟನೆ ಮಾಡಲು ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದ್ದರು. ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವಿಚಾರಚಾಗಿ ಅನುಮತಿ ಕೋರಿ ಹೈಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಬರುತ್ತದೆಯೇ ನೋಡಬೇಕು. ಮೈಸೂರು ಗಲಾಟೆ ವಿಚಾರದಲ್ಲಿ ಹೆಚ್ಚು ರಾಜಕೀಯ ಮಾಡುವ ಬದಲು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮಗೆ ಅವಕಾಶ ಮಾಡಿದರೆ ಒಳ್ಳೆಯದು. ಅದನ್ನು ಬಿಟ್ಟು ರಾಜಕೀಯ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಎಚ್ಚರಿಸಿದರು.
ಮಂಗಳೂರು ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಡ್ರಗ್ಸ್ ಪೂರೈಕೆ ಮಾಡಿದವರು ಯಾರು? ಹೇಗೆ ಪೂರೈಕೆಯಾಗಿದೆ ಎಂಬುದನ್ನು ತನಿಖೆ ನಡೆಸಲಿದ್ದಾರೆ. ಅಕ್ರಮ ಚಟುವಟಿಕೆಗಳು ಕಂಡುಬಂದಾಗಲೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಮಂಗಳೂರು ಹೊಸ ಜೈಲು ಕಟ್ಟಡ ನಿರ್ಮಾಣ ನಡೆಯುತ್ತಿದೆ. ಪೂರ್ಣಗೊಂಡ ಬಳಿಕ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.
ಪ್ರತಿ ಸಲ ಗಡಿಭಾಗದಲ್ಲಿ ಭಾಷಾ ಆಧಾರದ ಮೇಲೆ ಆಗುವ ಗಲಾಟೆ ವೇಳೆ ಬಹಳ ಎಚ್ಚರಿಕೆಯಿಂದ ಮಹಾರಾಷ್ಟ್ರದವರು ನಡೆದುಕೊಳ್ಳಬೇಕು. ಅದನ್ನು ಹೆಚ್ಚು ಬೆಳೆಯಲು ಬಿಡಬಾರದು. ನಮ್ಮಲ್ಲಿ ಅಂತಹ ಪ್ರಕರಣಗಳು ಆದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮಹಾರಾಷ್ಟ್ರದವರು ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಎಚ್ಚರಿಸಿದರು.
ದೆಹಲಿ ಪ್ರವಾಸ ಹಾಗೂ ರಾಜೀನಾಮೆ ವಿಚಾರ: ಇನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ದೆಹಲಿ ಪ್ರವಾಸ ಹಾಗೂ ತಮ್ಮ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸ ಕೈಗೊಳ್ಳುತ್ತಿರುವುದು ರಾಜಕೀಯವಲ್ಲ. ಅನೇಕ ಬಾರಿ ಕೆಲಸ ಕಾರ್ಯಗಳ ಕಾರಣಕ್ಕೆ ದೆಹಲಿಗೆ ಹೋಗುತ್ತಾರೆ. ನಾನು ಒಂದು ವರ್ಷದ ನಂತರ ದೆಹಲಿಗೆ ಹೋಗಿದ್ದೆ. ನಾನು ಖಾಸಗಿ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ ಅಂತ ಈಗಾಗಲೇ ಹೇಳಿದ್ದೇನೆ. ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ಭೇಟಿ ನೀಡುವುದು ಸಹಜವಾದ ಪ್ರಕ್ರಿಯೆ. ಇದನ್ನು ಬೇರೆ ರೀತಿಯಾಗಿ ಅರ್ಥೈಸಿಕೊಳ್ಳುವುದರಿಂದ ಪ್ರಯೋಜನವಿಲ್ಲ ಎಂದಿದ್ದಾರೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು ಕೊರಟಗೆರೆಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುವಾಗ ಅವರ ಅನಿಸಿಕೆ ಆಧಾರದ ಮೇಲೆ ಮಾತನಾಡಿದ್ದೇನೆ. ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯತೆ ಇಲ್ಲ. ಇದರಿಂದ ಯಾವ ಸಂಚಲನ ಮಾಡಬೇಕಾದ ಅಗತ್ಯವಿಲ್ಲ. ನನ್ನ ರಾಜಕೀಯದ ವಿಚಾರ ಕೊರಟಗೆರೆ ಜನತೆಗೆ ಬಿಟ್ಟಿರುವುದು. ಕೊರಟಗೆರೆ ಜನ ನನ್ನನ್ನು ಆರಿಸಿದ್ದಾರೆ. ಅವರ ಏನು ಆಪೇಕ್ಷೆ ಪಡುತ್ತಾರೆ, ಅದನ್ನು ಮಾತಾಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.












Click it and Unblock the Notifications